ರಾಮ್ ಚರಣ್- ಶಂಕರ್ ಹೊಸ ಸಿನಿಮಾ ಮುಹೂರ್ತದಲ್ಲಿ ಸೆಲೆಬ್ರಿಟಿಗಳ ಸಮಾಗಮ
ದಕ್ಷಿಣ ಭಾರತೀಯ ಸಿನಿಮಾರಂಗದಲ್ಲಿ ಭಾರಿ ನಿರೀಕ್ಷೆ ಮೂಡಿಸಿರುವ ನಿರ್ದೇಶಕ ಶಂಕರ್ ಮತ್ತು ರಾಮ್ ಚರಣ್ ಪ್ಯಾನ್ ಇಂಡಿಯಾ ಸಿನಿಮಾದ ಮುಹೂರ್ತ ಸಮಾರಂಭ ಇಂದು (ಸೆಪ್ಟಂಬರ್ 08) ಅದ್ದೂರಿಯಾಗಿ ನೆರವೇರಿತು. ಇಂದು ಹೈದರಾಬಾದ್ ಅನ್ನಪೂರ್ಣ ಸ್ಟುಡಿಯೋದಲ್ಲಿ ಬೆಳಗ್ಗೆ 10.15ಕ್ಕೆ ನಡೆದ ಮುಹೂರ್ತ ಸಮಾರಂಭದಲ್ಲಿ ಖ್ಯಾತ ಸೆಲೆಬ್ರಿಟಿಗಳು ಭಾಗಿಯಾಗಿರುವುದು ಅಚ್ಚರಿ ಮೂಡಿಸಿದೆ. ಅದ್ದೂರಿಯಾಗಿ ನಡೆದ ಪೂಜಾ ಕಾರ್ಯದಲ್ಲಿ ಸಿನಿಮಾತಂಡ ಸೇರಿದಂತೆ ಟಾಲಿವುಡ್ ಮತ್ತು ಬಾಲಿವುಡ್ ಖ್ಯಾತ ನಟರು ಕಾಣಿಸಿಕೊಂಡಿರುವುದು ವಿಶೇಷ.
ಚಿತ್ರದಲ್ಲಿ ರಾಮ್ ಚರಣ್‌ಗೆ ನಾಯಕಿಯಾಗಿ ಬಾಲಿವುಡ್ ಖ್ಯಾತ ನಟಿ ಕಿಯಾರಾ ಅಡ್ವಾಣಿ ಕಾಣಿಸಿಕೊಳ್ಳುತ್ತಿದ್ದಾರೆ. ಕಿಯಾರಾ ನಿನ್ನೆಯೇ ಹೈದರಾಬಾದ್‌ಗೆ ಆಗಮಿಸಿದ್ದು, ಚಿತ್ರದ ಫೋಟೋಶೂಟ್‌ನಲ್ಲೂ ಭಾಗಿಯಾಗಿದ್ದರು. ರಾಮ್ ಚರಣ್ ಮತ್ತು ನಿರ್ದೇಶಕ ಶಂಕರ್ ಇಬ್ಬರು ಫೋಟೋಶೂಟ್ ನಲ್ಲಿ ಭಾಗಿಯಾಗಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದೀಗ ಮುಹೂರ್ತದ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
ಅಂದಹಾಗೆ ಮುಹೂರ್ತ ಸಮಾರಂಭದಲ್ಲಿ ಬಾಲಿವುಡ್ ಖ್ಯಾತ ನಟ ರಣ್ವೀರ್ ಸಿಂಗ್ ಭಾಗಿಯಾಗಿದ್ದರು. ರಣ್ವೀರ್ ಸಿಂಗ್ ನಿರ್ದೇಶಕ ಶಂಕರ್ ಜೊತೆ ಅನ್ನಿಯನ್ ಸಿನಿಮಾದ ರಿಮೇಕ್ ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈಗಾಗಲೇ ಈ ಸಿನಿಮಾ ಅನೌನ್ಸ್ ಮಾಡಲಾಗಿದೆ. ಶಂಕರ್ ಜೊತೆ ಉತ್ತಮ ಬಾಂಧವ್ಯ ಹೊಂದಿರುವ ರಣ್ವೀರ್ ಸಿಂಗ್ ಇಂದು ಶಂಕರ್ ಹೊಸ ಸಿನಿಮಾದ ಮುಹೂರ್ತದಲ್ಲಿ ಕಾಣಿಸಿಕೊಂಡಿದ್ದರು.

ಇನ್ನು ಮೆಗಾಸ್ಟಾರ್ ಚಿರಂಜೀವಿ ಕೂಡ ಮುಹೂರ್ತ ಸಮಾರಂಭದಲ್ಲಿ ಕಾಣಿಸಿಕೊಂಡಿದ್ದಾರೆ. ಪುತ್ರನ ಪ್ಯಾನ್ ಇಂಡಿಯಾ ಸಿನಮಾಗೆ ಚಿರಂಜೀವಿ ಕ್ಲಾಪ್ ಮಾಡಿ ಶುಭಹಾರೈಸಿದ್ದಾರೆ. ಇನ್ನು ವಿಶೇಷ ಎಂದರೆ ಖ್ಯಾತ ನಿರ್ದೇಶಕ ರಾಜಮೌಳಿ ಕೂಡ ಮುಹೂರ್ತ ಸಮಾರಂಭ ಸಂಭ್ರಮದಲ್ಲಿ ಭಾಗಿಯಾಗಿದ್ದರು.
ಈಗಾಗಲೇ ಈ ಸಿನಿಮಾ ಬಗ್ಗೆ ಸಿಕ್ಕಾಪಟ್ಟೆ ಚರ್ಚೆ ನಡೆಯುತ್ತಿದೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸಿನಿಮಾ ಮೂಡಿಬರುತ್ತಿದ್ದು, 3ಡಿ ಸಿನಿಮಾ ಇದಾಗಿದೆ. ಅಂದಹಾಗೆ ಇತ್ತೀಚಿಗಷ್ಟೆ ಚಿತ್ರಕ್ಕೆ ನಾಯಕಿಯ ಎಂಟ್ರಿಯಾಗಿದೆ. ರಾಮ್ ಚರಣ್‌ಗೆ ನಾಯಕಿಯಾಗಿ ಬಾಲಿವುಡ್ ಖ್ಯಾತ ನಟಿ ಕಿಯಾರಾ ಅಡ್ವಾಣಿ ಕಾಣಿಸಿಕೊಳ್ಳುತ್ತಿದ್ದಾರೆ. ಕಿಯಾರಾ ಸದ್ಯ ಶೆರ್ ಷಾ ಸಿನಿಮಾದ ಸೂಪರ್ ಸಕ್ಸಸ್ ನ ಖುಷಿಯಲ್ಲಿದ್ದಾರೆ. ಶೇರ್ ಷಾ ಯಶಸ್ಸಿನ ಸಂತಸದಲ್ಲೇ ರಾಮ್ ಚರಣ್ ಮತ್ತು ಶಂಕರ್ ಸಿನಿಮಾದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.
ಅಂದಹಾಗೆ ಶಂಕರ್ ಮತ್ತು ರಾಮ್ ಚರಣ್ ಕಾಂಬಿನೇಷನ್ ನ ಈ ಚಿತ್ರ ಪ್ಯಾನ್ ಇಂಡಿಯಾ 3ಡಿ ಸಿನಿಮಾವಾಗಿದೆ. ಬಿಗ್ ಬಜೆಟ್ ನಲ್ಲಿ ಸಿನಿಮಾ ಮೂಡಿಬರುತ್ತಿದೆ. ಅಂದಹಾಗೆ ಇದು ರಾಮ್ ಚರಣ್ ನಟನೆಯ 15 ಸಿನಿಮಾವಾಗಿದೆ. ಚಿತ್ರಕ್ಕೆ ತೆಲುಗಿನ ಖ್ಯಾತ ನಿರ್ಮಾಪಕ ದಿಲ್ ರಾಜ್ ಬಂಡವಾಳ ಹೂಡುತ್ತಿದ್ದಾರೆ. ಸದ್ಯ ಮುಹೂರ್ತ ಮುಗಿಸಿರುವ ಸಿನಿಮಾತಂಡ ಸದ್ಯದಲ್ಲೇ ಚಿತ್ರೀಕರಣ ಪ್ರಾರಂಭಮಾಡುವ ಉತ್ಸಾಹದಲ್ಲಿದ್ದಾರೆ.


Click it and Unblock the Notifications











