ಕ್ರಿಸ್‌ಮಸ್‌ಗೂ ಮುಂಚೆಯೇ ಬರ್ತಿದೆ ಅಲ್ಲು ಅರ್ಜುನ್ 'ಪುಷ್ಪ'

ದಕ್ಷಿಣ ಭಾರತದ ಬಹುನಿರೀಕ್ಷೆಯ ಚಿತ್ರ 'ಪುಷ್ಪ' ನೂತನ ರಿಲೀಸ್ ದಿನಾಂಕ ಪ್ರಕಟವಾಗಿದೆ. ಐಕಾನ್ ಸ್ಟಾರ್ ಅಲ್ಲು ಅರ್ಜುನ್ ನಟನೆಯ 'ಪುಷ್ಪ' ಸಿನಿಮಾ ಕ್ರಿಸ್‌ಮಸ್ ಹಬ್ಬದ ಪ್ರಯುಕ್ತ ವರ್ಲ್ಡ್‌ವೈಡ್ ತೆರೆಗೆ ಬರಲಿದೆ ಎಂದು ಹೇಳಲಾಗಿತ್ತು. ಇದೀಗ, ಒಂದು ವಾರದ ಮುಂಚೆಯೇ ಚಿತ್ರಮಂದಿರಕ್ಕೆ ಪುಷ್ಪ ಲಗ್ಗೆಯಿಡುತ್ತಿದೆ.

ಪುಷ್ಪ ನಿರ್ಮಾಪಕರು ಅಧಿಕೃತವಾಗಿ ರಿಲೀಸ್ ದಿನಾಂಕ ಘೋಷಿಸಿದ್ದು, ಡಿಸೆಂಬರ್ 17 ರಂದು ಥಿಯೇಟರ್‌ಗೆ ಬರಲಿದೆ. ತೆಲುಗಿನಲ್ಲಿ ತಯಾರಾಗಿರುವ ಈ ಚಿತ್ರ ತಮಿಳು, ಕನ್ನಡ, ಹಿಂದಿ ಹಾಗೂ ಮಲಯಾಳಂ ಭಾಷೆಯಲ್ಲಿ ಬಿಡುಗಡೆಯಾಗುತ್ತಿದೆ.

ಕೋವಿಡ್ ಕಾರಣದಿಂದ ಹಲವು ರಾಜ್ಯಗಳಲ್ಲಿ ಚಿತ್ರಮಂದಿರ ಪೂರ್ಣ ಪ್ರಮಾಣದಲ್ಲಿ ತೆರೆದಿರಲಿಲ್ಲ. ಇದೀಗ, ಕರ್ನಾಟಕ, ಮಹಾರಾಷ್ಟ್ರ ಸೇರಿದಂತೆ ಇತರೆ ಕೆಲವು ರಾಜ್ಯಗಳಲ್ಲಿ 100 % ಅವಕಾಶ ನೀಡಲಾಗಿದೆ. ಇದರ ಬೆನ್ನಲ್ಲೆ ಸ್ಟಾರ್ ನಟರ ಚಿತ್ರಗಳು ರಿಲೀಸ್ ದಿನಾಂಕ ಪ್ರಕಟಿಸಿರುವುದು ಚಿತ್ರಪ್ರೇಮಿಗಳಲ್ಲಿ ಕುತೂಹಲ ಹೆಚ್ಚಿಸಿದೆ.

Pushpa Will be Released In this December 17th

ಇತ್ತೀಚಿಗಷ್ಟೆ ರಶ್ಮಿಕಾ ಮಂದಣ್ಣ ಅವರ ಫಸ್ಟ್ ಲುಕ್ ಪೋಸ್ಟರ್ ಅನಾವರಣವಾಗಿತ್ತು. ಪುಷ್ಪ ಚಿತ್ರದಲ್ಲಿ ರಶ್ಮಿಕಾ ಶ್ರೀವಲ್ಲಿ ಎಂಬ ಪಾತ್ರ ನಿರ್ವಹಿಸುತ್ತಿದ್ದು, ಲುಕ್ ವೈರಲ್ ಆಗಿತ್ತು. ಇನ್ನು ರಶ್ಮಿಕಾ ಪೋಸ್ಟರ್ ಟ್ರೋಲ್‌ಗೆ ಗುರಿಯಾಗಿತ್ತು.

ಸುಕುಮಾರ್ ನಿರ್ದೇಶನದಲ್ಲಿ ತಯಾರಾಗುತ್ತಿರುವ ಈ ಚಿತ್ರದಲ್ಲಿ ಅಲ್ಲು ಅರ್ಜುನ್ ನಾಯಕನಾಗಿ ನಟಿಸಿದ್ದಾರೆ. ಪುಷ್ಪರಾಜ್ ಎಂಬ ಪಾತ್ರದಲ್ಲಿ ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಕಾಣಿಸಿಕೊಳ್ಳುತ್ತಿದ್ದು, ಈಗಾಗಲೇ ಟೀಸರ್ ಮತ್ತು ಮೊದಲ ಹಾಡು ಬಿಡುಗಡೆಯಾಗಿ ಸದ್ದು ಮಾಡಿದೆ.

ಅಲ್ಲು ಅರ್ಜುನ್ ಜೊತೆ ಮಲಯಾಳಂ ಖ್ಯಾತ ನಟ ಫಾಹದ್ ಫಾಸಿಲ್ ಹಾಗೂ ಕನ್ನಡದ ಡಾಲಿ ಧನಂಜಯ್ ಸಹ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ. ಮೈತ್ರಿ ಮೂವಿ ಮೇಕರ್ಸ್ ಈ ಚಿತ್ರಕ್ಕೆ ಬಂಡವಾಳ ಹಾಕುತ್ತಿದ್ದು, ಎರಡು ಭಾಗಗಳಲ್ಲಿ ಬಿಡುಗಡೆಯಾಗಲಿದೆ. ಮೊದಲ ಭಾಗ ಡಿಸೆಂಬರ್ 17ಕ್ಕೆ ಬರಲಿದೆ.

'ಪುಷ್ಪ' ಚಿತ್ರದ ಜೊತೆಯಲ್ಲಿ ಮತ್ತಷ್ಟು ಚಿತ್ರಗಳು ಕ್ರಿಸ್‌ಮಸ್ ಹಬ್ಬದ ವಿಶೇಷವಾಗಿ ಥಿಯೇಟರ್‌ಗೆ ಬರುವ ಲೆಕ್ಕಾಚಾರದಲ್ಲಿದೆ. ಬಾಲಿವುಡ್‌ನಲ್ಲಿ ರಣ್ವೀರ್ ಸಿಂಗ್ ನಟನೆಯ '83' ಸಿನಿಮಾ ಡಿಸೆಂಬರ್ ಕೊನೆಯಲ್ಲಿ ರಿಲೀಸ್ ಆಗಲು ಸಜ್ಜಾಗಿದೆ. ಕನ್ನಡದಲ್ಲಿ 'ಚಾರ್ಲಿ-777' ಸಿನಿಮಾ ಡಿಸೆಂಬರ್ 31ಕ್ಕೆ ಬಿಡುಗಡೆಯಾಗುತ್ತಿದೆ. ಈ ನಡುವೆ ತೆಲುಗಿನಲ್ಲಿ ಮೆಗಾಸ್ಟಾರ್ ಚಿರಂಜೀವಿ ಅಭಿನಯದ 'ಆಚಾರ್ಯ' ಚಿತ್ರವೂ ಡಿಸೆಂಬರ್ ತಿಂಗಳಲ್ಲಿ ರಿಲೀಸ್ ಆಗುವ ಸಾಧ್ಯತೆ ಹೆಚ್ಚಿದೆ.

More from Filmibeat

English summary
Allu Arjun and Rashmika Mandanna Starrer pushpa Will be Released In this December 17th. release one week early.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X