For Quick Alerts
  ALLOW NOTIFICATIONS  
  For Daily Alerts

  ಬೆಂಗಳೂರಿಗೆ ಬಂದ RGV: ನಗರದಲ್ಲಿ 'ಲಡ್ಕಿ'ಯ ಪ್ರಚಾರ!

  |

  ಖ್ಯಾತ ನಿರ್ದೇಶಕ ರಾಮ್‌ ಗೋಪಾಲ್ ವರ್ಮಾ ಬೆಂಗಳೂರಿಗೆ ಬಂದಿದ್ದಾರೆ. ತಮ್ಮ ನಿರ್ದೇಶನದ ಹೊಸ ಸಿನಿಮಾದ ಪ್ರಚಾರವನ್ನು ಅವರು ನಗರದಲ್ಲಿ ಮಾಡಿದರು.

  90ರ ದಶಕದಲ್ಲಿ ಭಾರತೀಯ ಸಿನಿಮಾ ರಂಗದಲ್ಲಿ ಹೊಸ ಅಲೆ ಎಬ್ಬಿಸಿದ್ದ ರಾಮ್ ಗೋಪಾಲ್ ವರ್ಮಾ ಇತ್ತೀಚಿನ ವರ್ಷಗಳಲ್ಲಿ ಬೇರೆಯದ್ದೇ ಮಾದರಿಯ ಸಿನಿಮಾಗಳನ್ನು ಮಾಡುತ್ತಿದ್ದಾರೆ. ಕೀಳು ಅಬಿರುಚಿಯ ಸಿನಿಮಾಗಳು ಅವರ ಫಿಲ್ಮೋಗ್ರಫಿಯನ್ನು ಇತ್ತೀಚೆಗೆ ಸೇರಿಕೊಂಡಿರುವುದು ಅವರ ಅಭಿಮಾನಿಗಳಿಗೆ ಬೇಸರ ಮೂಡಿಸಿದೆ.

  ಏನೇ ಆದರೂ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ನಿರ್ದೇಶನದ ಸಿನಿಮಾಗಳು ಅಂದರೆ ವಿಭಿನ್ನವಾಗಿಯೇ ಇರುತ್ತದೆ. ಸದಾ ಡಿಫರೆಂಟ್ ಶೈಲಿಯೇ ಚಿತ್ರ‌ ಮಾಡುವುದರಲ್ಲಿ ಸದಾ ಮುಂದೆ.

  ಹೊಸತನದ ಹೆಜ್ಜೆಗಳನ್ನು ಇಡುವ ಆರ್ ಜಿವಿ ಈಗ ಸಮರ ಕಲೆ ಆಧರಿಸಿದ ಪ್ಯಾನ್ ಇಂಡಿಯಾ ಸಿನಿಮಾ ಮಾಡಿದ್ದು, ಸಿನಿಮಾಕ್ಕೆ 'ಲಡ್ಕಿ' ಎಂದು ಹೆಸರಿಟ್ಟಿದ್ದಾರೆ. ಈ ಸಿನಿಮಾವನ್ನು 'ಹುಡುಗಿ' ಹೆಸರಿನಲ್ಲಿ ಕನ್ನಡದಲ್ಲೂ ರಿಲೀಸ್ ಮಾಡಲಾಗ್ತಿದೆ. ಇದೇ 15ಕ್ಕೆ ಚಿತ್ರ ತೆರೆಗೆ ಬರ್ತಿದ್ದು, ಈ ಹಿನ್ನೆಲೆ ರಾಮ್ ಗೋಪಾಲ್ ತಮ್ಮ ಸಿನಿಮಾದ ನಾಯಕಿಯೊಡನೆ ಬೆಂಗಳೂರಿಗೆ ಆಗಮಿಸಿ ಇಲ್ಲಿನ ಮಾಲ್‌ ಒಂದರಲ್ಲಿ ಸಿನಿಮಾ ಪ್ರಚಾರ ನಡೆಸಿದರು.

  ಎಂಟರ್ ದಿ ಡ್ರ್ಯಾಗನ್ ಸಿನಿಮಾದಿಂದ ಪ್ರೇರಣೆ

  ಎಂಟರ್ ದಿ ಡ್ರ್ಯಾಗನ್ ಸಿನಿಮಾದಿಂದ ಪ್ರೇರಣೆ

  ಮಾಧ್ಯಮಗಳೊಟ್ಟಿಗೆ ಮಾತನಾಡಿದ ನಿರ್ದೇಶಕ ರಾಮ್ ಗೋಪಾಲ್ ವರ್ಮಾ, ''ಇದು ತುಂಬಾ ವಿಶೇಷವಾದ ಸಿನಿಮಾ. ನಾನು ಚಿಕ್ಕವನಿದ್ದಾಗ 'ಎಂಟರ್ ದಿ ಡ್ರ್ಯಾಗನ್' ಸಿನಿಮಾ ನೋಡಿದ್ದೆ. ಆ ಕಥೆಯ ನಾಯಕ‌ ಬ್ರೂಸ್ಲಿಯಿಂದ ಸ್ಪೂರ್ತಿಯಿಂದ ಈ ಸಿನಿಮಾ ಮಾಡಿದ್ದು, ಮಾರ್ಷಲ್ ಆರ್ಟ್ಸ್ ಗೆ ಸಂಬಂಧಪಟ್ಟ ಸಿನಿಮಾವಾಗಿದ್ದು, ಈ ಕಲೆ ಮಾಡುವವರ ಸಂಖ್ಯೆ ತೀರಾ ವಿರಳ. ಅದ್ರಲ್ಲೂ ಹೆಣ್ಣು ಮಕ್ಕಳು ಮಾಡೋದು‌ ಕಡಿಮೆ. ನಾಯಕಿ ಪೂಜಾ ಹನ್ನೆರೆಡು ವರ್ಷದಿಂದ ಸಮರಕಲೆ ಅಭ್ಯಾಸ ಮಾಡುತ್ತಿದ್ದಾರೆ, ಹೀಗಾಗಿ ಆಕೆಯನ್ನು ನಾಯಕಿಯನ್ನು ಆಕೆ ಮಾಡಲಾಗಿದೆ. ಟ್ರಯಾಂಗಲ್ ಲವ್ ಸ್ಟೋರಿ ಕೂಡ ಸಿನಿಮಾದಲ್ಲಿದೆ'' ಎಂದರು.

  ಹಲವು ಭಾಷೆಗಳಲ್ಲಿ ಸಿನಿಮಾ ಬಿಡುಗಡೆ

  ಹಲವು ಭಾಷೆಗಳಲ್ಲಿ ಸಿನಿಮಾ ಬಿಡುಗಡೆ

  'ಹುಡುಗಿ' ಸಿನಿಮಾ ಮಹಿಳಾ ಪ್ರಧಾನ ಸಿನಿಮಾವಾಗಿದ್ದು, ಮಾರ್ಷಲ್ ಆರ್ಟ್ಸ್ ಹಿನ್ನೆಲೆಯಲ್ಲಿ ತಯಾರಾಗಿರುವ ಈ ಚಿತ್ರದಲ್ಲಿ ಸಿನಿಮಾದಲ್ಲಿ ಪೂಜಾ ಭಾಲೇಕರ್ ನಾಯಕಿಯಾಗಿ ನಟಿಸಿದ್ದಾರೆ. ಭಾರತ ಹಾಗೂ ಚೀನಾದಲ್ಲಿ ಚಿತ್ರ ಬಿಡುಗಡೆಯಾಗುತ್ತಿದೆ. ಈ ಸಿನಿಮಾ ಚೀನಾದಲ್ಲಿ ಬಿಡುಗಡೆಯಾಗುತ್ತಿದೆ. ಆರ್ಟ್ಸಿ ಮೀಡಿಯಾ ಪ್ರೈವೇಟ್ ಲಿಮಿಟೆಡ್ ನಿರ್ಮಿಸಿರುವ ಈ ಚಿತ್ರ ತೆಲುಗು, ತಮಿಳು, ಮಲಯಾಳಂ, ಕನ್ನಡ ಮತ್ತು ಹಿಂದಿ ಭಾಷೆಯಲ್ಲಿ ಬೆಳ್ಳಿತೆರೆಗೆ ಜುಲೈ 15ಕ್ಕೆ ಗ್ರ್ಯಾಂಡ್ ಎಂಟ್ರಿ ಕೊಡಲಿದೆ.

  ದೊಡ್ಡ ಮಟ್ಟದಲ್ಲಿ ಚೀನಾದಲ್ಲಿ ಬಿಡುಗಡೆ ಆಗಲಿದೆ

  ದೊಡ್ಡ ಮಟ್ಟದಲ್ಲಿ ಚೀನಾದಲ್ಲಿ ಬಿಡುಗಡೆ ಆಗಲಿದೆ

  ರಾಮ್ ಗೋಪಾಲ್ ವರ್ಮಾ ನಿರ್ದೇಶನ ಮಾಡಿರುವ ಮಹಿಳಾ ಪ್ರಧಾನ ಆಕ್ಷನ್ ಸಿನಿಮಾ 'ಲಡ್ಕಿ', ಜುಲೈ 15 ರಂದು ಬಿಡುಗಡೆ ಆಗುತ್ತಿದ್ದು ಚೀನಾ ದೇಶವೊಂದರಲ್ಲೇ 40,000 ಸ್ಕ್ರೀನ್‌ಗಳಲ್ಲಿ ತೆರೆಗೆ ಬರಲಿದೆ! ಇದೇ ಮೊದಲ ಬಾರಗೆ ಭಾರತೀಯ ಸಿನಿಮಾವೊಂದು ಚೀನಾದಲ್ಲಿ ಇಷ್ಟು ದೊಡ್ಡ ಮಟ್ಟದಲ್ಲಿ ಬಿಡುಗಡೆ ಆಗುತ್ತಿದೆ ಎಂದು ಪೋಸ್ಟರ್ ಹಂಚಿಕೊಂಡಿದ್ದಾರೆ ಸಿನಿಮಾದ ನಿರ್ದೇಶಕ ರಾಮ್ ಗೋಪಾಲ್ ವರ್ಮಾ. 'ಬಾಹುಬಲಿ', ಅಮೀರ್ ಖಾನ್‌ರ 'ದಬಂಗ್‌' ಸಿನಿಮಾಗಳು ಸಹ ಚೀನಾದಲ್ಲಿ ಇಷ್ಟು ದೊಡ್ಡ ಮಟ್ಟದಲ್ಲಿ ಬಿಡಗುಡೆ ಆಗಿರಲಿಲ್ಲ.

  ಚೀನಾ ಸಂಸ್ಥೆಯ ಸಹಯೋಗದೊಂದಿಗೆ ಸಿನಿಮಾ

  ಚೀನಾ ಸಂಸ್ಥೆಯ ಸಹಯೋಗದೊಂದಿಗೆ ಸಿನಿಮಾ

  'ಲಡ್ಕಿ' ಸಿನಿಮಾವನ್ನು ಚೀನಾದ ಸಂಸ್ಥೆಯೊಂದರ ಸಹಯೋಗದೊಂದಿಗೆ ಚಿತ್ರೀಕರಿಸಿದ್ದಾರೆ ರಾಮ್ ಗೋಪಾಲ್ ವರ್ಮಾ. ಈ ಸಿನಿಮಾಕ್ಕೆ ಚೀನಾದ ಜಿಂಗ್ ಶು, ಶಾನ್ ಡೋಂಗ್‌ಬಿಂಗ್ ಸಹ ಬಂಡವಾಳ ಹೂಡಿದ್ದಾರೆ. ಹಾಗಾಗಿ ಇದೊಂದು ಇಂಡೊ-ಚೀನಾ ಸಹಯೋಗದ ಸಿನಿಮಾ ಎಂದು ರಾಮ್ ಗೋಪಾಲ್ ವರ್ಮಾ ಹೇಳಿದ್ದಾರೆ. ಅಂತೆಯೇ ಸಿನಿಮಾ ಸಹ ಚೀನಾದ ಹಲವು ಭಾಗಗಳಲ್ಲಿ ಚಿತ್ರೀಕರಣಗೊಂಡಿದೆ. ಚೀನಾದ ಚಿತ್ರೀಕರಣದ ಬಿಹೈಂಡ್‌ ದಿ ಕ್ಯಾಮೆರಾ ವಿಡಿಯೋವನ್ನು ವರ್ಮಾ ಕೆಲವು ದಿನಗಳ ಹಿಂದೆ ಹಂಚಿಕೊಂಡಿದ್ದರು.

  English summary
  Director Ram Gopal Varma came to Bengaluru to promote his new movie Ladki. Movie is on Marital arts.
  Monday, July 11, 2022, 9:02
  IIFA

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X