ಸಾಯಿ ಪಲ್ಲವಿ-ನಾಗಚೈತನ್ಯ ನಟನೆಯ 'ಲವ್ ಸ್ಟೋರಿ' ಬಿಡುಗಡೆಗೆ ಹೊಸ ದಿನಾಂಕ ನಿಗದಿ
ನಟಿ ಸಾಯಿ ಪಲ್ಲವಿ-ನಾಗಚೈತನ್ಯ ನಟಿಸಿ ಶೇಖರ್ ಕಮ್ಮುಲ ನಿರ್ದೇಶಿಸಿರುವ 'ಲವ್ ಸ್ಟೋರಿ' ಸಿನಿಮಾದ ಬಿಡುಗಡೆ ಏಪ್ರಿಲ್ 16 ಕ್ಕೆ ನಿಗದಿಪಡಿಸಲಾಗಿತ್ತು. ಆದರೆ ಕೆಲವು ದಿನಗಳ ಹಿಂದಷ್ಟೆ ಸಿನಿಮಾದ ಬಿಡುಗಡೆಯನ್ನು ಮುಂದೂಡಿರುವುದಾಗಿ ಹೇಳಿತ್ತು ಚಿತ್ರತಂಡ.
ಇದೀಗ 'ಲವ್ ಸ್ಟೋರಿ' ಸಿನಿಮಾ ಬಿಡುಗಡೆ ಆಗಲಿರುವ ಹೊಸ ದಿನಾಂಕವನ್ನು ಘೋಷಿಸಲಾಗಿದೆ. ಸಿನಿಮಾವನ್ನು ಮುಂದಿನ ತಿಂಗಳು ಅಂದರೆ ಮೇ 13ಕ್ಕೆ ಬಿಡುಗಡೆ ಮಾಡಲಾಗುವುದು ಎಂದಿದೆ ಚಿತ್ರತಂಡ.
ಏಪ್ರಿಲ್ 16ರಂದು ಸಿನಿಮಾ ಬಿಡುಗಡೆ ಆಗಬೇಕಿತ್ತು. ಆದರೆ ದೇಶದಾದ್ಯಂತ ಕೊರೊನಾ ಪ್ರಕರಣಗಳು ಹೆಚ್ಚಾಗಿ ಹಲವು ರಾಜ್ಯಗಳಲ್ಲಿ ಚಿತ್ರಮಂದಿರಗಳ ಮೇಲೆ ನಿರ್ಬಂಧ ಹೇರಲಾಯಿತು. ಆಂಧ್ರ-ತೆಲಂಗಾಣಗಳಲ್ಲಿ ಸಹ ಚಿತ್ರಮಂದಿರಗಳ ಮೇಲೆ ನಿರ್ಬಂಧ ಹೇರುವ ಬಗ್ಗೆ ಪ್ರಸ್ತಾಪವಿದೆ ಹಾಗಾಗಿ ಹೆಚ್ಚಿನ ರಿಸ್ಕ್ ತೆಗೆದುಕೊಳ್ಳದೆ ಸಿನಿಮಾ ಬಿಡುಗಡೆಯನ್ನು ಮುಂದೂಡಲಾಗಿದೆ.

'ಲವ್ ಸ್ಟೋರಿ' ಸಿನಿಮಾವನ್ನು ಶೇಖರ್ ಕಮ್ಮುಲ ನಿರ್ದೇಶನ ಮಾಡಿದ್ದು, ಸಿನಿಮಾದ ಹಾಡುಗಳು ಈಗಾಗಲೇ ಸೂಪರ್ ಹಿಟ್ ಆಗಿವೆ. 'ಸಾರಂಗ ದರಿಯಾ' ಹಾಡಂತೂ ಯೂಟ್ಯೂಬ್‌ನಲ್ಲಿ ದಾಖಲೆ ಬರೆದಿದೆ.
ಶೇಖರ್ ಕಮ್ಮುಲ ನಿರ್ದೇಶನದಲ್ಲಿ ನಟಿ ಸಾಯಿ ಪಲ್ಲವಿ ನಟಿಸುತ್ತಿರುವ ಎರಡನೇ ಸಿನಿಮಾ 'ಲವ್ ಸ್ಟೋರಿ'. ಈ ಮೊದಲು ಶೇಖರ್ ನಿರ್ದೇಶಿಸಿದ್ದ 'ಫಿದಾ' ಸಿನಿಮಾದಲ್ಲಿ ನಟಿಸಿದ್ದರು. ಆ ಸಿನಿಮಾ ಸೂಪರ್ ಹಿಟ್ ಆಗಿತ್ತು. ಇದೀಗ ಮತ್ತೆ ಹಳೆ ಮ್ಯಾಜಿಕ್ ಪುನರಾವರ್ತನೆ ಆಗಲಿದೆ ಎನ್ನಲಾಗುತ್ತಿದೆ.
Recommended Video
'ಲವ್ ಸ್ಟೋರಿ' ಹೊರತಾಗಿ ಸಾಯಿ ಪಲ್ಲವಿ ನಟಿಸಿರುವ 'ವಿರಾಟ ಪರ್ವಂ' ಸಿನಿಮಾ ಸಹ ಬಿಡುಗಡೆಗೆ ತಯಾರಾಗಿದೆ. ನಾನಿ ಜೊತೆ 'ಶ್ಯಾಮ ಸಿಂಘ ರಾಯ್' ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಪವನ್ ಕಲ್ಯಾಣ್ ನಟನೆಯ ಮಲಯಾಳಂ ಸಿನಿಮಾ 'ಅಯ್ಯಪ್ಪನುಂ ಕೋಶಿಯುಂ' ಸಿನಿಮಾದ ರೀಮೇಕ್‌ನಲ್ಲಿ ಸಹ ನಟಿಸಲಿದ್ದಾರೆ ಸಾಯಿ ಪಲ್ಲವಿ.


Click it and Unblock the Notifications