For Quick Alerts
  ALLOW NOTIFICATIONS  
  For Daily Alerts

  ಸೂಪರ್ ಸ್ಟಾರ್‌ ರಜನಿಕಾಂತ್‌ಗೆ ಆಕ್ಷನ್ ಕಟ್? ರಾಜಮೌಳಿ ಹೇಳಿದ್ದೇನು?

  |

  ರಾಜಮೌಳಿ ನಿರ್ದೇಶನದ ಮೆಗಾ ಮಲ್ಟಿಸ್ಟಾರರ್ 'RRR' ಸಿನಿಮಾ ಬಾಕ್ಸಾಫೀಸ್ ಶೇಕ್ ಮಾಡಿದ್ದು ಗೊತ್ತೇಯಿದೆ. ಜಕ್ಕಣ್ಣ ಮುಂದಿನ ಸಿನಿಮಾ ಯಾವುದು ಅನ್ನುವು ಕುತೂಹಲ ಗರಿಗೆದರಿದೆ. ಸೂಪರ್ ಸ್ಟಾರ್ ಮಹೇಶ್‌ ಬಾಬು ಕಾಂಬಿನೇಷನ್‌ನಲ್ಲಿ ಸಿನಿಮಾ ಮಾಡೋದಾಗಿ ಮೌಳಿ ಹೇಳಿದ್ದಾರೆ. ಆದರೆ ಸದ್ಯಕ್ಕೆ ಆ ಸಿನಿಮಾ ಸೆಟ್ಟೇರುವ ಲಕ್ಷಣಗಳು ಕಾಣುತ್ತಿಲ್ಲ. ತ್ರಿವಿಕ್ರಮ್ ಶ್ರೀನಿವಾಸ್ ನಿರ್ದೇಶನದಲ್ಲಿ ಚಿತ್ರದಲ್ಲಿ ಮಹೇಶ್ ಬಾಬು ನಟಿಸಬೇಕಿದೆ. ಆ ಸಿನಿಮಾ ಶೂಟಿಂಗ್ ಮುಗಿದ ಮೇಲೆ ರಾಜಮೌಳಿ ನಿರ್ದೇಶನದಲ್ಲಿ ಟಾಲಿವುಡ್ ಪ್ರಿನ್ಸ್ ಬಣ್ಣ ಹಚ್ಚಲಿದ್ದಾರೆ. ಇದೆಲ್ಲದರ ನಡುವೆ ರಜನಿಕಾಂತ್‌ಗೆ ಆಕ್ಷನ್ ಕಟ್ ಹೇಳುವು ಬಗ್ಗೆ ಮೌಳಿ ಮಾತನಾಡಿದ್ದಾರೆ.

  ಸೂಪರ್ ಸ್ಟಾರ್ ರಜನಿಕಾಂತ್‌ ಜೊತೆ ಕೆಲಸ ಮಾಡಬೇಕು ಎನ್ನುವ ಆಸೆ ಯಾವ ನಿರ್ದೇಶಕರಿಗೆ ಇರೋದಿಲ್ಲ ಹೇಳಿ. ಮಾಸ್ ಮಹಾರಾಜ ತಲೈವಾಗೆ ಆಕ್ಷನ್ ಕಟ್ ಹೇಳುವುದು ಎಲ್ಲಾ ನಿರ್ದೇಶಕರ ಕನಸಾಗಿರುತ್ತದೆ. ಆದರೆ ಕೆಲವರಿಗೆ ಮಾತ್ರ ಅಂತಹ ಅವಕಾಶ ಸಿಗುತ್ತದೆ. ಸದ್ಯ 'ಬ್ರಹ್ಮಾಸ್ತ್ರ' ಸಿನಿಮಾ ಪ್ರಮೋಷನ್‌ನಲ್ಲಿ ಭಾಗವಹಿಸಿರುವ ನಿರ್ದೇಶಕ ರಾಜಮೌಳಿ ತಲೈವಾ ಜೊತೆ ಸಿನಿಮಾ ಮಾಡುವ ಇಂಗಿತ ವ್ಯಕ್ತಪಡಿಸಿದ್ದಾರೆ. ಸೆಪ್ಟೆಂಬರ್ 9ಕ್ಕೆ ರಣ್‌ಬೀರ್ ಕಪೂರ್ ಹಾಗೂ ಆಲಿಯಾ ಭಟ್ ಜೋಡಿಯಾ 'ಬ್ರಹ್ಮಾಸ್ತ್ರ' ಸಿನಿಮಾ ತೆರೆಗೆ ಬರ್ತಿದೆ. ದಕ್ಷಿಣದ ಭಾಷೆಗಳಿಗೂ ಸಿನಿಮಾ ಡಬ್ ಆಗಿ ರಿಲೀಸ್ ಆಗುತ್ತಿದ್ದು, ರಾಜಮೌಳಿ ಚಿತ್ರತಂಡ ಬೆನ್ನಿಗೆ ನಿಂತಿದ್ದಾರೆ. ಚೆನ್ನೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಸಾಕಷ್ಟು ವಿಷಯಗಳ ಬಗ್ಗೆ ಜಕ್ಕಣ್ಣ ಮಾತನಾಡಿದ್ದಾರೆ.

  ಓಟಿಟಿಯಲ್ಲೂ RRR ಹೊಸ ದಾಖಲೆ: ಹಾಲಿವುಡ್‌ ಸಿನಿಮಾಗಳನ್ನೇ ಹಿಂದಿಕ್ಕಿದ ಜಕ್ಕಣನ ಸಿನಿಮಾ!ಓಟಿಟಿಯಲ್ಲೂ RRR ಹೊಸ ದಾಖಲೆ: ಹಾಲಿವುಡ್‌ ಸಿನಿಮಾಗಳನ್ನೇ ಹಿಂದಿಕ್ಕಿದ ಜಕ್ಕಣನ ಸಿನಿಮಾ!

  ತಮಿಳಿನಲ್ಲಿ ಯಾವ ಹೀರೋ ಜೊತೆ ಕೆಲಸ ಮಾಡುವ ಆಸೆ ಇದೆ ಎನ್ನುವ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿರುವ ರಾಜಮೌಳಿ "ಸೂಪರ್ ಸ್ಟಾರ್ ರಜನಿಕಾಂತ್‌ಗೆ ಆಕ್ಷನ್ ಕಟ್ ಹೇಳುವ ಕನಸಿದೆ. ಕೊನೆ ಪಕ್ಷ ಒಂದು ದಿನವಾದರೂ ಅವರೊಟ್ಟಿಗೆ ಕೆಲಸ ಮಾಡುವ ಆಸೆ ಇದೆ" ಎಂದು ಹೇಳಿದ್ದಾರೆ. ಸೋಲಿಲ್ಲದ ಸರದಾರ ಎಸ್‌. ಎಸ್‌ ರಾಜಮೌಳಿ ತಮ್ಮ ಅದ್ಭುತ ಕಲ್ಪನೆ ಹಾಗೂ ಸಿನಿಮಾ ಮೇಕಿಂಗ್‌ನಿಂದ ಪ್ರೇಕ್ಷಕರನ್ನು ಹೊಸ ಲೋಕಕ್ಕೆ ಕರೆದುಕೊಂಡು ಹೋಗುವ ಜಾದೂಗಾರ. 'ಬಾಹುಬಲಿ' ಸರಣಿ, 'RRR' ಸಿನಿಮಾಗಳ ನಂತರ ಮತ್ತೊಂದು ಪ್ಯಾನ್ ಇಂಡಿಯಾ ಪ್ರಾಜೆಕ್ಟ್‌ಗೆ ಜಕ್ಕಣ್ಣ ಪ್ಲ್ಯಾನ್ ಮಾಡುತ್ತಿದ್ದಾರೆ. ಸಿನಿಮಾ ಪ್ರೀ ಪ್ರೊಡಕ್ಷನ್ ವರ್ಕ್ ಜೋರಾಗಿ ನಡೀತಿದೆ. ಮುಂದಿನ ವರ್ಷದ ಆರಂಭದಲ್ಲಿ ಸಿನಿಮಾ ಸೆಟ್ಟೇರುವ ಸಾಧ್ಯತೆಯಿದೆ.

  ಸೂಪರ್ ಸ್ಟಾರ್ ರಜನಿಕಾಂತ್ 'ಜೈಲರ್' ಚಿತ್ರದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ. ನೆಲ್ಸನ್ ದಿಲೀಪ್ ಕುಮಾರ್ ನಿರ್ದೇಶನದ ಈ ಆಕ್ಷನ್ ಥ್ರಿಲ್ಲರ್ ಸಿನಿಮಾ ಭಾರೀ ನಿರೀಕ್ಷೆ ಮೂಡಿಸಿದೆ. ಐಶ್ವರ್ಯ ರೈ, ರಮ್ಯಾಕೃಷ್ಣ, ಸೆಂಚುರಿ ಸ್ಟಾರ್ ಶಿವರಾಜ್‌ಕುಮಾರ್ ಸೇರಿದಂತೆ ದೊಡ್ಡ ತಾರಾಗಣ ಈ ಚಿತ್ರದಲ್ಲಿದೆ. ಸನ್ ಪಿಕ್ಚರ್ಸ್ ಬ್ಯಾನರ್‌ನಲ್ಲಿ ಬಹಳ ಅದ್ಧೂರಿಯಾಗಿ ಸಿನಿಮಾ ನಿರ್ಮಾಣವಾಗಲಿದೆ. ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಅಭಿಮಾನಿಗಳ ಮನಗೆದ್ದಿದೆ. ರಾಜಮೌಳಿ ನಿರ್ದೇಶನದಲ್ಲಿ ರಜನಿಕಾಂತ್ ನಟಿಸಿದ್ರೆ, ಆ ಸಿನಿಮಾ ಭಾರತೀಯ ಚಿತ್ರರಂಗದ ಎಲ್ಲಾ ಬಾಕ್ಸಾಫೀಸ್ ದಾಖಲೆಗಳನ್ನು ಅಳಿಸುವುದು ಗ್ಯಾರೆಂಟಿ. ಇಂತಾದೊಂದು ಡೆಡ್ಲಿ ಕಾಂಬಿನೇಷನ್‌ ಪ್ರಾಜೆಕ್ಟ್‌ಗಾಗಿ ಸಿನಿರಸಿಕರು ಕೂಡ ಕಾಯುತ್ತಿದ್ದಾರೆ.

  English summary
  RRR Director Rajamouli wishes to Work with Superstar Rajinikanth. Know More.
  Thursday, August 25, 2022, 0:35
  IIFA

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X