For Quick Alerts
  ALLOW NOTIFICATIONS  
  For Daily Alerts

  ರಾಜಮೌಳಿ 'RRR' ಚಿತ್ರದ ಪ್ರಮೋಷನಲ್ ಹಾಡಿನ ಬಜೆಟ್ ಕೇಳಿದ್ರೆ ಅಚ್ಚರಿ ಪಡುತ್ತೀರಿ

  By ಫಿಲ್ಮಿಬೀಟ್ ಡೆಸ್ಕ್
  |

  ಖ್ಯಾತ ನಿರ್ದೇಶಕ ಎಸ್‌ ಎಸ್‌ ರಾಜಮೌಳಿ ನಿರ್ದೇಶನದಲ್ಲಿ ತಯಾರಾಗುತ್ತಿರುವ ಮೆಗಾ ಸಿನಿಮಾ ಆರ್‌ ಆರ್‌ ಆರ್‌ ಬಗ್ಗೆ ದಿನಕ್ಕೊಂದು ಸುದ್ದಿ ಹೊರಬೀಳುತ್ತಲೆ ಇರುತ್ತದೆ. ಆರ್ ಆರ್ ಆರ್ ಸಿನಿಮಾ ಬಿಡುಗಡೆಯಾವಾಗ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಮನೆ ಮಾಡಿರುವಾಗಲೇ ಮತ್ತೊಂದು ಸುದ್ದಿ ಸದ್ದು ಮಾಡುತ್ತಿದೆ. ಚಿತ್ರದ ಪ್ರಮೋಷನಲ್ ಹಾಡಿನ ಚಿತ್ರೀಕರಣಕ್ಕೆಂದು ಆರ್ ಆರ್ ಆರ್ ತಂಡ ತಾಯಾರಾಗುತ್ತಿದೆ ಎನ್ನಲಾಗುತ್ತಿದೆ. ಈಗಾಗಲೇ ಟಾಕಿ ಭಾಗ ಮುಗಿಸಿರುವ ಸಿನಿಮಾತಂಡ ಪ್ರಮೋಷನಲ್ ಹಾಡಿನ ಚಿತ್ರೀಕರಣಕ್ಕೆ ಸಜ್ಜಾಗಿದೆ.

  ಅಂದಹಾಗೆ ಈ ಹಾಡಿನಲ್ಲಿ ಬಾಲಿವುಡ್ ಖ್ಯಾತ ನಟಿ ಅಲಿಯಾ ಭಟ್ ಹೆಜ್ಜೆ ಹಾಕಲಿದ್ದಾರೆ ಎನ್ನಲಾಗುತ್ತಿದೆ. ರಾಮ್ ಚರಣ್ ಮತ್ತು ಜೂ. ಎನ್ ಟಿ ಆರ್ ಜೊತೆ ಅಲಿಯಾ ಭಟ್ ಈ ಹಾಡಿನಲ್ಲಿ ಕುಣಿಯಲಿದ್ದಾರೆ ಎನ್ನುವ ಮಾತು ಕೇಳಿಬರುತ್ತಿದೆ. ಈಗಾಗಲೇ ಸಿನಿಮಾಗೆ ಕೋಟಿ ಕೋಟಿ ಸುರಿದಿರುವ ತಂಡ ಇದೀಗ ಈ ಒಂದು ಹಾಡಿಗಾಗಿ ಬರೋಬ್ಬರಿ 6 ಕೋಟಿ ರೂ. ಖರ್ಚು ಮಾಡುತ್ತಿದ್ದಾರೆ ಎನ್ನುವ ಮಾತು ಟಾಲಿವುಡ್ ಅಂಗಳದಲ್ಲಿ ಗುಲ್ಲಾಗಿದೆ.

  ರಾಮ್ ಚರಣ್ ಮತ್ತು ಜೂ.ಎನ್ ಟಿ ಆರ್ ಇಬ್ಬರೂ ಅದ್ಭುತವಾಗಿ ನೃತ್ಯ ಮಾಡುತ್ತಾರೆ. ಇಬ್ಬರು ಒಟ್ಟಿಗೆ ಒಂದೇ ಹಾಡಿನಲ್ಲಿ ಹೆಜ್ಜೆ ಹಾಕುವುದನ್ನು ನೋಡಲು ಅಭಿಮಾನಿಗಳು ಕಾತರರಾಗಿದ್ದಾರೆ. ಅಂದಹಾಗೆ ಮೂಲಗಳ ಪ್ರಕಾರ ಈಗಾಗಲೇ ರಾಮ್ ಚರಣ್ ಮತ್ತು ಜೂ.ಎನ್ ಟಿ ಆರ್ ಈ ಹಾಡಿಗಾಗಿ ಭರ್ಜರಿ ತಯಾರಿ ನಡೆಸುತ್ತಿದ್ದಾರೆ ಎನ್ನಲಾಗಿದೆ. ಹಾಡಿನ ಬಗ್ಗೆ ಹೆಚ್ಚಿನ ಮಾಹಿತಿ ಬಹಿರಂಗವಾಗಿಲ್ಲ. ಆದರೆ ಅದ್ದೂರಿಯಾಗಿ ತಯಾರಾಗುವದರಲ್ಲಿ ಯಾವುದೇ ಅನುಮಾನವಿಲ್ಲ.

  ಅಂದಹಾಗೆ ಆರ್ ಆರ್ ಆರ್ ಸಿನಿಮಾ ತೆರೆಗೆ ಬರಲಿದೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಮನೆಮಾಡಿದೆ. ಅಂದುಕೊಂಡಂತೆ ಆಗಿದ್ದರೆ ಅಕ್ಟೋಬರ್ 13ಕ್ಕೆ ಆರ್‌ ಆರ್‌ ಆರ್ ಸಿನಿಮಾ ಬರಬೇಕಿತ್ತು. ಆದರೆ, ಕೋವಿಡ್ ಮೂರನೇಯ ಭೀತಿಯಿಂದ ಎದುರಾದ ಸಂಕಷ್ಟದ ಪರಿಣಾಮ ಮತ್ತೆ ಮುಂದಕ್ಕೆ ಹೋಗಿದೆ. ಈ ಬಗ್ಗೆ ಸಿನಿಮಾತಂಡ ಅಧಿಕೃತವಾಗಿ ಬಹಿರಂಗ ಪಡಿಸಿದೆ.

  ಅಕ್ಟೋಬರ್‌ನಿಂದ ಮುಂದಕ್ಕೆ ಹೋದ ಆರ್‌ ಆರ್‌ ಆರ್ ಸಿನಿಮಾ ಮುಂದಿನ ವರ್ಷಕ್ಕೆ ತೆರೆಮೇಲೆ ನೋಡಬಹುದು ಎನ್ನಲಾಗಿದೆ. ಪೋಸ್ಟ್‌ ಪೋನ್ ಸುದ್ದಿ ವರದಿಯಾಗುತ್ತಿದ್ದಂತೆ ಹೊಸ ದಿನಾಂಕದ ಬಗ್ಗೆ ಚರ್ಚೆ ಜೋರಾಗಿದೆ. ಈಗಾಗಲೇ ಹಲವು ವೆಬ್‌ಸೈಟ್‌ಗಳು ವರದಿ ಮಾಡಿರುವಂತೆ ಸಂಕ್ರಾಂತಿ ಹಬ್ಬಕ್ಕೆ ತೆರೆಗೆ ಬರಲಿದೆ ಎನ್ನಲಾಗುತ್ತಿದೆ. ಆದರೆ ಈ ಬಗ್ಗೆ ಯಾವುದೇ ಮಾಹಿತಿ ಬಹಿರಂಗ ಪಡಿಸಿಲ್ಲ ಸಿನಿಮಾತಂಡ.

  ಆರ್ ಆರ್ ಆರ್ ಸಿನಿಮಾ ಸ್ವಾತಂತ್ರ್ಯ ಹೋರಾಟಗಾರ ಕೊಮ್ಮರನ್ ಭೀಮ್ ಮತ್ತು ಅಲ್ಲುರಿ ಸೀತಾರಾಮರಾಜು ಅವರ ಸುತ್ತ ಕಥೆ ಮಾಡಲಾಗಿದ್ದು, ಜೂ ಎನ್‌ ಟಿ ಆರ್ ಮತ್ತು ರಾಮ್ ಚರಣ್ ತೇಜ ನಟಿಸಿದ್ದಾರೆ. ಬಾಲಿವುಡ್ ಖ್ಯಾತ ನಟ ಅಜಯ್ ದೇವಗನ್ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಸೀತಾ ಪಾತ್ರದಲ್ಲಿ ಹಿಂದಿ ನಟಿ ಅಲಿಯಾ ಭಟ್ ಅಭಿನಯಿಸಿದ್ದಾರೆ. ಇವರ ಜೊತೆಗೆ ಹಾಲಿವುಡ್ ಕಲಾವಿದರು ಚಿತ್ರದಲ್ಲಿದ್ದಾರೆ. ಡಿವಿವಿ ದಾನಯ್ಯ ಈ ಚಿತ್ರಕ್ಕೆ ಬಂಡವಾಳ ಹಾಕಿದ್ದು, ಸುಮಾರು 450 ಕೋಟಿಗೂ ಅಧಿಕ ಬಜೆಟ್ ಆಗಿದೆ ಎಂದು ಹೇಳಲಾಗಿದೆ.

  English summary
  Director Rajamouli's RRR movie promotional song to shot at a budget of Rs. 6 crores.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X