For Quick Alerts
  ALLOW NOTIFICATIONS  
  For Daily Alerts

  ಭಾರೀ ಮೊತ್ತಕ್ಕೆ ಸೇಲ್ ಆಯ್ತು RRR ಚಿತ್ರದ ಕರ್ನಾಟಕ ವಿತರಣೆ ಹಕ್ಕು

  |

  ಟಾಲಿವುಡ್‌ನ ಬಹುನಿರೀಕ್ಷಿತ ಚಿತ್ರಗಳಲ್ಲಿ RRR ಸಿನಿಮಾ ಕೂಡ ಒಂದು. ಚಿತ್ರ ಸೆಟ್ಟೇರಿದಾಗಿನಿಂದಲೂ ಚಿತ್ರದ ಪ್ರತಿಯೊಂದು ಅಪ್‌ಡೇಟ್ಸ್ ಕೂಡ ಬಾರಿ ಸಂಚಲನ ಮೂಡಿಸುತ್ತಿದೆ. ಅದರಲ್ಲೂ ಸಿನಿಮಾವನ್ನು ಬಾಹುಬಲಿ ಖ್ಯಾತಿಯ ನಿರ್ದೇಶಕ ರಾಜಮೌಳಿ ಡೈರೆಕ್ಟ್ ಮಾಡುತ್ತಿರುವುದು ಜನರಲ್ಲಿ ಸಿನಿಮಾದ ಬಗ್ಗೆ ಮತ್ತಷ್ಟು ನಿರೀಕ್ಷೆ ಮೂಡಿಸುತ್ತಿದೆ. ಸದ್ಯ ರಿಲೀಸ್‌ಗೆ ಸಜ್ಜಾಗಿರೋ ಈ ಸಿನಿಮಾ 2022ರ ಜನವರಿ 7ಕ್ಕೆ ದೊಡ್ಡಮಟ್ಟದಲ್ಲಿ ರಿಲೀಸ್ ಆಗುತ್ತಿದೆ.

  RRR ಸಿನಿಮಾ ಕನ್ನಡ, ಹಿಂದಿ,ತೆಲುಗು, ತಮಿಳು, ಮಲಯಾಳಂ ಭಾಷೆಗಳಲ್ಲಿ ತಯಾರಾಗುತ್ತಿದ್ದು, RRR ಚಿತ್ರದ ಕರ್ನಾಟಕ ಡಿಸ್ಟ್ರಿಬ್ಯೂಷನ್ ಹಕ್ಕನ್ನು ಪ್ರಖ್ಯಾತ ಪ್ರೊಡಕ್ಷನ್ ಹೌಸ್ ಕೆವಿಎನ್ ಪಾಲಾಗಿದೆ. ಈಗಾಗಲೇ ಚಿತ್ರದ ಟೀಸರ್, ಪೋಸ್ಟರ್, ಮೇಕಿಂಗ್ ರಿಲೀಸ್ ಆಗಿದ್ದ ಚಿತ್ರದ ಬಗ್ಗೆ ಸಿನಿಪ್ರೇಮಿಗಳು ಕುತೂಹಲ ಭರಿತರಾಗಿದ್ದಾರೆ. ಇದೀಗ ಕನ್ನಡದ ಡಿಸ್ಟ್ರಿಬ್ಯೂಷನ್ ಹಕ್ಕು ಕೆವಿಎನ್ ಪಾಲಾಗಿರೋದಕ್ಕೆ ಪ್ರೊಡಕ್ಷನ್ ಹೌಸ್ ಕೂಡ ಸಂತಸ ವ್ಯಕ್ತಪಡಿಸಿದ್ದು, ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಮಾಹಿತಿ ಹಂಚಿಕೊಂಡಿದೆ. ಅಷ್ಟೇ ಅಲ್ಲದೆ ಬಾರಿ ಮೊತ್ತಕ್ಕೆ RRR ಚಿತ್ರದ ಡಿಸ್ಟ್ರಿಬ್ಯೂಷನ್ ಹಕ್ಕು ಸೇಲ್ ಆಗಿದೆ ಅನ್ನೋ ಬಗ್ಗೆ ಮೂಲಗಳಿಂದ ಮಾಹಿತಿ ತಿಳಿದು ಬಂದಿದೆ.

  ಇನ್ನು ಕೆವಿಎನ್ ಪ್ರೊಡಕ್ಷನ್ ಹೌಸ್ ಸಖತ್, ಬೈಟು ಲವ್, ಸಿನಿಮಾಗಳನ್ನು ಮಾಡುತ್ತಿದೆ. ಇದರ ಜೊತೆಗೆ ಈಗ RRR ಚಿತ್ರದ ಡಿಸ್ಟ್ರಿಬ್ಯೂಷನ್ ಜವಾಬ್ದಾರಿ ಕೂಡ ಕೆವಿಎನ್ ಹೆಗಲ ಮೇಲಿದೆ. ಇನ್ನು ಇತ್ತೀಚೆಗಷ್ಟೆ RRR ಚಿತ್ರದ ಹಳ್ಳಿ ನಾಟು ಲಿರಿಕಲ್ ವೀಡಿಯೋ ಜೊತೆಗೆ ಮೇಕಿಂಗ್ ಕೂಡ ರಿಲೀಸ್ ಆಗಿದ್ದು, ಹಾಡಿಗೆ ಉತ್ತಮ ರೆಸ್ಪಾನ್ಸ್ ಸಿಗುತ್ತಿದೆ. ಈ ಹಾಡು ಸಾಕಷ್ಟು ಶೇರ್ ಆಗುತ್ತಿದ್ದು ಜೂನಿಯರ್ ಎನ್‌ಟಿಆರ್, ರಾಮ್‌ಚರಣ್ ತೇಜ ಸ್ಟೆಪ್ಸ್ ವಿಭಿನ್ನವಾಗಿ ಮೂಡಿಬಂದಿದೆ.

  RRR ಸಿನಿಮಾದಲ್ಲಿ ದೊಡ್ಡ ದೊಡ್ಡ ತಾರಾಬಳಗವೇ ಇದ್ದು, ಜ್ಯೂನಿಯರ್ ಎನ್‌ಟಿಆರ್, ರಾಮ್‌ ಚರಣ್ ತೇಜ, ಅಜಯ್ ದೇವಗನ್, ಸಮುದ್ರಖಣಿ, ಆಲಿಯಾ ಭಟ್‌ರಂತಹ ಸ್ಟಾರ್ ನಟರು ಈ ಸಿನಿಮಾದಲ್ಲಿ ನಟಿಸುತ್ತಿರೋದು ಸಿನಿಮಾ ಮೇಲಿನ ನಿರೀಕ್ಷೆಯನ್ನು ಹೆಚ್ಚು ಮಾಡಿದೆ. ಈಗಾಗಲೇ ಜ್ಯೂನಿಯರ್ ಎನ್‌ಟಿಆರ್, ರಾಮ್‌ಚರಣ್ ತೇಜ ಪಾತ್ರದ ಲುಕ್ ನೋಡಿ ಅಭಿಮಾನಿಗಳು ಸಖತ್ ಥ್ರಿಲ್ ಆಗಿದ್ದಾರೆ. ಕೊಮರಾಮ್‌ ಭೀಮ್‌ ಪಾತ್ರದಲ್ಲಿ ಎನ್‌ಟಿಆರ್ ಕಾಣಿಸಿಕೊಂಡರೆ, ಅಲ್ಲೂರಿ ಸೀತಾರಾಮ ರಾಜು ಪಾತ್ರದಲ್ಲಿ ರಾಮ್‌ ಚರಣ್ ತೇಜ ಕಾಣಿಸಿಕೊಂಡಿದ್ದಾರೆ

  RRR Movie Karnataka distribution rights acquired by KVN Productions

  ಕನ್ನಡ, ತೆಲುಗು, ಮಲಯಾಳಂ ಮತ್ತು ತಮಿಳು ಹಾಗೂ ಹಿಂದಿಯಲ್ಲಿ ರಿಲೀಸ್ ಆಗಲಿರುವ RRR ಚಿತ್ರವು ಇಂಗ್ಲಿಷ್, ಪೋರ್ಚುಗೀಸ್, ಕೊರಿಯನ್, ಟರ್ಕಿಷ್, ಸ್ಪ್ಯಾನಿಶ್‌ ಭಾಷೆಗಳಿಗೆ ಡಬ್ ಆಗಲಿದೆ. ಡಿವಿವಿ ದಾನಯ್ಯ ನಿರ್ಮಾಣ ಮಾಡುತ್ತಿರುವ ಈ ಚಿತ್ರಕ್ಕೆ ಎಂ.ಎಂ.ಕೀರವಾಣಿ ಸಂಗೀತ ನೀಡಿದ್ದಾರೆ. 400 ಕೋಟಿ ರೂಪಾಯಿ ಬಜೆಟ್‌ನಲ್ಲಿ ತಯಾರಾದ ಈ ಚಿತ್ರ, ಬಿಡುಗಡೆಗೂ ಮುನ್ನವೇ 900 ಕೋಟಿ ರೂಪಾಯಿ ಬಿಸಿನೆಸ್ ಮಾಡಿದೆ ಎಂದು ಈ ಹಿಂದೆ ವರದಿಯಾಗಿತ್ತು. RRR ಚಿತ್ರದ ಹಾಡುಗಳಿಗೆ ಎಂಎಂ ಕೀರವಾಣಿ ಸಂಗೀತ ನೀಡಿದ್ದಾರೆ. RRR ಚಿತ್ರದ ಒಂದು ಹಾಡನ್ನು ಚಿತ್ರೀಕರಣ ಮಾಡಲು ಬರೋಬ್ಬರಿ 1 ತಿಂಗಳು ಕಾಲ ಸಮಯವನ್ನು ಮೀಸಲಿಟ್ಟಿದ್ದರು ಎಂದು ಹೇಳಲಾಗುತ್ತಿತ್ತು.

  English summary
  Tollywood Movie SS Rajamouli Directional, Jr NTR and Ram Charan tej Starrer RRR movie karnataka theatrical distribution rights acquired by KVN production house. Know more.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X