ವಿಜಯ್ ದೇವರಕೊಂಡ, ಚಾರ್ಮಿ ಜೊತೆ ಹುಟ್ಟುಹಬ್ಬ ಆಚರಿಸಿಕೊಂಡ ನಿರ್ದೇಶಕ ಪುರಿ ಜಗನ್ನಾಥ್

By ಫಿಲ್ಮಿಬೀಟ್ ಡೆಸ್ಕ್

ದಕ್ಷಿಣ ಭಾರತೀಯ ಸಿನಿಮಾರಂಗದ ಖ್ಯಾತ ನಿರ್ದೇಶಕ ಪುರಿ ಜಗನ್ನಾಥ್ ಸೆಪ್ಟಂಬರ್ 28ರಂದು ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಪುರಿ ಜಗನ್ನಾಥ್ 55ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಂಡರು. ಸೌತ್ ಸ್ಟಾರ್ ವಿಜಯ್ ದೇವರಕೊಂಡ, ನಟಿ ಮತ್ತು ನಿರ್ಮಾಪಕಿ ಚಾರ್ಮಿ ಕೌರ್ ಸೇರಿದಂತೆ ಇಡೀ ಲೈಗರ್ ತಂಡದ ಜೊತೆ ಪುರಿ ಜಗನ್ನಾಥ್ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ.

ತೆಲುಗಿನ ಬದ್ರಿ ಸಿನಿಮಾ ಮೂಲಕ ನಿರ್ದೇಶಕರಾಗಿ ಸಿನಿಮಾರಂಗಕ್ಕೆ ಎಂಟ್ರಿ ಕೊಟ್ಟ ಪುರಿ ಜಗನ್ನಾಥ್ ಇಂದು ಸ್ಟಾರ್ ನಿರ್ದೇಶಕರಾಗಿ ಹೊರಹೊಮ್ಮಿದ್ದಾರೆ. ತೆಲುಗು, ಕನ್ನಡ ಮತ್ತು ಹಿಂದಿಯಲ್ಲಿ ಸಿನಿಮಾ ನಿರ್ದೇಶನ ಮಾಡುವ ಮೂಲಕ ಸೈ ಎನಿಸಿಕೊಂಡಿರುವ ಪುರಿ ಜಗನ್ನಾಥ್ ಅವರಿಗೆ ಅಭಿಮಾನಿಗಳು ಮತ್ತು ಚಿತ್ರರಂಗದ ಗಣ್ಯರಿಂದ ಹುಟ್ಟುಹಬ್ಬದ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ.

ಪುರಿ ಜಗನ್ನಾಥ್ ಸದ್ಯ ಲೈಗರ್ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಸೌತ್ ಸೆನ್ಸೇಷನ್ ಸ್ಟಾರ್ ವಿಜಯ್ ದೇವರಕೊಂಡ ಮತ್ತು ಬಾಲಿವುಡ್ ನಟಿ ಅನನ್ಯಾ ಪಾಂಡೆ ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಈಗಾಗಲೇ ಈ ಸಿನಿಮಾದ ಬಹುತೇಕ ಚಿತ್ರೀಕರಣ ಮುಕ್ತಾಯವಾಗಿದೆ. ಕೊರೊನಾ ಕಾರಣದಿಂದ ಚಿತ್ರೀಕರಣ ಸ್ಥಗಿತಗೊಳಿಸಲಾಗಿತ್ತು. ಇತ್ತೀಚಿಗಷ್ಟೆ ಮತ್ತೆ ಚಿತ್ರೀಕರಣ ಪ್ರಾರಂಭ ಮಾಡಿದ್ದು, ಸದ್ಯ ಲೈಗರ್ ಸಿನಿಮಾದ ಚಿತ್ರೀಕರಣ ಭರ್ಜರಿಯಾಗಿ ನಡೆಯುತ್ತಿದೆ.

Puri Jagannadh celebrates birthday with Vijay Devarakonda and Charmi Kaur

ಲೈಗರ್ ಚಿತ್ರೀಕರಣ ಸೆಟ್‌ನಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಕೇಕ್ ಕತ್ತರಿಸಿ ಚಾರ್ಮಿ ಕೌರ್ ಮತ್ತು ವಿಜಯ್ ದೇವರಕೊಂಡ ಅವರಿಗೆ ಕೇಕ್ ತಿನಿಸುತ್ತಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.

ನಟಿ, ನಿರ್ಮಾಪಕಿ ಚಾರ್ಮಿ ಕೌರ್ ಜೊತೆ ಹೆಚ್ಚಾಗಿ ಕಾಣಿಸಿಕೊಳ್ಳುವ ಪುರಿ ಜಗನ್ನಾಥ್‌ಗೆ ವಿಶೇಷವಾಗಿ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ. ಪುರಿ ಜಗನ್ನಾಥ್ ಜೊತೆ ಆಪ್ತವಾಗಿರುವ ಫೋಟೋ ಶೇರ್ ಮಾಡಿ, "ನನ್ನ ನೆಚ್ಚಿನ ಮನುಷ್ಯನಿಗೆ ಹುಟ್ಟುಹಬ್ಬದ ಶುಭಾಶಯಗಳು. ನನ್ನ ಮೇಲೆ ನಿನಗಿರುವ ನಂಬಿಕೆ ಮತ್ತು ನಾನು ಅದನ್ನು ಯಾವಾಗಲೂ ಪಾಲಿಸುತ್ತೇನೆ. ನಿನ್ನನ್ನು ಹೆಮ್ಮೆ ಪಡುವಂತೆ ಮಾಡುತ್ತೇನೆ" ಎಂದು ಬರೆದುಕೊಂಡಿದ್ದಾರೆ.

Puri Jagannadh celebrates birthday with Vijay Devarakonda and Charmi Kaur

ಸದ್ಯ ಲೈಗರ್ ಸಿನಿಮಾದಲ್ಲಿ ಚಾರ್ಮಿ ಕೂಡ ಕೆಲಸ ಮಾಡುತ್ತಿದ್ದಾರೆ. ಇನ್ನು ಭಾರಿ ನಿರೀಕ್ಷೆ ಮೂಡಿಸಿರುವ ಲೈಗರ್ ಸಿನಿಮಾ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಬಿಡುಗಡೆಯಾಗುತ್ತಿದೆ. ದಕ್ಷಿಣ ಭಾರತೀಯ ಸಿನಿಮಾರಂಗದ ಎಲ್ಲಾ ಭಾಷೆಯ ಜೊತೆಗೆ ಹಿಂದಿಯಲ್ಲೂ ಬಿಡುಗಡೆಯಾಗುತ್ತಿದೆ. ಚಿತ್ರಕ್ಕೆ ಬಾಲಿವುಡ್‌ನ ಖ್ಯಾತ ನಿರ್ಮಾಪಕ ಕರಣ್ ಜೋಹರ್ ಬಂಡವಾಳ ಹೂಡುತ್ತಿದ್ದಾರೆ.

ಇನ್ನು ಪುರಿ ಜಗನ್ನಾಥ್ ಹುಟ್ಟುಹಬ್ಬ ಆಚರಣೆ ಮಾಡಿಕೊಳ್ಳುವ ಮೊದಲೇ ಚಿತ್ರದಿಂದ ಭರ್ಜರಿ ಸುದ್ದಿ ನೀಡಿದ್ದಾರೆ. ಬಾಕ್ಸಿಂಗ್ ಲೆಜೆಂಡ್ ಮೈಕ್ ಟೈಸನ್ ಚಿತ್ರಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಈ ಬಗ್ಗೆ ಪುರಿ ಜಗನ್ನಾಥ್ ಮಾಹಿತಿ ಹಂಚಿಕೊಂಡಿದ್ದಾರೆ. ವಿಜಯ್ ದೇವರಕೊಂಡ ಎದುರು ಟೈಸನ್ ಅಖಾಡಕ್ಕೆ ಇಳಿದಿರುವುದು ಸಿನಿಮಾದ ಮೇಲಿನ ನಿರೀಕ್ಷೆಯನ್ನು ಮತ್ತಷ್ಟು ಹೆಚ್ಚಿಸಿದೆ.

Puri Jagannadh celebrates birthday with Vijay Devarakonda and Charmi Kaur

ನಿರ್ದೇಶಕ ಪುರಿ ಜಗನ್ನಾಥ್ ಕೊನಯದಾಗಿ ಇಸ್ಮಾರ್ಟ್ ಶಂಕರ್ ಸಿನಿಮಾವನ್ನು ನಿರ್ದೇಶನ ಮಾಡಿದ್ದರು. ಈ ಸಿನಿಮಾಗೆ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುವ ಜೊತೆಗೆ ಬಾಕ್ಸ್ ಆಫೀಸ್‌ನಲ್ಲೂ ಉತ್ತಮ ಕಮಾಯಿ ಮಾಡಿತ್ತು. ಇದೀಗ ಲೈಗರ್ ಮೂಲಕ ಅಭಿಮಾನಿಗಳ ಮುಂದೆ ಬರಲು ಸಜ್ಜಾಗಿದ್ದಾರೆ.

More from Filmibeat

English summary
Director Puri Jagannadh celebrates birthday with Vijay Devarakonda and Charmi Kaur.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X