For Quick Alerts
  ALLOW NOTIFICATIONS  
  For Daily Alerts

  ಕೊರೊನಾದಿಂದ ಗುಣಮುಖರಾಗುತ್ತಿದ್ದಂತೆ ಏರ್‌ಪೋರ್ಟ್‌ನಲ್ಲಿ ಕಾಣಿಸಿಕೊಂಡ ರಕುಲ್ ಪ್ರೀತ್ ಸಿಂಗ್

  |

  ಕೊರೊನಾ ವೈರಸ್‌ಗೆ ತುತ್ತಾಗಿ ವಿಶ್ರಾಂತಿ ಪಡೆಯುತ್ತಿದ್ದ ನಟಿ ರಕುಲ್ ಪ್ರೀತ್ ಸಿಂಗ್ ನಿನ್ನೆಯಷ್ಟೇ ಸಂಪೂರ್ಣವಾಗಿ ಗುಣಮುಖರಾಗಿದ್ದರು. 'ನನಗೆ ಕೊರೊನಾ ನೆಗಿಟಿವ್ ಬಂದಿದೆ' ಎಂದು ನಿನ್ನೆ ಪೋಸ್ಟ್ ಹಾಕಿದ್ದ ರಕುಲ್ ಪ್ರೀತ್ ಇಂದು (ಡಿಸೆಂಬರ್ 30) ಬೆಳಗ್ಗೆ ಹೈದರಾಬಾದ್‌ ಏರ್‌ಪೋರ್ಟ್‌ನಲ್ಲಿ ಕಾಣಿಸಿಕೊಂಡಿದ್ದಾರೆ.

  ಬುಧವಾರ ಬೆಳಗ್ಗೆ ಹೈದರಾಬಾದ್ ಏರ್‌ಪೋರ್ಟ್‌ನಲ್ಲಿ ಲಗ್ಗೆಜ್ ಸಮೇತ ಪ್ರತ್ಯಕ್ಷವಾದ ನಟಿ ಮುಂಬೈಗೆ ತೆರಳಿದ್ದಾರೆ ಎಂದು ತಿಳಿದು ಬಂದಿದೆ. ಕೊರೊನಾದಿಂದ ಚೇತರಿಕೆ ಕಂಡ ತಕ್ಷಣ ವಾಣಿಜ್ಯನಗರಿಗೆ ಪ್ರಯಾಣ ಮಾಡಿದ್ದಾರೆ.

  ಕೊರೊನಾ ವೈರಸ್‌ನಿಂದ ಚೇತರಿಸಿಕೊಂಡ ನಟಿ ರಕುಲ್ ಪ್ರೀತ್ ಸಿಂಗ್ಕೊರೊನಾ ವೈರಸ್‌ನಿಂದ ಚೇತರಿಸಿಕೊಂಡ ನಟಿ ರಕುಲ್ ಪ್ರೀತ್ ಸಿಂಗ್

  ಹೊಸ ವರ್ಷವನ್ನು ಸ್ವಾಗತ ಮಾಡಲು ಮುಂಬೈಗೆ ತೆರಳಿದ್ದಾರೆ ಎಂದು ಹೇಳಲಾಗುತ್ತಿದೆ. ಹಾಗೇ ಸಿನಿಮಾ ಶೂಟಿಂಗ್‌ನಲ್ಲೂ ಸಹ ಭಾಗಿಯಾಗಲಿದ್ದಾರೆ. ಕೊರೊನಾದಿಂದ ಚೇತರಿಕೆ ಕಂಡಿದ್ದ ರಕುಲ್ ಪ್ರೀತ್ ಸಿಂಗ್ ಅಭಿಮಾನಿಗಳಿಗೆ ಹಾಗೂ ಕಾಳಜಿ ತೋರಿದ ಪ್ರತಿಯೊಬ್ಬರಿಗೂ ಧನ್ಯವಾದ ತಿಳಿಸಿದ್ದರು.

  ''ಕೊರೊನಾದಿಂದ ನಾನು ಗುಣಮುಖನಾಗಿದ್ದೇನೆ ಎಂದು ತಿಳಿಸಲು ಸಂತಸವಾಗುತ್ತಿದೆ. ನಾನು ಈಗ ಆರೋಗ್ಯವಾಗಿದ್ದೇನೆ. ನನ್ನ ಆರೋಗ್ಯದ ಬಗ್ಗೆ ಕಾಳಜಿ ತೋರಿದ ಪ್ರತಿಯೊಬ್ಬರಿಗೂ ಹೃದಯಪೂರ್ವಕ ಧನ್ಯವಾದಗಳು. ಒಳ್ಳೆಯ ಆರೋಗ್ಯ ಮತ್ತು ಸಕಾರಾತ್ಮಕವಾಗಿ 2021ರನ್ನು ಪ್ರಾರಂಭಿಸಲು ಕಾತುರದಿಂದ ಕಾಯುತ್ತಿದ್ದೇನೆ. ದಯವಿಟ್ಟು ಜವಾಬ್ದಾರಿಯಿಂದ ನಡೆದುಕೊಳ್ಳಿ, ಮಾಸ್ಕ್ ಧರಿಸಿ, ಎಲ್ಲ ರೀತಿಯ ಮುಂಜಾಗ್ರತೆ ಕ್ರಮವನ್ನು ಜರುಗಿಸಿ'' ಎಂದು ಪೋಸ್ಟ್ ಮಾಡಿದ್ದರು.

  ಇನ್ನುಳಿದಂತೆ ಅಮಿತಾಭ್ ಬಚ್ಚನ್ ಮತ್ತು ಅಜಯ್ ದೇವಗನ್ ಕಾಂಬಿನೇಷನ್‌ನಲ್ಲಿ ತಯಾರಾಗುತ್ತಿರುವ 'ಮೇ ಡೇ' ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಜೊತೆಗೆ ಜಾನ್ ಅಬ್ರಾಹಂ ಹಾಗೂ ಜಾಕ್‌ಲೀನ್ ಫರ್ನಾಂಡೀಸ್ ನಟನೆಯ ಚಿತ್ರದಲ್ಲೂ ಕಾಣಿಸಿಕೊಳ್ಳುತ್ತಿದ್ದಾರೆ. ಅರ್ಜುನ್ ಕಪೂರ್ ಜೊತೆಯೂ ಒಂದು ಸಿನಿಮಾ ಮಾಡ್ತಿದ್ದಾರೆ.

  English summary
  Indian actress Rakul preet singh leaves hyderabad city after recovering from Covid 19.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X