ಪ್ಯಾನ್ ಇಂಡಿಯಾ ಸಿನಿಮಾ 'ಸಲಾರ್' ರಿಲೀಸ್ ದಿನಾಂಕ ಘೋಷಣೆ

ಪ್ರಭಾಸ್ ಮತ್ತು ಪ್ರಶಾಂತ್ ನೀಲ್ ಕಾಂಬಿನೇಷನ್‌ನಲ್ಲಿ ತಯಾರಾಗುತ್ತಿರುವ ಸಲಾರ್ ಸಿನಿಮಾದ ಬಿಡುಗಡೆ ದಿನಾಂಕ ಪ್ರಕಟವಾಗಿದೆ. ಭಾರತೀಯ ಚಿತ್ರರಂಗದಲ್ಲಿ ಭಾರಿ ನಿರೀಕ್ಷೆ ಮೂಡಿಸಿರುವ 'ಸಲಾರ್' ಸಿನಿಮಾ 2022ರ ಏಪ್ರಿಲ್ 14 ರಂದು ವರ್ಲ್ಡ್ ವೈಡ್ ತೆರೆಕಾಣಲಿದೆ.

ಸಲಾರ್ ಸಿನಿಮಾ ಈಗಾಗಲೇ ಮೊದಲ ಹಂತದ ಚಿತ್ರೀಕರಣ ಮುಗಿಸಿದೆ. ಜನವರಿ 15ನೇ ತಾರೀಖು ಸಲಾರ್ ಚಿತ್ರದ ಮುಹೂರ್ತ ಹೈದರಾಬಾದ್‌ನಲ್ಲಿ ನೆರವೇರಿತ್ತು. ನಂತರ ಜನವರಿ 29 ರಿಂದ ಗೋದಾವರಿ ಕಣಿವೆಯಲ್ಲಿ ಸಲಾರ್ ಶೂಟಿಂಗ್ ಆರಂಭಿಸಿತ್ತು. ಒಂಬತ್ತು ದಿನಗಳ ಮೊದಲ ಶೆಡ್ಯೂಲ್ ಫೆಬ್ರವರಿ 8 ರಂದು ಮುಗಿದಿತ್ತು. ಮೊದಲ ಹಂತದ ಶೂಟಿಂಗ್‌ನಲ್ಲಿ ಪ್ರಭಾಸ್, ಶ್ರುತಿ ಹಾಸನ್ ಭಾಗಿಯಾಗಿದ್ದರು.

ಅಂದ್ಹಾಗೆ, ಸಲಾರ್ ಚಿತ್ರವನ್ನು ಹೊಂಬಾಳೆ ಫಿಲಂಸ್ ನಿರ್ಮಾಣ ಮಾಡುತ್ತಿದ್ದು, ಕನ್ನಡ ನಟ ಮಧು ಗುರುಸ್ವಾಮಿ ಪ್ರಮುಖ ಪಾತ್ರಕ್ಕಾಗಿ ಆಯ್ಕೆಯಾಗಿದ್ದಾರೆ.

Salaar to release in theatres on April 14, 2022

ಕೆಜಿಎಫ್ ಚಿತ್ರದಲ್ಲಿ ಕೆಲಸ ಮಾಡಿದ ಬಹುತೇಕ ತಂತ್ರಜ್ಞರು ಸಲಾರ್ ಸಿನಿಮಾದಲ್ಲಿ ಕೆಲಸ ಮಾಡ್ತಿದ್ದರು. ಭುವನ್ ಗೌಡ ಅವರ ಛಾಯಾಗ್ರಹಣ, ರವಿ ಬಸ್ರೂರು ಸಂಗೀತ ನಿರ್ದೇಶನ ಸಲಾರ್ ಚಿತ್ರದಲ್ಲಿದೆ. ಇನ್ನು ಭಾರತದ ಎಲ್ಲ ಪ್ರಮುಖ ಭಾಷೆಗಳಲ್ಲಿ ಸಿನಿಮಾ ಬಿಡುಗಡೆಯಾಗಲಿದೆ.

ಸಲಾರ್ ಚಿತ್ರದಲ್ಲಿ ಖಳನಾಯಕನ ಪಾತ್ರಕ್ಕೆ ಇಬ್ಬರು ಸ್ಟಾರ್ ನಟರ ಹೆಸರು ಮುಂಚೂಣಿಯಲ್ಲಿದೆ. ತಮಿಳು ನಟ ವಿಜಯ್ ಸೇತುಪತಿ ಹಾಗೂ ಬಾಲಿವುಡ್ ನಟ ಜಾನ್ ಅಬ್ರಾಹಂ ಅವರನ್ನು ಅಪ್ರೋಚ್ ಮಾಡಲಾಗಿದೆಯಂತೆ. ಈ ಇಬ್ಬರಲ್ಲಿ ಒಬ್ಬರು ಸಲಾರ್ ಟಿಕೆಟ್ ಪಡೆಯಬಹುದು ಎನ್ನಲಾಗಿದೆ.

More from Filmibeat

English summary
Tollywood Actor Prabhas, Shruti Haasan and starrer Salaar movie to release on 14 April 2022.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X