ಹುಟ್ಟುಹಬ್ಬದ ಸಂಭ್ರಮದಲ್ಲಿ ರಶ್ಮಿಕಾ: ಕಾಮನ್ ಡಿಪಿ ಬಿಡುಗಡೆ ಮಾಡಿ ಶುಭಕೋರಿದ ಸಿನಿ ಗಣ್ಯರು
ತೆಲುಗು ಮತ್ತು ಹಿಂದಿ ಸಿನಿಮಾರಂಗದಲ್ಲಿ ಮಿಂಚುತ್ತಿರುವ ನಟಿ ರಶ್ಮಿಕಾ ಮಂದಣ್ಣ ಅವರಿಗೆ ಇಂದು (ಏಪ್ರಿಲ್ 5) ಹುಟ್ಟುಹಬ್ಬದ ಸಂಭ್ರಮ. ತೆಲುಗು ಸಿನಿಮಾರಂಗದ ಬೇಡಿಕೆ ನಟಿಯಾಗಿ ಗುರುತಿಸಿಕೊಂಡಿರುವ ನಟಿ ರಶ್ಮಿಕಾ ಸ್ಟಾರ್ ನಟರ ಜೊತೆ ತೆರೆಹಂಚಿಕೊಳ್ಳುತ್ತಾ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ.
ರಶ್ಮಿಕಾ ಅವರಿಗೆ ಅಭಿಮಾನಿಗಳು ಮತ್ತು ಚಿತ್ರರಂಗದ ಗಣ್ಯರು ಸಾಮಾಜಿಕ ಜಾಲತಾಣದ ಮೂಲಕ ಶುಭಾಶಯ ತಿಳಿಸುತ್ತಿದ್ದಾರೆ. ವಿಶೇಷ ಎಂದರೆ ರಶ್ಮಿಕಾ ಕಾಮನ್ ಡಿಪಿ ರಿಲೀಸ್ ಮಾಡಿ ವಿಶ್ ಮಾಡುತ್ತಿದ್ದಾರೆ. ತೆಲುಗು ಸಿನಿಮಾದ ಅನೇಕ ನಟ-ನಟಿಯರು ಮತ್ತು ನಿರ್ದೇಶಕರು ರಶ್ಮಿಕಾಗೆ ಶುಭಕೋರುತ್ತಿದ್ದಾರೆ.
ಇನ್ನು ಕನ್ನಡದ ನಿರ್ದೇಶಕ ಸಿಂಪಲ್ ಸುನಿ ಟ್ವೀಟ್ ಮಾಡಿ 'ಕಿರಿಕ್ ಪಾರ್ಟಿಯಲಿ ಚಮಕ್ ಕೊಟ್ಟ 'ಅಂಜನಿಪುತ್ರ'ನ 'ಪೊಗರಿ'ನ 'ಯಜಮಾನ'ತಿ @iamRashmika ಹುಟ್ಟುಹಬ್ಬದ ಮುಂಗಡದ CDP ಮುಂಚಿತ ಹಾರೈಕೆಗಳು. ಹುಟ್ಟುಹಬ್ಬದ ಶುಭಾಶಯಗಳು' ಎಂದು ಮುಂಚಿತವಾಗಿಯೇ ಶುಭಾಶಯ ತಿಳಿಸಿದ್ದಾರೆ.

ಇನ್ನು ಅಭಿಮಾನಿಗಳಿಂದ ಸಹ ನೆಚ್ಚಿನ ನಾಯಕಿಗೆ ಶುಭಾಶಯಗಳ ಸುರಿಮಳೆಯೇ ಹರಿದುಬರುತ್ತಿದೆ. ಸಾಮಾಜಿಕ ಜಾಲತಾಣದಲ್ಲಿ ವಿಶ್ ಮಾಡುವ ಜೊತೆಗೆ 'ನ್ಯಾಷನಲ್ ಕ್ರಶ್ ರಶ್ಮಿಕಾ' ಎಂದು ಟ್ರೆಂಡ್ ಮಾಡುತ್ತಿದ್ದಾರೆ.
ಕಿರಿಕ್ ಸುಂದರಿ ಸದ್ಯ ಹಿಂದಿ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಮಿಷನ್ ಮಜ್ನು ಮೂಲಕ ಬಾಲಿವುಡ್ ಗೆ ಎಂಟ್ರಿ ಕೊಟ್ಟ ರಶ್ಮಿಕಾ ಮೊದಲ ಸಿನಿಮಾದ ಚಿತ್ರೀಕರಣ ಮುಗಿಯುವ ಮೊದಲೇ 2ನೇ ಸಿನಿಮಾಗೆ ಸಹಿ ಮಾಡಿದ್ದಾರೆ. ಬಿಗ್ ಬಿ ಅಮಿತಾಬ್ ಬಚ್ಚನ್ ಜೊತೆ ರಶ್ಮಿಕಾ ಗುಡ್ ಬಾಯ್ ಚಿತ್ರದಲ್ಲಿ ನಟಿಸುತ್ತಿದ್ದಾರೆ.
ಇನ್ನು ತೆಲುಗಿನಲ್ಲಿ ರಶ್ಮಿಕಾ ಅಲ್ಲು ಅರ್ಜುನ್ ನಾಯಕನಾಗಿ ನಟಿಸುತ್ತಿರುವ ಪುಷ್ಪ ಚಿತ್ರದಲ್ಲಿ ಬಣ್ಣ ಹಚ್ಚಿದ್ದಾರೆ. ಇದಲ್ಲದೇ ಇನ್ನು ಹೆಸರಿಡದ ಮತ್ತೊಂದು ತೆಲುಗು ಸಿನಿಮಾ ರಶ್ಮಿಕಾ ಕೈಯಲ್ಲಿದೆ.


Click it and Unblock the Notifications











