ವಿಜಯ್ ದೇವರಕೊಂಡ ಜೊತೆ ಗೋವಾ ಟ್ರಿಪ್ ಎಂಜಾಯ್ ಮಾಡುತ್ತಿರುವ ರಶ್ಮಿಕಾ

By ಫಿಲ್ಮಿಬೀಟ್ ಡೆಸ್ಕ್

ನಟಿ ರಶ್ಮಿಕಾ ಮಂದಣ್ಣ ಸದ್ಯ ಸಿನಿಮಾ ಕೆಲಸದಿಂದ ಬ್ರೇಕ್ ಪಡೆದು ಪ್ರವಾಸಕ್ಕೆ ತೆರಳಿದ್ದಾರೆ. ರಶ್ಮಿಕಾ ಸದ್ಯ ಗೋವಾದಲ್ಲಿ ಬೀಡುಬಿಟ್ಟಿದ್ದು, ಗೆಳೆಯ ವಿಜಯ್ ದೇವರಕೊಂಡ ಜೊತೆ ಟ್ರಿಪ್ ಎಂಜಾಯ್ ಮಾಡುತ್ತಿದ್ದಾರೆ ಎನ್ನುವ ಮಾಹಿತಿ ತಿಳಿದುಬಂದಿದೆ. ವಿಜಯ್ ದೇವರಕೊಂಡ ಸದ್ಯ ಲೈಗರ್ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಇತ್ತೀಚಿಗಷ್ಟೆ ವಿಜಯ್ ಲೈಗರ್ ಸಿನಿಮಾದ ಚಿತ್ರೀಕರಣ ಪ್ರಾರಂಭ ಮಾಡಿದ್ದು, ಗೋವಾದಲ್ಲಿ ಚಿತ್ರೀಕರಣ ನಡೆಯುತ್ತಿದೆ. ಸದ್ಯ ವಿಜಯ್ ದೇವರಕೊಂಡ ಭಾಗದ ಗೋವಾ ಚಿತ್ರೀಕರಣ ಮುಕ್ತಾಯವಾಗಿದೆ. ವಿಜಯ್ ಚಿತ್ರೀಕರಣ ಮುಗಿಸುತ್ತಿದ್ದಂತೆ ರಶ್ಮಿಕಾ ಗೋವಾಗೆ ಹಾರಿದ್ದಾರೆ.

ಗೋವಾದಲ್ಲಿರುವ ರಶ್ಮಿಕಾ ಅಲ್ಲಿನ ಸುಂದರ ಫೋಟೋಗಳನ್ನು ಶೇರ್ ಮಾಡುತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಗೋವಾದ ಒಂದಿಷ್ಟು ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಸೆಲ್ಫಿ ಜೊತೆಗೆ ರಶ್ಮಿಕಾ ಒಂದಿಷ್ಟು ಪ್ರಕೃತಿ ಫೋಟೋ ಶೇರ್ ಮಾಡಿ 'ಹೊಸ ಮನೆ' ಎಂದು ಬರೆದುಕೊಂಡಿದ್ದಾರೆ. ಇದೀಗ ಗೋವಾದಲ್ಲಿ ವಿಜಯ್ ದೇವರಕೊಂಡ ಜೊತೆ ಸಮಯ ಕಳೆಯುತ್ತಿರುವುದು ಅಭಿಮಾನಿಗಳ ಹುಬ್ಬೇರಿಸುವಂತೆ ಮಾಡಿದೆ.

ರಶ್ಮಿಕಾ ಮತ್ತು ವಿಜಯ್ ದೇವರಕೊಂಡ ಆಗಾಗ ಒಟ್ಟಿಗೆ ಕಾಣಿಸಿಕೊಳ್ಳುತ್ತಿರುತ್ತಾರೆ. ಮುಂಬೈನಲ್ಲಿ ಹೈದರಾಬಾದ್ ನಲ್ಲಿ ಇಬ್ಬರೂ ಒಟ್ಟಿಗೆ ಕ್ಯಾಮರಾ ಕಣ್ಣಿಗೆ ಸೆರೆಯಾಗುತ್ತಿರುತ್ತಾರೆ. ಆದರೀಗ ಗೋವಾದಲ್ಲಿ ಒಟ್ಟಿಗೆ ಸಮಯ ಕಳೆಯುತ್ತಿರುವುದು ಅಭಿಮಾನಿಗಳ ಅಚ್ಚರಿಗೆ ಕಾರಣವಾಗಿದೆ.

 Rashmika Mandanna in Goa with Vijay Devarakonda

ವಿಜಯ್ ಮತ್ತು ರಶ್ಮಿಕಾ ನಡುವೆ ಸ್ನೇಹಕ್ಕಿಂತ ಮಿಗಿಲಾದ ಬಂಧವಿದೆ ಎನ್ನುವ ಮಾತು ಆಗಾಗ ಕೇಳಿಬರುತ್ತಿರುತ್ತದೆ. ಇಬ್ಬರು ಡೇಟಿಂಗ್ ನಲ್ಲಿದ್ದಾರೆ, ಪ್ರೀತಿ-ಪ್ರೇಮ ಹೀಗೆ ಸಾಕಷ್ಟು ವಿಚಾರಗಳು ಹರಿದಾಡುತ್ತಿದ್ದರೂ ಇಬ್ಬರೂ ಯಾವುದಕ್ಕೂ ತಲೆಕೆಡಿಸಿಕೊಂಡಿಲ್ಲ. ಈ ಬಗ್ಗೆ ಕೇಳಿದ್ರೆ ಇಬ್ಬರು ಫ್ರೆಂಡ್ಸ್ ಅಷ್ಟೆ ಎಂದು ಹೇಳಿಕೊಂಡು ಓಡಾಡುತ್ತಿದ್ದಾರೆ.

ಇತ್ತೀಚಿಗಷ್ಟೆ ಆಂಗ್ಲ ಮಾಧ್ಯಮಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ್ದ ರಶ್ಮಿಕಾ, "ನಾವು ಉತ್ತಮ ಸ್ನೇಹಿತರು ಎಂದು ಬಾವಿಸಿದ್ದೇನೆ. ಅಕ್ಷರಶಃ ಆಫ್ ಸ್ಕ್ರೀನ್ ನಲ್ಲಿ ನನ್ನ ಉತ್ತಮ ಸ್ನೇಹಿತ. ತೆರೆಮೇಲಿನ ಕೆಮಿಸ್ಟ್ರಿಗಾಗಿ ನಾವು ಕಷ್ಟಪಡಬೇಕಾಗಿಲ್ಲ. ನಾವಿಬ್ಬರು ತೆರೆಮೇಲೆ ಮೇಲೆ ಕೆಲಸ ಮಾಡುತ್ತೇವೆ" ಎಂದು ಹೇಳಿದ್ದರು. ಈ ಜೋಡಿ ಈಗಾಗಲೇ ಎರಡು ಸಿನಿಮಾಗಳಲ್ಲಿ ಒಟ್ಟಿಗೆ ನಟಿಸಿದ್ದಾರೆ. 3ನೇ ಸಿನಿಮಾ ಯಾವಾಗ ಎಂದು ಅಭಿಮಾನಿಗಳು ಕಾಯುತ್ತಿದ್ದಾರೆ.

ಇನ್ನು ರಶ್ಮಿಕಾ ಸಿನಿಮಾ ವಿಚಾರಕ್ಕೆ ಬರುವುದಾದರೆ ರಶ್ಮಿಕಾ ಸದ್ಯ ಬಾಲಿವುಡ್ ನಲ್ಲಿ ಎರಡು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಮಿಷನ್ ಮಜ್ನು ಮತ್ತು ಗುಡ್ ಬೈ. ಈಗಾಗಲೇ ಮಿಷನ್ ಮಜ್ನು ಸಿನಿಮಾದ ಶೂಟಿಂಗ್ ಮುಗಿಸಿರುವ ರಶ್ಮಿಕಾ ಬಿಡುಗಡೆಗೆ ಕಾಯುತ್ತಿದ್ದಾರೆ. ಇನ್ನು ಗುಡ್ ಬೈ ಸಿನಿಮಾದ ಚಿತ್ರೀಕರಣ ನಡೆಯುತ್ತಿದೆ. ತೆಲುಗಿನಲ್ಲಿ ಪುಷ್ಪ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಇತ್ತೀಚೆಗಷ್ಟೇ ಪುಷ್ಪ ಸಿನಿಮಾದ ಫಸ್ಟ್ ಲುಕ್ ಬಿಡುಗಡೆಯಾಗಿದ್ದು, ವಿಭಿನ್ನ ಲುಕ್ ನಲ್ಲಿ ರಶ್ಮಿಕಾ ಕಾಣಿಸಿಕೊಂಡಿದ್ದಾರೆ. ವಿಜಯ್ ದೇವರಕೊಂಡ ಸದ್ಯ ಲೈಗರ್ ಚಿತ್ರದಲ್ಲಿ ನಟಿಸುತ್ತಿದ್ದಾರೆ.

More from Filmibeat

English summary
Actress Rashmika Mandanna enjoy holiday in Goa with vijay devarakonda.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X