For Quick Alerts
  ALLOW NOTIFICATIONS  
  For Daily Alerts

  ರಾಮ್ ಚರಣ್ ಸಿನಿಮಾ ನಿರ್ಮಾಣದಿಂದ ಬ್ರೇಕ್ ತೆಗೆದುಕೊಳ್ಳಲು ನಿರ್ಧರಿಸಿದ್ದೇಕೆ?

  By ಫಿಲ್ಮ್ ಡೆಸ್ಕ್
  |

  ಟಾಲಿವುಡ್ ನಟ ರಾಮ್ ಚರಣ್ ಸದ್ಯ ರಾಜಮೌಳಿ ನಿರ್ದೇಶನದ ಆರ್ ಆರ್ ಆರ್ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಅಭಿನಯ ಮಾತ್ರವಲ್ಲದೆ ರಾಮ್ ಸಿನಿಮಾ ನಿರ್ಮಾಣದಲ್ಲಿಯೂ ತೊಡಗಿಕೊಂಡಿದ್ದಾರೆ. ಅಪ್ಪ ಚಿರಂಜೀವಿ ಅವರಿಗೆ ಬ್ಯಾಕ್ ಟು ಬ್ಯಾಕ್ ಸಿನಿಮಾಗಳನ್ನು ರಾಮ್ ಚರಣ್ ನಿರ್ಮಾಣ ಮಾಡುತ್ತಿದ್ದಾರೆ.

  Ayogya ಸಿನಿಮಾದಲ್ಲಿ Satish Neenasam ಕೆಂಡದ ಮೇಲೆ ಓಡಿದ್ದು ಹೇಗೆ ನೋಡಿ|Ayogya song Making| Oneindia Kannada

  ಖೈದಿ ನಂ.150, ಸೈರಾ ನರಸಿಂಹ ರೆಡ್ಡಿ ಸಿನಿಮಾಗಳನ್ನು ನಿರ್ಮಾಣ ಮಾಡಿ ದೊಡ್ಡ ಮಟ್ಟದ ಸಕ್ಸಸ್ ಕಂಡ ಬಳಿಕ ರಾಮ್ ಇದೀಗ ಮೆಗಾ ಸ್ಟಾರ್ ಗೆ 'ಆಚಾರ್ಯ' ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಈ ಸಿನಿಮಾ ಕೂಡ ಭಾರಿ ನಿರೀಕ್ಷೆಯನ್ನು ಹುಟ್ಟು ಹಾಕಿದೆ.

  ಚಿರಂಜೀವಿ 'ಆಚಾರ್ಯ' ಸಿನಿಮಾದಲ್ಲಿ ನಟ ರಾಮ್ ಚರಣ್ ಪಾತ್ರಕ್ಕೆ ಕತ್ತರಿ

  ಅಭಿನಯಕ್ಕಿಂತ ಹೆಚ್ಚಾಗಿ ನಿರ್ಮಾಣದ ಕಡೆ ಗಮನ ಹರಿಸುತ್ತಿರುವ ರಾಮ್ ಚರಣ್ ಇದೀಗ ನಿರ್ಮಾಣದಿಂದ ಬ್ರೇಕ್ ಪಡೆಯಲು ನಿರ್ಧರಿಸಿದ್ದಾರೆ ಎನ್ನುವ ಸುದ್ದಿ ಕೇಳಿ ಬರುತ್ತಿದೆ. ಅಭಿಮಾನಿಗಳು ರಾಮ್ ಚರಣ್ ಅವರನ್ನು ತೆರೆಮೇಲೆ ನೋಡಲು ಹೆಚ್ಚು ಇಷ್ಟಪಡುತ್ತಾರೆ. ಆದರೆ ರಾಮ್ ಚರಣ್ ನಿರ್ಮಾಣದ ಕಡೆ ಗಮನ ಕೊಡುತ್ತಿರುವುದು ಅಭಿಮಾನಿಗಳಿಗೆ ಬೇಸರ ಮೂಡಿಸಿದೆ.

  ತೆರೆಮೇಲೆ ರಾಮ್ ಚರಣ್ ಅನ್ನು ಮಿಸ್ ಮಾಡಿಕೊಳ್ಳುತ್ತಿದ್ದಾರೆ. ಅಲ್ಲದೆ ರಾಮ್ ಚರಣ್ ಗೆ ಸಿನಿಮಾ ನಿರ್ಮಾಣ ದೊಡ್ಡ ತಲೆ ನೋವಾಗಿದೆ. ಹಾಗಾಗಿ ಅಭಿನಯದ ಕಡೆಯೇ ಹೆಚ್ಚು ಗಮನ ಹರಿಸಲು ನಿರ್ಧರಿಸಿದ್ದಾರೆ ಎಂದು ಹೇಳಲಾಗುತ್ತಿದೆ.

  ರಾಮ್ ಚರಣ್ ಕೊನೆಯದಾಗಿ 'ವಿನಯ ವಿಧೇಯ ರಾಮ' ಚಿತ್ರದ ಮೂಲಕ ಅಭಿಮಾನಿಗಳ ಮುಂದೆ ಬಂದಿದ್ದರು. ಆ ನಂತರ ಆರ್ ಆರ್ ಆರ್ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಈ ಸಿನಿಮಾ ಬಳಿಕ ರಾಮ್ ಚರಣ್ ಅಧಿಕೃತವಾಗಿ ಯಾವುದೇ ಸಿನಿಮಾವನ್ನು ಒಪ್ಪಿಕೊಂಡಿಲ್ಲ. ಸದ್ಯ ನಿರ್ಮಾಣದ ಸಹವಾಸ ಸಾಕು ಎಂದು ಮತ್ತೆ ಅಭಿನಯದ ಕಡೆ ಗಮನ ಹರಿಸಲಿದ್ದಾರೆ. ಆರ್ ಆರ್ ಆರ್ ಸಿನಿಮಾ ಬಳಿಕ ರಾಮ್ ಚರಣ್ ಮುಂದಿನ ಸಿನಿಮಾದ ಮೇಲೆ ಕುತೂಹಲ ಹೆಚ್ಚಾಗಿದೆ.

  English summary
  Ram Charan Decide to take a break from Producing film. He is focus on Acting career.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X