'ಪುಷ್ಪ' ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ರಗಡ್ ಲುಕ್ ಬಹಿರಂಗ

ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ನಟನೆಯ ಪುಷ್ಪ ಚಿತ್ರದಲ್ಲಿ ಬಹುಭಾಷೆ ನಟಿ ರಶ್ಮಿಕಾ ಮಂದಣ್ಣ ನಾಯಕಿಯಾಗಿ ನಟಿಸಿರುವ ವಿಚಾರ ಗೊತ್ತಿರುವ ಸಂಗತಿ. ಆದರೆ ಇದುವರೆಗೂ ರಶ್ಮಿಕಾ ಪಾತ್ರ ಏನು ಎನ್ನುವುದು ಎಲ್ಲಿಯೂ ಬಹಿರಂಗವಾಗಿಲ್ಲ. ಅಂತಿಮವಾಗಿ ರಶ್ಮಿಕಾ ಮಂದಣ್ಣ ಫಸ್ಟ್ ಲುಕ್ ಪೋಸ್ಟರ್ ರಿಲೀಸ್ ಆಗಿದೆ.

ಸ್ವತಃ ಚಿತ್ರತಂಡ ಪ್ರಕಟಿಸಿರುವ ಪ್ರಕಾರ ರಶ್ಮಿಕಾ ಮಂದಣ್ಣ ಪುಷ್ಪ ಸಿನಿಮಾದಲ್ಲಿ 'ಶ್ರೀವಲ್ಲಿ' ಎಂಬ ಯುವತಿ ಪಾತ್ರ ನಿರ್ವಹಿಸಿದ್ದಾರೆ. ಇದುವರೆಗೂ ಕಾಣಿಸಿಕೊಳ್ಳದ ಲುಕ್‌ನಲ್ಲಿ ಕೊಡಗಿನ ಕುವರಿ ಬಣ್ಣ ಹಚ್ಚಿದ್ದು, ಶ್ರೀವಲ್ಲಿ ಗೆಟಪ್ ತುಂಬಾ ರಗಡ್ ಆಗಿ ಕಂಡು ಬರುತ್ತಿದೆ.

ಪೋಸ್ಟರ್‌ನಲ್ಲಿ ತಿಳಿಸಿರುವಂತೆ ಈಕೆ ಪುಷ್ಪರಾಜ್ (ಅಲ್ಲು ಅರ್ಜುನ್) ಪ್ರೇಯಸಿ. ಕಿವಿಗೆ ಓಲೆ ಹಾಕಿಕೊಳ್ಳುತ್ತಿರುವ ರಶ್ಮಿಕಾ, ಜತೆಗೆ ತಟ್ಟೆಯಲ್ಲಿ ಹೂವು ಹಾಗೂ ಹೊಸ ಸೀರೆ, ಹರಿಶಿಣ-ಕುಂಕುಮವೂ ಕಾಣುತ್ತಿದೆ. ಇದೆಲ್ಲವನ್ನು ಗಮನಿಸಿದರೆ ಯಾವುದೇ ಕಾರ್ಯಕ್ರಮಕ್ಕೆ ರಶ್ಮಿಕಾ ತಯಾರಾಗುತ್ತಿರುವಂತೆ ಭಾಸವಾಗುತ್ತಿದೆ.

Rashmika Mandanna as Srivalli in Pushpa First Look poster released

ಪುಷ್ಪ ಸಿನಿಮಾದ ಬಹುತೇಕ ಚಿತ್ರೀಕರಣ ಮುಗಿದಿದೆ. ಬಾಕಿ ಉಳಿದಿರುವ ಕೆಲವು ಪ್ರಮುಖ ದೃಶ್ಯಗಳ ಕೆಲಸ ಜರುಗುತ್ತಿದೆ. ಈ ಚಿತ್ರೀಕರಣದಲ್ಲಿ ರಶ್ಮಿಕಾ ಮಂದಣ್ಣ ಪಾಲ್ಗೊಂಡಿದ್ದಾರೆ ಎಂಬ ಮಾಹಿತಿ ಇದೆ.

ಸುಕುಮಾರ್-ಅಲ್ಲು ಅರ್ಜುನ್ ಸಿನಿಮಾ
ಸುಕುಮಾರ್ ನಿರ್ದೇಶನದಲ್ಲಿ ತಯಾರಾಗುತ್ತಿರುವ ಈ ಚಿತ್ರದಲ್ಲಿ ಅಲ್ಲು ಅರ್ಜುನ್ ನಾಯಕನಾಗಿ ನಟಿಸಿದ್ದಾರೆ. ಪುಷ್ಪರಾಜ್ ಎಂಬ ಪಾತ್ರದಲ್ಲಿ ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಕಾಣಿಸಿಕೊಳ್ಳುತ್ತಿದ್ದು, ಟೀಸರ್ ಮತ್ತು ಮೊದಲ ಹಾಡು ಸದ್ದು ಮಾಡಿದೆ.

ಅಲ್ಲು ಅರ್ಜುನ್ ಜೊತೆ ಮಲಯಾಳಂ ಖ್ಯಾತ ನಟ ಫಾಹದ್ ಫಾಸಿಲ್ ಹಾಗೂ ಕನ್ನಡದ ಡಾಲಿ ಧನಂಜಯ್ ಸಹ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ. ಮೈತ್ರಿ ಮೂವಿ ಮೇಕರ್ಸ್ ಈ ಚಿತ್ರಕ್ಕೆ ಬಂಡವಾಳ ಹಾಕುತ್ತಿದ್ದು, ಎರಡು ಭಾಗಗಳಲ್ಲಿ ಬಿಡುಗಡೆಯಾಗಲಿದೆ. ತೆಲುಗು, ತಮಿಳು, ಹಿಂದಿ, ಕನ್ನಡ ಹಾಗೂ ಮಲಯಾಳಂ ಭಾಷೆಗಳಲ್ಲಿ ಈ ಚಿತ್ರ ಬಿಡುಗಡೆಯಾಗಲಿದೆ. ದೇವಿಶ್ರೀ ಪ್ರಸಾದ್ ಸಂಗೀತ ನೀಡಿದ್ದು, ಮೊದಲ ಭಾಗ ಕ್ರಿಸ್‌ಮಸ್‌ ಹಬ್ಬಕ್ಕೆ ರಿಲೀಸ್ ಆಗುತ್ತಿದೆ.

ಬಾಲಿವುಡ್‌ನಲ್ಲಿ ರಶ್ಮಿಕಾ ಮಂದಣ್ಣ
ಪುಷ್ಪ ಸಿನಿಮಾದಲ್ಲಿ ನಟಿಸುತ್ತಲೇ ಆ ಕಡೆ ಬಾಲಿವುಡ್‌ನಲ್ಲೂ ಎರಡು ಚಿತ್ರ ಮಾಡಿ ಮುಗಿಸಿದ್ದಾರೆ. ಶಾಂತನು ಬಾಗ್ಚಿ ನಿರ್ದೇಶನದಲ್ಲಿ ತಯಾರಾಗುತ್ತಿರುವ 'ಮಿಷನ್ ಮಜ್ನು' ಚಿತ್ರದೊಂದಿಗೆ ರಶ್ಮಿಕಾ ಬಾಲಿವುಡ್ ಪ್ರವೇಶಿಸುತ್ತಿದ್ದಾರೆ. ಈ ಚಿತ್ರದಲ್ಲಿ ಸಿದ್ದಾರ್ಥ್ ಮಲ್ಹೋತ್ರಾ ರಾ ಏಜೆಂಟ್ ಆಗಿ ಕಾಣಿಸಿಕೊಂಡಿದ್ದು, ಇದುವರೆಗೂ ರಶ್ಮಿಕಾ ಮಂದಣ್ಣ ಪಾತ್ರ ಏನು ಎನ್ನುವುದು ಬಹಿರಂಗವಾಗಿಲ್ಲ. ರೋನಿ ಸ್ಕ್ರೂವಾಲಾ, ಅಮರ್ ಬುಟಾಲಾ ಮತ್ತು ಗರಿಮಾ ಮೆಹ್ತಾ ಈ ಚಿತ್ರ ನಿರ್ಮಿಸಿದ್ದಾರೆ. 1970ರ ನೈಜ ಘಟನೆಗಳಿಂದ ಸ್ಫೂರ್ತಿಯಿಂದ ಈ ಸಿನಿಮಾ ತಯಾರಾಗಿದೆ.

ಇದರ ಜೊತೆಗೆ ಅಮಿತಾಭ್ ಬಚ್ಚನ್ ನಟಿಸಿರುವ ಗುಡ್‌ಬೈ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ ಕಾಣಿಸಿಕೊಂಡಿದ್ದರು. ಈ ಸಿನಿಮಾದ ಶೂಟಿಂಗ್ ಸಹ ಮುಗಿಸಿದ್ದಾರೆ ಎಂಬ ಮಾಹಿತಿ ಇದೆ. ಈ ಕಡೆ ಪುಷ್ಪ ಚಿತ್ರದಲ್ಲಿ ನಟಿಸುತ್ತಲೇ ಆ ಕಡೆ ಎರಡು ಹಿಂದಿ ಸಿನಿಮಾದ ಶೂಟಿಂಗ್ ಮುಗಿಸಿದ್ದಾರೆ ರಶ್ಮಿಕಾ ಮಂದಣ್ಣ.

More from Filmibeat

English summary
Kannada Actress Rashmika Mandanna as Srivalli in Pushpa First Look poster released.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X