"ಭವಿಷ್ಯದಲ್ಲಿ ಏನೆಲ್ಲಾ ಆಗತ್ತೆ ಎಂದು ಊಹಿಸಿಕೊಂಡರೆ ಭಯವಾಗುತ್ತೆ": ರಶ್ಮಿಕಾ ಫೇಕ್ ವಿಡಿಯೋ ಬಗ್ಗೆ ಚೈತು ಗರಂ

Rashmika Deepfake: ರಶ್ಮಿಕಾ ಮಂದಣ್ಣ ಡೀಪ್‌ಫೇಕ್ ವಿಡಿಯೋ ವಿಚಾರ ಭಾರೀ ಚರ್ಚೆ ಹುಟ್ಟಾಕ್ಕಿದೆ. ಕಿಡಿಗೇಡಿಗಳು ಬೇರೆ ಯುವತಿಯ ವಿಡಿಯೋಗೆ ರಶ್ಮಿಕಾ ಮುಖವನ್ನು ಮಾರ್ಪ್‌ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ತೇಲಿಬಿಟ್ಟಿದ್ದಾರೆ. ಈ ಬಗ್ಗೆ ಸಾಕಷ್ಟು ಜನ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಟ ಅಮಿತಾಬ್‌ ಬಚ್ಚನ್ ಸೇರಿದಂತೆ ಸಾಕಷ್ಟು ಜನ ಸೆಲೆಬ್ರೆಟಿಗಳು ಕೂಡ ಸೂಕ್ತ ಕ್ರಮಕ್ಕೆ ಆಗ್ರಹಿಸಿದ್ದಾರೆ.

ಸೆಲೆಬ್ರೆಟಿಗಳ ಫೋಟೊ, ವಿಡಿಯೋಗಳನ್ನು ಈ ರೀತಿ ಮಾರ್ಪ್‌ ಮಾಡಿ ಕಿಡಿಗೇಡಿಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಮಾಡೋದು ಇತ್ತೀಚೆಗೆ ಹೆಚ್ಚಾಗುತ್ತಿದೆ. ಇನ್ನು ರಶ್ಮಿಕಾ ಡೀಪ್ ಫೇಕ್ ವಿಡಿಯೋ ಬಗ್ಗೆ ಚರ್ಚೆಯಾಗುತ್ತಿದ್ದಂತೆ ಕೇಂದ್ರ ಮಾಹಿತಿ ತಂತ್ರಜ್ಞಾನ ಸಚಿವರಾದ ರಾಜೀವ್ ಚಂದ್ರಶೇಖರ್ ಪ್ರತಿಕ್ರಿಯಿಸಿದ್ದಾರೆ. ಎಕ್ಸ್‌(ಟ್ವೀಟ್) ಜಾಲತಾಣದಲ್ಲಿ ಈ ಬಗ್ಗೆ ಬರೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂತಹ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಕಂಡ ಕೂಡಲೇ ಏನು ಮಾಡಬೇಕು ಎನ್ನುವುದರ ಬಗ್ಗೆ ಸಲಹೆ ನೀಡಿದ್ದಾರೆ.

Naga Chaitanya reacts to Rashmika Mandannas viral deepfake video;

ಬಾಲಿವುಡ್ ನಟ ಅಮಿತಾಬ್ ಬಚ್ಚನ್ ಮೊದಲ ಬಾರಿಗೆ ಈ ಬಗ್ಗೆ ಪ್ರತಿಕ್ರಿಯಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದರು. ಬಳಿಕ ಗಾಯಕಿ ಚಿನ್ಮಯಿ ಶ್ರೀಪಾದ, ನಟರಾದ ನಾಗಚೈತನ್ಯಾ ಸೇರಿದಂತೆ ಹಲವರು ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಮ್ಮ ಬೆಂಬಲಕ್ಕೆ ನಿಂತ ಪ್ರತಿಯೊಬ್ಬರಿಗೂ ರಶ್ಮಿಕಾ ಮಂದಣ್ಣ ಧನ್ಯವಾದ ತಿಳಿಸುತ್ತಿದ್ದಾರೆ. ಇದಕ್ಕು ಮುನ್ನ ಈ ಫೇಕ್‌ ವಿಡಿಯೋ ಬಗ್ಗೆ ರಶ್ಮಿಕಾ ಮಂದಣ್ಣ ಮೌನ ಮುರಿದಿದ್ದರು.

ತೆಲುಗು ನಟ ನಾಗಚೈತನ್ಯಾ ಟ್ವೀಟ್ ಮಾಡಿ "ತಂತ್ರಜ್ಞಾನವನ್ನು ದುರುಪಯೋಗಪಡಿಸಿಕೊಳ್ಳುವುದು ನೋಡುತ್ತಿದ್ದರೆ ಬೇಸರವಾಗುತ್ತದೆ. ಭವಿಷ್ಯದಲ್ಲಿ ಏನೆಲ್ಲಾ ಆಗಬಹುದು ಎಂದು ಊಹಿಸಿಕೊಂಡರೆ ಭಯವಾಗುತ್ತದೆ. ಇದರ ಸಂತ್ರಸ್ತರಿಗೆ ರಕ್ಷಣೆ ನೀಡಲು ಸೂಕ್ತ ಕ್ರಮ ಕೈಗೊಳ್ಳಬೇಕು. ಹೊಸ ಕಾನೂನು ಜಾರಿಗೆ ತರಬೇಕು. ನಿಮಗೆ ಮತ್ತಷ್ಟು ಧೈರ್ಯ, ಶಕ್ತಿ ಸಿಗಲಿ" ಎಂದು ರಶ್ಮಿಕಾ ಟ್ವೀಟ್ ಟ್ಯಾಗ್ ಮಾಡಿ ಬರೆದುಕೊಂಡಿದ್ದಾರೆ. ಚೈತು ಬೆಂಬಲಕ್ಕೆ ರಶ್ಮಿಕಾ ಧನ್ಯವಾದ ತಿಳಿಸಿದ್ದಾರೆ.

Naga Chaitanya Tweets on Rashmika Mandannas viral deepfake video;

ಕೆಲವರು ವಿಡಿಯೋದಲ್ಲಿ ಇರುವುದು ರಶ್ಮಿಕಾ ಅಂತ್ಲೇ ಅಂದುಕೊಂಡಿದ್ದಾರೆ. ಆದರೆ ವಿಡಿಯೋದಲ್ಲಿರುವುದು ಹೊರ ದೇಶದಲ್ಲಿರುವ ಭಾರತೀಯ ಮೂಲದ ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ ಝರಾ ಪಟೇಲ್. ಆಕೆ ತುಂಡು ಬಟ್ಟೆಯಲ್ಲಿ ಲಿಫ್ಟ್ ಒಳಗೆ ಬರುವ ವಿಡಿಯೋಗೆ ರಶ್ಮಿಕಾ ಮುಖ ಅಂಟಿಸಿ ಕಿಡಿಗೇಡಿಗಳು ತೇಲಿಬಿಟ್ಟಿದ್ದಾರೆ. ಈ ಬಗ್ಗೆ ಪತ್ರಕರ್ತ ಅಭಿಷೇಕ್ ಎಂಬುವವರು ಮೊದಲಿಗೆ ವಿವರಣೆ ನೀಡಿದ್ದರು. 2 ವಿಡಿಯೋಗಳನ್ನು ತೋರಿಸಿ ಸತ್ಯಾಸತ್ಯತೆ ಬಗ್ಗೆ ವಿವರಿಸಿದ್ದರು. ಈ ಪೋಸ್ಟ್‌ ರೀಟ್ವೀಟ್ ಮಾಡಿ ಅಮಿತಾಬ್ ಬಚ್ಚನ್ ಅಸಮಾಧಾನ ವ್ಯಕ್ತಪಡಿಸಿದ್ದರು.

ವೈರಲ್ ವೀಡಿಯೋ ಬಗ್ಗೆ ಪ್ರತಿಕ್ರಿಯಿಸಿದ್ದ ರಶ್ಮಿಕಾ, "ಇದನ್ನು ಹಂಚಿಕೊಳ್ಳಲು ನನಗೆ ತುಂಬಾ ನೋವಾಗಿದೆ. ಆದರೂ, ಆನ್‌ಲೈನ್‌ನಲ್ಲಿ ವೈರಲ್ ಆಗುತ್ತಿರುವ ನನ್ನ ಡೀಪ್‌ಫೇಕ್ ವೀಡಿಯೊದ ಬಗ್ಗೆ ಮಾತನಾಡಬೇಕಾಗಿದೆ. ಪ್ರಾಮಾಣಿಕವಾಗಿ ಹೇಳಬೇಕೆಂದರೇ, ಈ ರೀತಿ ಏನಾದರೂ ಆಗುವುದು ನನಗೆ ಮಾತ್ರವಲ್ಲ, ಪ್ರತಿಯೊಬ್ಬರಿಗೂ ತುಂಬಾ ಭಯಾನಕ. ತಂತ್ರಜ್ಞಾನ ದುರುಪಯೋಗಪಡಿಸಿಕೊಳ್ಳುತ್ತಿರುವ ಕಾರಣದಿಂದಾಗಿ ಇಂದು ನಮ್ಮಲ್ಲಿ ಹಲವರು ಇಂತಹ ಘಟನೆಗಳಿಗೆ ಗುರಿಯಾಗುತ್ತಿದ್ದಾರೆ"

"ಇಂದು, ಮಹಿಳೆಯಾಗಿ ಮತ್ತು ನಟಿಯಾಗಿ, ನನ್ನ ರಕ್ಷಣೆಗೆ ಮತ್ತು ಬೆಂಬಲಕ್ಕೆ ಬಂದ ನನ್ನ ಕುಟುಂಬ, ಸ್ನೇಹಿತರು ಮತ್ತು ಹಿತೈಷಿಗಳಿಗೆ ನಾನು ಕೃತಜ್ಞಳಾಗಿದ್ದೇನೆ. ಆದರೆ, ನಾನು ಶಾಲೆ ಅಥವಾ ಕಾಲೇಜಿನಲ್ಲಿದ್ದಾಗ ಇಂತಹ ಘಟನೆ ನಡೆದಿದ್ದರೇ, ಅದನ್ನು ಹೇಗೆ ನಿಭಾಯಿಸುತ್ತಿದ್ದೇ ಎಂಬುದು ನಿಜಕ್ಕೂ ನನಗೆ ಗೊತ್ತಿಲ್ಲ. ನಮ್ಮಲ್ಲಿ ಹೆಚ್ಚಿನವರು ಇಂತಹ ಕೆಟ್ಟ ಘಟನೆಗೆ ಸಾಕ್ಷಿಯಾಗುವ ಮೊದಲು ನಾವು ಇದನ್ನು ಒಂದು ಸಮುದಾಯವಾಗಿ ಆದಷ್ಟು ತುರ್ತಾಗಿ ಪರಿಹರಿಸಬೇಕಾಗಿದೆ" ಎಂದು ಬರೆದುಕೊಂಡಿದ್ದರು.

More from Filmibeat

English summary
Naga Chaitanya reacts to Rashmika Mandanna's viral deepfakevideo.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X