'ಲೈಗರ್' ಸೋಲಿನ ಬಳಿಕ ವಿಜಯ್ ದೇವರಕೊಂಡ ಭೇಟಿಯಾಗಿದ್ದ ರಶ್ಮಿಕಾ ಹೇಳಿದ್ದೇನು?
ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಬಾಲಿವುಡ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ವಿಕಾಸ್ ಬೆಹಲ್ ನಿರ್ದೇಶಿಸಿದ 'ಗುಡ್ ಬೈ' ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಈ ಸದ್ಯ ಬಿಡುಗಡೆಗೆ ಸಜ್ಜಾಗಿದ್ದು, ಪ್ರಮೋಷನ್ ಮಾಡುತ್ತಿದ್ದಾರೆ.
'ಗುಡ್ ಬೈ' ಪ್ರಚಾರದ ವೇಳೆ ರಶ್ಮಿಕಾ ಮಂದಣ್ಣ ತನ್ನ ಗೆಳೆಯನ ಬಗ್ಗೆ ಮನಬಿಚ್ಚಿ ಮಾತಾಡಿದ್ದಾರೆ. ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಇಬ್ಬರೂ ಇಂಡಸ್ಟ್ರಿಯಲ್ಲಿ ಕ್ಲೋಸ್ ಅನ್ನೋದು ಎಲ್ಲರಿಗೂ ಗೊತ್ತಿದೆ. ಹೀಗಾಗಿ ತಮ್ಮ ಸಿನಿಮಾ ಪ್ರಚಾರ ಮಾಡುವಾಗ, ವಿಜಯ್ ದೇವರಕೊಂಡ ಬಗ್ಗೆ ಪ್ರಶ್ನೆ ಮಾಡಿದ್ದರು. ಈ ವೇಳೆ ರಶ್ಮಿಕಾ 'ಲೈಗರ್' ಸಿನಿಮಾ ಹಾಗೂ ಅದರ ಸೋಲಿನ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ತಿಳಿಸಿದ್ದಾರೆ.
'ಲೈಗರ್' ಈ ವರ್ಷ ಬಾಕ್ಸಾಫೀಸ್‌ನಲ್ಲಿ ಹೀನಾಯವಾಗಿ ಸೋಲುಂಡ ಸಿನಿಮಾ. ಹೀಗಾಗಿ ರಶ್ಮಿಕಾ ಬಳಿಕ ಇದೇ ವಿಚಾರವಾಗಿ ಪ್ರಶ್ನೆ ಮಾಡಲಾಗಿತ್ತು. ಅದಕ್ಕೆ ರಶ್ಮಿಕಾ ಮಂದಣ್ಣ ತುಂಬಾನೇ ಕೂಲ್ ಆಗಿ ಉತ್ತರ ಕೊಟ್ಟಿದ್ದಾರೆ. ಅದರ ಸಾರಾಂಶ ಇಲ್ಲಿದೆ.

'ಲೈಗರ್' ಸಿನಿಮಾ ಬಗ್ಗೆ ರಶ್ಮಿಕಾ ಹೇಳಿದ್ದೇನು?
ರಶ್ಮಿಕಾ ಮಂದಣ್ಣ 'ಲೈಗರ್' ಚಿತ್ರದ ಸೋಲಿನ ಬಗ್ಗೆ ಮನಬಿಚ್ಚಿ ಮಾತಾಡಿದ್ದಾರೆ. " ಮಾಸ್ ಸಿನಿಮಾ ಲವರ್ ಆಗಿ ಈ ಸಿನಿಮಾವನ್ನು ಎಂಜಾಯ್ ಮಾಡಿದ್ದೇನೆ. ವಿಜಯ್ ದೇವರಕೊಂಡ ಅಭಿನಯ ಕೂಡ ತುಂಬಾನೇ ಇಷ್ಟ ಆಗಿದೆ" ಎಂದು ಹೇಳಿದ್ದಾರೆ. ಈ ಮೂಲಕ 'ಲೈಗರ್' ಬಾಕ್ಸಾಫೀಸ್‌ನಲ್ಲಿ ಸೋತರೂ ತನಗೆ ಇಷ್ಟ ಆಗಿದೆ ಅನ್ನೋದನ್ನು ರಶ್ಮಿಕಾ ಓಪನ್ ಆಗಿಯೇ ಹೇಳಿಕೆ ಕೊಟ್ಟಿದ್ದಾರೆ.

ವಿಜಯ್ ದೇವರಕೊಂಡ ಭೇಟಿ ಬಳಕ ಹೇಳಿದ್ದೇನು?
'ಲೈಗರ್' ಬಿಡುಗಡೆಯಾಗುತ್ತಿದ್ದಂತೆ ರಶ್ಮಿಕಾ ಮಂದಣ್ಣ ಗೆಳೆಯ ವಿಜಯ್ ದೇವರಕೊಂಡರನ್ನು ಭೇಟಿ ಮಾಡಿರೋ ಬಗ್ಗೆ ಹೇಳಿದ್ದಾರೆ. ಈ ಸಂದರ್ಭದಲ್ಲಿ ವಿಜಯ್ ಅಭಿನಯ ಹಾಗೂ ದೈಹಿಕ ಬದಲಾವಣೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದನ್ನು ಮಾಧ್ಯಮಗಳ ಮುಂದೆ ತಿಳಿಸಿದ್ದಾರೆ. ರಶ್ಮಿಕಾ ಮಂದಣ್ಣ ಸಂದರ್ಶನ ನೀಡಿದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

ರಶ್ಮಿಕಾ-ವಿಜಯ್ ಲವ್ ಸ್ಟೋರಿ!
ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಇಬ್ಬರೂ ಡೇಟಿಂಗ್ ಮಾಡುತ್ತಿರೋ ಬಗ್ಗೆ ಸುದ್ದಿಯಾಗಿತ್ತು. ಆದರೆ, ರಶ್ಮಿಕಾ ಮಂದಣ್ಣ ಬಾಲಿವುಡ್‌ಗೆ ಹೋದ ಬಳಿಕ ಇಬ್ಬರ ನಡುವೆ ಅಂತರ ಕಾಣಿಸಿಕೊಂಡಿದೆ ಎಂದು ವರದಿಯಾಗಿತ್ತು. ಇಬ್ಬರೂ ಬ್ರೇಕಪ್ ಮಾಡಿಕೊಂಡಿದ್ದಾರೆ ಅನ್ನೋ ಸುದ್ದಿ ಬಾಲಿವುಡ್‌ನಲ್ಲಿ ಹರಿದಾಡಿತ್ತು. ಆದರೆ, ಈ ಬಗ್ಗೆ ರಶ್ಮಿಕಾ ಮಂದಣ್ಣ ಆಗಲಿ ಅಥವಾ ವಿಜಯ್ ದೇವರಕೊಂಡ ಇಬ್ಬರೂ ಪ್ರತಿಕ್ರಿಯೆ ನೀಡುವುದಕ್ಕೆ ಹೋಗಿರಲಿಲ್ಲ.

'ಗುಡ್ ಬೈ' ಸಿನಿಮಾದಲ್ಲಿ ಬ್ಯುಸಿ
ರಶ್ಮಿಕಾ ಮಂದಣ್ಣ ಬಾಲಿವುಡ್‌ಗೆ ಶಿಫ್ಟ್ ಆಗಿರೋದು ಗೊತ್ತೇ ಇದೆ. ಬಾಲಿವುಡ್‌ನಲ್ಲಿ ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಮೊದಲ ಸಿನಿಮಾ 'ಮಿಷನ್ ಮಜ್ನು' ಶೂಟಿಂಗ್ ಮುಗಿದಿದೆ. ಅಮಿತಾಭ್ ಬಚ್ಚನ್ ಜೊತೆ ರಶ್ಮಿಕಾ ಮಂದಣ್ಣ ನಟಿಸಿದ 'ಗುಡ್ ಬೈ' ಬಿಡುಗಡೆಗೆ ಸಜ್ಜಾಗಿದೆ. ಇದೇ ಅಕ್ಟೋಬರ್ 7ರಂದು ಸಿನಿಮಾ ವಿಶ್ವದಾದ್ಯಂತ ಬಿಡುಗಡೆಯಾಗುತ್ತಿದೆ. ಇದರೊಂದಿಗೆ ಇನ್ನೂ ಎರಡು ಸಿನಿಮಾಗಳು ಶೂಟಿಂಗ್ ಹಂತದಲ್ಲಿವೆ.


Click it and Unblock the Notifications











