ಜೂ.ಎನ್ ಟಿ ಆರ್ ಅಭಿಮಾನಿಗಳಿಗೆ ಕಾದಿದೆ ಬಿಗ್ ಸರ್ಪ್ರೈಸ್: ಏನದು?

ಟಾಲಿವುಡ್ ಸ್ಟಾರ್ ನಟ ಜೂ.ಎನ್ ಟಿ ಆರ್ ಅಭಿಮಾನಿಗಳಿಗೆ 'ಆರ್ ಆರ್ ಆರ್' ಸಿನಿಮಾ ತಂಡ ಬಿಗ್ ಸರ್ಪ್ರೈಸ್ ನೀಡಲು ಮುಂದಾಗಿದೆ. ದಕ್ಷಿಣ ಭಾರತೀಯ ಸಿನಿ ಪ್ರಿಯರು ಮಾತ್ರವಲ್ಲದೆ ಇಡೀ ಭಾರತ ಕಾತರದಿಂದ ಎದುರು ನೋಡುತ್ತಿರುವ ಸಿನಿಮಾ 'ಆರ್ ಆರ್ ಆರ್'. ಈಗಾಗಲೇ ಬಹುತೇಕ ಚಿತ್ರೀಕರಣ ಮುಗಿಸಿರುವ ಚಿತ್ರತಂಡ ಜೂ.ಎನ್ ಟಿ ಆರ್ ಅಭಿಮಾನಿಗಳಿಗೆ ಬೇಸರ ಮೂಡಿಸಿತ್ತು. ಆದರೀಗ ನಿರ್ದೇಶಕ ರಾಜಮೌಳಿ ಮತ್ತು ತಂಡ ಜೂ.ಎನ್ ಟಿ ಆರ್ ಅಭಿಮಾನಿಗಳಿಗೆ ಸಿಹಿ ಸುದ್ದಿಯೊಂದನ್ನು ನೀಡಿದೆ.

ಕೊರೊನಾ ಹಾವಳಿಯ ಪರಿಣಾಮ ಸುಮಾರು 7 ತಿಂಗಳಿಂದ ಚಿತ್ರೀಕರಣಕ್ಕೆ ಬ್ರೇಕ್ ಹಾಕಲಾಗಿತ್ತು. ಇದೀಗ ಮತ್ತೆ ಆರ್ ಆರ್ ಆರ್ ತಂಡ ಮತ್ತೆ ಅಖಾಡಕ್ಕೆ ಇಳಿದಿದೆ. ಈಗಾಗಲೇ ಚಿತ್ರೀಕರಣ ಪ್ರಾರಂಭಮಾಡಿದ್ದು, ಚಿತ್ರದ ಮೇಕಿಂಗ್ ಟೀಸರ್ ಅನ್ನು ರಿಲೀಸ್ ಮಾಡಿದೆ. ಇದೇ ಖುಷಿಯಲ್ಲಿ ಚಿತ್ರತಂಡ ಅಕ್ಟೋಬರ್ 22ಕ್ಕೆ ಜೂ.ಎನ್ ಟಿ ಆರ್ ಅವರ ಇಂಟ್ರಡಕ್ಷನ್ ಟೀಸರ್ ರಿಲೀಸ್ ಮಾಡುತ್ತಿದೆ. ಅಂದುಕೊಂಡಂತೆ ಆಗಿದ್ದಾರೆ ಈ ಟೀಸರ್ ಈಗಾಗಲೇ ರಿಲೀಸ್ ಆಗಬೇಕಿತ್ತು.

ಜೂ.ಎನ್ ಟಿ ಆರ್ ಹುಟ್ಟುಹಬ್ಬಕ್ಕೆ ಟೀಸರ್ ಬಿಡುಗಡೆಯಾಗಲಿದೆ ಎಂದು ಅಭಿಮಾನಿಗಳು ಕಾದುಕುಳಿತಿದ್ದರು. ಆದರೆ ಕೊರೊನಾ ವೈರಸ್ ಹಾವಳಿಯ ಪರಿಣಾಮ ಸಿನಿಮಾದ ಟೀಸರ್ ರಿಲೀಸ್ ಮಾಡಲು ಸಾಧ್ಯವಾಗಿರಲಿಲ್ಲ. ಅಂದು ನಿರಾಸೆಯಾಗಿದ್ದ ಅಭಿಮಾನಿಗಳಿಗೆ ಈಗ ಸಂತಸದ ಸುದ್ದಿ ಸಿಕ್ಕಿದೆ. ಈಗಾಗಲೇ ಈ ಟೀಸರ್ ಗಾಗಿ #RamarajuforBheemaonoc22 ಹ್ಯಾಷ್ ಟ್ಯಾಗ್ ಬಳಿಸಿ ಟ್ರೆಂಡ್ ಮಾಡಲಾಗುತ್ತಿದೆ. ವಿಶೇಷ ಎಂದರೆ ಈ ಟೀಸರ್ ಗೆ ರಾಮ್ ಚರಣ್ ಹಿನ್ನಲೆ ಧ್ವನಿ ನೀಡಿದ್ದಾರಂತೆ.

 RRR Movie Jr.NTRs Introduction Teaser Will Out From October 22

ಆರ್ ಆರ್ ಆರ್ ಸಿನಿಮಾದ ಪ್ರಮುಖ ಭಾಗದ ಚಿತ್ರೀಕರಣ ನಡೆಯುತ್ತಿದೆ. ಸದ್ಯದಲ್ಲೇ ನಾಯಕರಾದ ರಾಮ್ ಚರಣ್ ಮತ್ತು ಜೂ.ಎನ್ ಟಿ ಆರ್ ಎಂಟ್ರಿ ಕೊಡಲಿದ್ದಾರೆ. ಇನ್ನೂ ಚಿತ್ರದ ಪ್ರಮುಖ ಪಾತ್ರದಲ್ಲಿ ನಟಿ ಅಲಿಯಾ ಭಟ್ ಕಾಣಿಸಿಕೊಳ್ಳುತ್ತಿದ್ದಾರೆ. ನವೆಂಬರ್ ನಲ್ಲಿ ಅಲಿಯಾ ಚಿತ್ರೀಕರಣ ಸೆಟ್ ಗೆ ಎಂಟ್ರಿ ಕೊಡಲಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಅಲಿಯಾ ಕೂಡ ಪ್ರತಿಕ್ರಿಯೆ ನೀಡಿದ್ದು, ಚಿತ್ರೀಕರಣದಲ್ಲಿ ಭಾಗಿಯಾಗಲು ಉತ್ಸುಕರಾಗಿರುವುದಾಗಿ ಹೇಳಿದ್ದಾರೆ.

More from Filmibeat

English summary
RRR movie jr.NTR's introduction teaser release on october 22. Rajamouli resumes shooting of rrr after 7 months.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X