For Quick Alerts
  ALLOW NOTIFICATIONS  
  For Daily Alerts

  ಕೊರೊನಾ ನಡುವೆಯೂ ಪ್ರಭಾಸ್ 'ರಾಧೆ ಶ್ಯಾಮ್' ಓವರ್ ಸೀಸ್ ರೈಟ್ಸ್ ದಾಖಲೆ ಬೆಲೆಗೆ ಮಾರಾಟ

  |

  ಪ್ರಭಾಸ್ ನಟನೆಯ ಬಿಗ್ ಬಜೆಟ್ ಪ್ಯಾನ್ ಇಂಡಿಯಾ ಸಿನಿಮಾ ರಾಧೆ ಶ್ಯಾಮ್ ರಿಲೀಸ್ ಗೂ ಮೊದಲೇ ಕೋಟಿ ಕೋಟಿ ಬಾಚಿಕೊಳ್ಳುತ್ತಿದೆ. ರೊಮ್ಯಾಂಟಿಕ್ ಥ್ರಿಲ್ಲರ್ ಸಿನಿಮಾ ಇದಾಗಿದ್ದು, ಪ್ರೇಮಿಯಾಗಿ ಪ್ರಭಾಸ್ ನನ್ನು ತೆರೆಮೇಲೆ ನೋಡಲು ಅಭಿಮಾನಿಗಳು ಕಾತರರಾಗಿದ್ದಾರೆ.

  ಅನೇಕ ವರ್ಷಗಳ ಬಳಿಕ ಪ್ರಭಾಸ್ ರೊಮ್ಯಾಂಟಿಕ್ ಸಿನಿಮಾದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ದೇಶ ವಿದೇಶಗಳಲ್ಲಿ ಅಪಾರ ಸಂಖ್ಯೆ ಅಭಿಮಾನಿ ಬಳಗ ಹೊಂದಿರುವ ಪ್ರಭಾಸ್ ಭಗ್ನ ಪ್ರೇಮಿ ಅವತಾರ ನೋಡಲು ಎಲ್ಲರೂ ಉತ್ಸುಕರಾಗಿದ್ದಾರೆ.

  ವಿಶೇಷ ದಿನದಂದು ಅದ್ದೂರಿಯಾಗಿ ಸೆಟ್ಟೇರುತ್ತಿದೆ ಪ್ರಭಾಸ್-ದೀಪಿಕಾ ಸಿನಿಮಾವಿಶೇಷ ದಿನದಂದು ಅದ್ದೂರಿಯಾಗಿ ಸೆಟ್ಟೇರುತ್ತಿದೆ ಪ್ರಭಾಸ್-ದೀಪಿಕಾ ಸಿನಿಮಾ

  ಈಗಾಗಲೇ ರಿಲೀಸ್ ಆಗಿರುವ ಟೀಸರ್ ಗೆ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬಾಲಿವುಡ್ ಬಳಿಕ ಜಾಗತಿಕ ಸ್ಟಾರ್ ಆಗಿ ಮೆರೆಯುತ್ತಿರುವ ಪ್ರಭಾಸ್ ಸಿನಿಮಾಗೆ ವಿದೇಶದಲ್ಲೂ ಭಾರಿ ಬೇಡಿಕೆ ಇದೆ. ಹಾಗಾಗಿ ವಿದೇಶದಲ್ಲಿ ಬ್ಯುಸಿನೆಸ್ ಕೂಡ ಉತ್ತಮವಾಗಿ ನಡೆಯುತ್ತಿದೆ. ಕೊರೊನಾ ನಡುವೆಯೂ ಅನೇಕ ವಿತರಕರು ರಾಧೆ-ಶ್ಯಾಮ್ ವಿತರಣೆ ಹಕ್ಕು ಖರೀದಿಸಲು ಮುಗಿಬಿದ್ದಾರೆ.

  ವರದಿಗಳ ಪ್ರಕಾರ ಈಗಾಗಲೇ ವಿದೇಶಿ ವಿತರಣ ಹಕ್ಕು ಈಗಾಗಲೇ ಮಾರಾಟವಾಗಿದೆಯತೆ. ಮೂಲಗಳ ಪ್ರಕಾರ ರಾಧೆ ಶ್ಯಾಮ್ ಚಿತ್ರವನ್ನು ಬರೋಬ್ಬರಿ 3.5 ಮಿಲಿಯನ್ ಡಾಲರ್ ಗೆ ಖರೀದಿಸಿದ್ದಾರೆ ಎನ್ನುವ ಸುದ್ದಿ ಕೇಳಿಬರುತ್ತಿದೆ. ಪ್ರಭಾಸ್ ಗೆ ವಿದೇಶದಲ್ಲೂ ಭಾರಿ ಬೇಡಿಕೆ ಇದೆ ಎನ್ನುವುದು ಈ ಮೊತ್ತ ನೋಡಿದ್ರೆ ಗೊತ್ತಾಗುತ್ತಿದೆ.

  ಇಪ್ಪತ್ತೊಂದು ದಿನ ಅನುಭವಿಸಿದ ಕೊರೊನಾ ಕರಾಳತೆ ಬಿಚ್ಚಿಟ್ಟ ಶ್ವೇತಾ ಚಂಗಪ್ಪ | Filmibeat Kannada

  ಅಂದಹಾಗೆ ಚಿತ್ರದಲ್ಲಿ ಪ್ರಭಾಸ್ ವಿಕ್ರಮಾದಿತ್ಯ ಪಾತ್ರದಲ್ಲಿ ಕಾಣಿಸಿಕೊಂಡರೆ ಪೂಜಾ ಹೆಗ್ಡೆ ಪ್ರೇರಣಾ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಚಿತ್ರಕ್ಕೆ ರಾಧಕೃಷ್ಣ ಆಕ್ಷನ್ ಕಟ್ ಹೇಳಿದ್ದಾರೆ. ಕೊರೊನಾ ಹಾವಳಿ ಹೆಚ್ಚಾಗಿರುವ ಕಾರಣ ಸಿನಿಮಾ ಯಾವಾಗ ಬಿಡುಗಡೆಯಾಗಲಿದೆ ಎನ್ನುವುದು ಸದ್ಯದ ಕುತೂಹಲ.

  English summary
  Tollywood star Prabhas's Radhe Shyam overseas rights to be sold for 3.5 million dollars.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X