For Quick Alerts
  ALLOW NOTIFICATIONS  
  For Daily Alerts

  RRR ಚಿತ್ರ ಫೈಟಿಂಗ್ ದೃಶ್ಯ ವೈರಲ್: ಮೈ ಜುಂ ಎನಿಸುವಂತಿಸದೆ ಮೇಕಿಂಗ್!

  |

  ಭಾರತೀಯ ಚಿತ್ರರಂಗದಲ್ಲಿ ಭಾರಿ ನಿರೀಕ್ಷೆಗಳನ್ನು ಮೂಡಿಸಿರುವ ಚಿತ್ರ ಆರ್ ಆರ್ ಆರ್. ಜೂನಿಯರ್ ಎನ್ ಟಿ ಆರ್ ಮತ್ತು ರಾಮ್ ಚರಣ್ ತೇಜ ನಟಿಸುತ್ತಿರುವ ಈ ಚಿತ್ರವನ್ನು ರಾಜಮೌಳಿ ನಿರ್ದೇಶನ ಮಾಡುತ್ತಿರುವುದರಿಂದ ಬಾಕ್ಸ್ ಆಫೀಸ್ ಲೆಕ್ಕಾಚಾರ ದೊಡ್ಡದಾಗಿ ನಡೆದಿದೆ.

  ಇತ್ತೀಚಿಗಷ್ಟೆ ಜೂನಿಯರ್ ಎನ್ ಟಿ ಆರ್ ವರ್ಷನ್ ಟೀಸರ್ ಬಿಡುಗಡೆಯಾಗಿತ್ತು. ಕೊಮ್ಮರಂ ಭೀಮ್ ಪಾತ್ರದಲ್ಲಿ ಎನ್‌ಟಿಆರ್ ಹೇಗೆ ಕಾಣಿಸಿಕೊಂಡಿದ್ದಾರೆ ಎಂಬ ಝಲಕ್ ಅನಾವರಣಗೊಂಡಿತ್ತು.

  ಜೂ.ಎನ್‌ಟಿಆರ್ ಪಾತ್ರದ ಬಗ್ಗೆ ನಿಜ ಕೋಮರಂ ಭೀಮ್ ಮೊಮ್ಮಗನ ಆಕ್ಷೇಪ

  ಟೀಸರ್‌ ನೋಡಿ ಚಿತ್ರಪ್ರೇಮಿಗಳು ಸಿಕ್ಕಾಪಟ್ಟೆ ಥ್ರಿಲ್ ಆಗಿದ್ದರು. ಇದಕ್ಕೂ ಮುಂಚೆ ಅಲ್ಲುರಿ ಸೀತಾರಾಮ ರಾಜು ಪಾತ್ರದಲ್ಲಿ ರಾಮ್ ಚರಣ್ ಹೇಗೆ ಕಾಣಿಸಿಕೊಳ್ಳಲಿದ್ದಾರೆ ಎಂಬ ಟೀಸರ್ ಸಹ ಬಿಡುಗಡೆಯಾಗಿತ್ತು.

  ಪ್ರತಿಯೊಂದು ಹಂತದಲ್ಲೂ ಭಾರಿ ಸದ್ದು ಮಾಡುತ್ತಿರುವ ಆರ್ ಆರ್ ಆರ್ ಸಿನಿಮಾ ಈಗ ಆಕ್ಷನ್ ದೃಶ್ಯದ ಮೇಕಿಂಗ್‌ಗಾಗಿ ಸುದ್ದಿಯಾಗಿದೆ. RRR ಚಿತ್ರದ ಫೈಟಿಂಗ್ ದೃಶ್ಯಕ್ಕಾಗಿ ಅದ್ಧೂರಿ ಸೆಟ್ ನಿರ್ಮಿಸಿದ್ದು, ಮೇಕಿಂಗ್ ಮಾಡುತ್ತಿರುವ ವಿಡಿಯೋವನ್ನು ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದಾರೆ.

  15 ಸೆಕೆಂಡ್‌ಗಳ ಈ ಮೇಕಿಂಗ್ ವಿಡಿಯೋದಲ್ಲಿ ಸಹಾಯಕ ಛಾಯಾಗ್ರಾಹಕ ಸೆಂಥಿಲ್ ಕುಮಾರ್ ಮಾಹಿತಿ ನೀಡುತ್ತಿದ್ದು, ''ಫೈಟಿಂಗ್ ದೃಶ್ಯ ಚಿತ್ರೀಕರಣ ಮಾಡ್ತಿದ್ದೀವಿ. ರಾತ್ರಿ ಶೂಟಿಂಗ್ ನಡೆಯುತ್ತಿದೆ, ಇದನ್ನು ತೆರೆಮೇಲೆ ನೋಡುವುದು ಮಜಾ ಇರುತ್ತೆ'' ಎಂದು ಮಾಹಿತಿ ನೀಡಿದ್ದಾರೆ.

  ಇವನ ಬೆನ್ನು ತಟ್ಟಿ ಆಶೀರ್ವಾದ ಮಾಡಿ | NodidavaruEnantare | Umapathy Srinivas | Filmibeat Kannada

  ಆಲಿಯಾ ಭಟ್ ನಾಯಕಿಯಾಗಿ ಕಾಣಿಸಿಕೊಂಡಿದ್ದು, ನವೆಂಬರ್‌ ತಿಂಗಳಲ್ಲಿ ಚಿತ್ರತಂಡ ಸೇರಿಕೊಳ್ಳಲಿದ್ದಾರೆ. ಸ್ವಾತಂತ್ರ್ಯ ಪೂರ್ವ ಕಥಾಹಂದರ ಹೊಂದಿರುವ ಈ ಚಿತ್ರ ಭಾರಿ ಬಜೆಟ್‌ನಲ್ಲಿ ತಯಾರಾಗುತ್ತಿದೆ. ಅಜಯ್ ದೇವಗನ್ ಮತ್ತು ಶ್ರಿಯಾ ಶರಣ್ ಸಹ ಈ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

  English summary
  RRR movie fight sequence video viral. the movie directed by SS Rajamouli.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X