Don't Miss!
- Technology
ದೃಷ್ಟಿಹೀನರಿಗಾಗಿ ಹೊಸ ಸ್ಮಾರ್ಟ್ವಾಚ್; ಇದು ಹೇಗೆಲ್ಲಾ ಕೆಲಸ ಮಾಡಲಿದೆ!?
- Sports
ಕೊಹ್ಲಿ ಅಲ್ಲ, ರೋಹಿತ್ ಅಲ್ಲ; ಈತ ಭಾರತದ ಬ್ಯಾಟಿಂಗ್ ಕ್ರಮಾಂಕದ ಬೆನ್ನೆಲುಬು ಎಂದ ಆರ್ ಅಶ್ವಿನ್
- Finance
ಅಗ್ಗದ ಚಿನ್ನ ಸಾಲಕ್ಕಾಗಿ ಇಲ್ಲಿ ಪರಿಶೀಲಿಸಿ: ಇತ್ತೀಚಿನ ಬಡ್ಡಿ ದರ, EMI ಬಗ್ಗೆ ಮಾಹಿತಿ ತಿಳಿಯಿರಿ
- Automobiles
Okaya EVಯ ಬಹುನಿರೀಕ್ಷಿತ ಟೀಸರ್: ಫೆ.10ಕ್ಕೆ ಅತಿಹೆಚ್ಚು ವೇಗದ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ
- News
ಜೆಡಿಎಸ್ ಪಂಚ ರತ್ನ ಹೆಸರು ಏಕೆ ಇಟ್ಟಿದ್ದಾರೆ? ಅದು ನವಗ್ರಹ ಯಾತ್ರೆ ಎಂದ ಪ್ರಹ್ಲಾದ್ ಜೋಶಿ
- Lifestyle
ವಿಶ್ವ ಕ್ಯಾನ್ಸರ್ ದಿನ: ಭಾರತೀಯ ಈ ಮಸಾಲೆ ಪದಾರ್ಥಗಳು ಕ್ಯಾನ್ಸರ್ ತಡೆಗಟ್ಟುತ್ತೆ
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಮಹೇಶ್ ಬಾಬು 28ನೇ ಸಿನಿಮಾದಲ್ಲಿ ವಿಜಯ್ ಸೇತುಪತಿ: ಉಪ್ಪಿ ನಟಿಸುತ್ತಾ ಇಲ್ವಾ?
ಟಾಲಿವುಡ್ ಸೂಪರ್‌ಸ್ಟಾರ್ ಮಹೇಶ್ ಬಾಬು 28ನೇ ಸಿನಿಮಾದ ಬಗ್ಗೆ ಕುತೂಹಲ ದುಪ್ಪಟ್ಟಾಗಿದೆ. ತ್ರಿವಿಕ್ರಮ್ ಈ ಸಿನಿಮಾವನ್ನು ನಿರ್ದೇಶನ ಮಾಡುತ್ತಿದ್ದು, ಹಲವು ಕಾರಣಕ್ಕೆ ಈ ಸಿನಿಮಾ ಸುದ್ದಿಯಾಗುತ್ತಲೇ ಇದೆ. ಈಗ ಟಾಲಿವುಡ್‌ನಲ್ಲಿ ಹೊಸ ಸುದ್ದಿಯೊಂದು ಹೊರ ಬಿದ್ದಿದೆ.
ಮಹೇಶ್ ಬಾಬು ನಟಿಸಿದ 'ಸರ್ಕಾರು ವಾರಿ ಪಾಟ' ಸಿನಿಮಾ ಥಿಯೇಟರ್‌ನಲ್ಲಿ ಸದ್ದು ಮಾಡಿಲ್ಲ. ಪರಶುರಾಮ್ ನಿರ್ದೇಶಿಸಿದ ಈ ಸಿನಿಮಾದಲ್ಲಿ ಕೀರ್ತಿ ಸುರೇಶ್ ನಾಯಕಿಯಾಗಿದ್ದರೆ, ಸಮುದ್ರಖನಿ ಖಳನಾಯಕನಾಗಿ ಕಾಣಿಸಿಕೊಂಡಿದ್ದರು. ಆದರೂ ಈ ಸಿನಿಮಾ ಬಾಕ್ಸಾಫೀಸ್‌ನಲ್ಲಿ ಮಾಡಿರಲಿಲ್ಲ.
ಮಹೇಶ್ ಬಾಬು ಹಾಗೂ ತ್ರಿವಿಕ್ರಮ್ ಕಾಂಬನೇಷನ್ ಸಿನಿಮಾದ ಶೂಟಿಂಗ್ ಮುಂಬರುವ ಆಗಸ್ಟ್ ತಿಂಗಳಿನಿಂದ ಆರಂಭವಾಗಲಿದೆ ಎಂದು ಟಾಲಿವುಡ್ ಮೂಲಗಳು ಹೇಳುತ್ತಿವೆ. ಈ ಬೆನ್ನಲೇ ಹೊಸ ಸುದ್ದಿಯೊಂದು ಓಡಾಡುತ್ತಿದೆ. ಮಹೇಶ್ ಬಾಬು ಸಿನಿಮಾದಲ್ಲಿ ವಿಜಯ್ ಸೇತುಪತಿ ನಟಿಸಲಿದ್ದಾರೆ ಎನ್ನಲಾಗಿದೆ. ಇದಕ್ಕೂ ಮೊದಲು ರಿಯಲ್ ಸ್ಟಾರ್ ಉಪೇಂದ್ರ ಹೆಸರು ಕೂಡ ಹರಿದಾಡಿತ್ತು.

ಈ ಸಿನಿಮಾ ಗೆಲ್ಲಲೇಬೇಕು
ಮಹೇಶ್ ಬಾಬು ನಟಿಸಿದ 'ಸರ್ಕಾರು ವಾರಿ ಪಾಟ' ಸಿನಿಮಾ ಬಾಕ್ಸಾಫೀಸ್‌ನಲ್ಲಿ ಗೆಲ್ಲಲಿಲ್ಲ ಎಂಬ ಮಾತು ಕೇಳಿಬರುತ್ತಿದೆ. ಬಿಡುಗಡೆಯಾದ ಮೊದಲ ದಿನವೇ ಈ ಸಿನಿಮಾ ಮಿಶ್ರಪ್ರತಿಕ್ರಿಯೆ ಪಡೆದುಕೊಂಡಿತ್ತು. ಹೀಗಾಗಿ ಕಲೆಕ್ಷನ್ ಕೂಡ ಹೆಚ್ಚೇನು ಆಗಿಲ್ಲ ಎನ್ನುತ್ತಿದ್ದರೆ, ಇನ್ನೊಂದು ಕಡೆ ಭರ್ಜರಿ ಕಲೆಕ್ಷನ್ ಆಗಿದೆ ಎಂದು ಚಿತ್ರತಂಡ ಹೇಳಿಕೊಂಡಿತ್ತು. ಆದರೆ, ಟ್ರೇಡ್ ಅನಲಿಸ್ಟ್‌ಗಳು ಈ ಸಿನಿಮಾಗೆ ಸೋತಿದೆ ಎಂದು ಹೇಳುತ್ತಿದೆ. ಈ ಕಾರಣಕ್ಕೆ ಮಹೇಶ್ ಬಾಬು ಹಾಗೂ ತ್ರಿವಿಕ್ರಮ್ ಸಿನಿಮಾ ತುಂಬಾನೇ ಮುಖ್ಯ ಆಗಿದೆ.

ವಿಜಯ್ ಸೇತುಪತಿ ಖಳನಾಯಕನಾ?
ಮಹೇಶ್ ಬಾಬು ಹಾಗೂ ತ್ರಿವಿಕ್ರಮ್ ಸಿನಿಮಾ ಮುಗಿದ ಬಳಿಕ ಮೂವಿ ಮಾಂತ್ರಿಕ ರಾಜಮೌಳಿ ಸಿನಿಮಾದಲ್ಲಿ ನಟಿಸಲಿದ್ದಾರೆ. ಸದ್ಯ ಬಾಬು ಎಂಬುವವರು ಮಹೇಶ್ ಬಾಬು 28ನೇ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ. ಸದ್ಯದ ಮಾಹಿತಿ ಪ್ರಕಾರ, ಈ ಸಿನಿಮಾದಲ್ಲಿ ವಿಜಯ್ ಸೇತುಪತಿ ಈ ಸಿನಿಮಾದಲ್ಲಿ ನಟಿಸುತ್ತಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಆದರೆ, ವಿಲನ್ ಆಗಿ ನಟಿಸುತ್ತಾರಾ? ಇಲ್ಲವಾ ಬೇರೆ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಾರಾ? ಎಂಬ ಅನುಮಾನ ಹುಟ್ಟಿಕೊಂಡಿದೆ.

ಉಪ್ಪಿ ಈ ಸಿನಿಮಾ ನಟಿಸುತ್ತಾರಾ?
ಕಳೆದ ಕೆಲವು ದಿನಗಳಿಂದ ಈ ಸಿನಿಮಾದಲ್ಲಿ ಉಪೇಂದ್ರ ಖಳನಾಯಕನ ಪಾತ್ರ ನಟಿಸಲಿದ್ದಾರೆ ಎಂದು ಸುದ್ದಿಯಾಗಿತ್ತು. ಇನ್ನೊಂದು ಮೂಲಗಳು ಉಪೇಂದ್ರ ಈ ಸಿನಿಮಾ ಮಹೇಶ್ ಬಾಬುಗೆ ತಂದೆಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಾರೆ. ಆದರೆ, ಸಿನಿಮಾದಲ್ಲಿ ತಂದೆ-ಮಗ ಒಟ್ಟಿಗೆ ತೆರೆಮೇಲೆ ಕಾಣಿಸಿಕೊಳ್ಳುವುದಿಲ್ಲ ಎಂದು ಹೇಳುತ್ತಿವೆ. ಹಾಗಿದ್ದರೆ, ವಿಜಯ್ ಸೇತುಪತಿ ಪಾತ್ರವೇನು? ಇದು ವಿಲನ್ ಪಾತ್ರವೇ ಅಥವಾ ಬೇರೆನಾ ಎಂಬುದರ ಬಗ್ಗೆ ಸ್ಪಷ್ಟತೆ ಇಲ್ಲ.

ವಿಜಯ್ ಸೇತುಪತಿ ಗ್ರೀನ್ ಸಿಗ್ನಲ್
ಕಥೆ ಕೇಳುತ್ತಿದ್ದಂತೆ ವಿಜಯ್ ಸೇತುಪತಿ ಗ್ರೀನ್ ಸಿಗ್ನಲ್ ನೀಡಿದ್ದಾರೆ ಎನ್ನುವ ಮಾತು ಕೇಳಿ ಬರುತ್ತಿದೆ. ಅಲ್ಲದೆ ಈಗಾಗಲೇ ಸಿನಿಮಾಗೂ ಸಹಿ ಮಾಡಿದ್ದು, ಶೀಘ್ರದಲ್ಲೇ ಈ ಬಗ್ಗೆ ಅಧಿಕೃತ ಪ್ರಕಟಣೆ ಹೊರಬೀಳುವ ಸಾಧ್ಯತೆಯಿದೆ ಎನ್ನಲಾಗಿದೆ. ಅಂದ್ಹಾಗೆ ಮಹೇಶ್ ಬಾಬು ಮತ್ತು ವಿಜಯ್ ಸೇತುಪತಿ ಇಬ್ಬರೂ ಆಗಸ್ಟ್‌ನಲ್ಲಿ ಚಿತ್ರೀಕರಣವನ್ನು ಪ್ರಾರಂಭಿಸುತ್ತಾರೆ ಎನ್ನಲಾಗಿದೆ.