ಚಿರಂಜೀವಿ ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ ಸಹೋದರ ಪವನ್ ಕಲ್ಯಾಣ್

ಟಾಲಿವುಡ್ ಮೆಗಾಸ್ಟಾರ್ ಚಿರಂಜೀವಿಗೆ ಕೊರೊನಾ ಪಾಸಿಟಿವ್ ಬಂದಿದ್ದು, ಹೋಮ್ ಕ್ವಾರಂಟೈನ್ ನಲ್ಲಿದ್ದಾರೆ. ಮೆಗಾ ಸ್ಟಾರ್ ಬೇಗ ಗುಣಮುಖರಾಗಲಿ ಎಂದು ಕೋಟ್ಯಂತರ ಅಭಿಮಾನಿಗಳು ಪ್ರಾರ್ಥನೆ ಮಾಡುತ್ತಿದ್ದಾರೆ. ಇದೀಗ ಚಿರಂಜೀವಿ ಸಹೋದರ ನಟ ಮತ್ತು ರಾಜಕಾರಣಿ ಪವನ್ ಕಲ್ಯಾಣ್, ಅಣ್ಣ ಚಿರಂಜೀವಿ ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಪವನ್ ಕಲ್ಯಾಣ್, ಅಣ್ಣನಿಗೆ ಕೊರೊನಾ ಪಾಸಿಟಿವ್ ಬಂದಿರುವುದು ಬೇರಸತಂದಿದೆ ಎಂದು ಹೇಳಿದ್ದಾರೆ. ತೆಲುಗಿನಲ್ಲಿ ಪತ್ರ ಬರೆದಿರುವ ಪವನ್ ಕಲ್ಯಾಣ್, 'ಲಾಕ್ ಡೌನ್ ಪ್ರಾರಂಭವಾದಾಗಿನಿಂದ ಚಿರಂಜೀವಿ ಕೊರೊನಾ ವೈರಸ್ ಸಂಬಂಧಿತ ಮುನ್ನೆಚ್ಚರಿಕೆಗಳನ್ನು ಗಮನಿಸುತ್ತಿದ್ದಾರೆ. ಅಗತ್ಯವಿರುವವರಿಗೆ ಸಹಾಯ ಮಾಡಿದ್ದಾರೆ. ಚಾರಿಟಿ ಮೂಲಕ ಸಾಕಷ್ಟು ಜನರಿಗೆ ನೆರವಾಗಿದ್ದಾರೆ' ಎಂದಿದ್ದಾರೆ.

'ಕೊರೊನಾ ವೈರಸ್ ವಿರುದ್ಧ ಎಚ್ಚರಿಕೆ ವಹಿಸಲು ಅವರು ಜಾಗೃತಿ ವಿಡಿಯೋಗಳನ್ನು ಸಹ ಮಾಡಿದ್ದಾರೆ. ಅಣ್ಣನಿಗೆ ಕೊರೊನಾ ಪಾಸಿಟಿವ್ ಬಂದಿರುವುದು ಬೇಸರ ತಂದಿದೆ. ಅವರಿಗೆ ಯಾವುದೆೇ ರೋಗ ಲಕ್ಷಣಗಳು ಇಲ್ಲ. ಆದರೆ ಪರೀಕ್ಷೆ ಬಳಿಕ ಪಾಸಿಟಿವ್ ಇರುವುದು ಗೊತ್ತಾಗಿದೆ.' ಎಂದು ಹೇಳಿದ್ದಾರೆ.

Pawan Kalyan Wishes His Brother Chiranjeevi Speedy Recovery From Covid 19

'ಸಾಕಷ್ಟು ಪ್ರಯತ್ನ ನಡೆಯುತ್ತಿದೆ. ಈ ಪ್ರಯತ್ನಗಳು ಸಕರಾತ್ಮಕ ಫಲಿತಾಂಶಕ್ಕೆ ಕಾರಣವಾಗುತ್ತೆ ಮತ್ತು ಶೀಘ್ರದಲ್ಲೇ ನಮಗೆ ಲಸಿಕೆ ಸಿಗಲಿದೆ ಎಂದು ಭಾವಿಸುತ್ತೇನೆ' ಎಂದಿದ್ದಾರೆ.

ನಟ ಚಿರಂಜೀವಿ ಆಚಾರ್ಯ ಸಿನಿಮಾದ ಚಿತ್ರೀಕರಣಕ್ಕೆ ಹೊರಡಲು ಸಿದ್ಧರಾಗಿದ್ದರು. ಆದರೆ ಚಿತ್ರೀಕರಣ ಪ್ರಾರಂಭ ಮಾಡುವ ಮೊದಲು ಚಿರಂಜೀವಿಗೆ ಕೊರೊನಾ ವೈರಸ್ ಪಾಸಿಟಿವ್ ಬಂದಿದೆ. ಈ ಬಗ್ಗೆ ಮಗಾ ಸ್ಟಾರ್ ಟ್ವೀಟ್ ಮಾಡಿ, ಚಿತ್ರೀಕರಣಕ್ಕೆ ಹೊರಡುವ ಮೊದಲು ನಿಯಮದಂತೆ ಕೊರೊನಾ ಪರೀಕ್ಷೆಗೆ ಒಳಗಾಗಿದ್ದಾರೆ. ಆದರೆ ಕೊರೊನಾ ವರದಿ ಪಾಸಿಟಿವ್ ಬಂದಿದೆ. ಸೋಂಕಿನ ಯಾವುದೇ ಲಕ್ಷಣಗಳಿಲ್ಲ, ಹೋಮ್ ಕ್ವಾರಂಟೈನ್ ನಲ್ಲಿ ಇರುವುದಾಗಿ ಚಿರಂಜೀವಿ ಬಹಿರಂಗ ಪಡಿಸಿದ್ದರು.

Recommended Video

ಮೋಷನ್ ಪೋಸ್ಟರ್ ರಿಲೀಸ್ ಮಾಡಿ ಚಿತ್ರದ ಬಗ್ಗೆ ಮಾತನಾಡಿದ ಕೈಮರ ಚಿತ್ರತಂಡ | Filmibeat Kannada

More from Filmibeat

English summary
Telugu Actor Pawan Kalyan Wishes to his brother Siranjeevi Speedy recovery from Covid 19.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X