Just In
Don't Miss!
- Sports
ಐಎಸ್ಎಲ್: ಈಸ್ಟ್ ಬೆಂಗಾಲ್ ಅಜೇಯ ನಡೆಗೆ ಬೆಸ್ಟ್ ಮುಂಬೈ ಸವಾಲು
- News
ಶಿವಮೊಗ್ಗದಲ್ಲಿ ಡೈನಾಮೈಟ್ ಸ್ಫೋಟ: ಕನಿಷ್ಠ 7 ಕಾರ್ಮಿಕರ ಸಾವಿನ ಶಂಕೆ
- Finance
ಬಜೆಟ್ 2021: ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ಜನವರಿ 30ರಂದು ಸರ್ವ ಪಕ್ಷಗಳ ಸಭೆ
- Lifestyle
ಗಣರಾಜ್ಯೋತ್ಸವ 2021: ಇಲ್ಲಿದೆ ಶುಭಾಶಯಗಳು, ಕೋಟ್ಸ್, ವಾಟ್ಸಾಪ್ ಸ್ಟೇಟಸ್
- Automobiles
ಬಿಡುಗಡೆಗೆ ಸಜ್ಜಾದ ಹೊಸ ಡುಕಾಟಿ ಸ್ಕ್ರ್ಯಾಂಬ್ಲರ್ ಬೈಕುಗಳು
- Education
BMRCL Recruitment 2021: ಸೀನಿಯರ್ ಅರ್ಬನ್ ಮತ್ತು ಟ್ರಾನ್ಸ್ ಪೋರ್ಟ್ ಪ್ಲಾನರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಸಾಯಿ ಪಲ್ಲವಿ ಜೊತೆ ಓಡಿಹೋದ ನಟ ನಾಗ ಚೈತನ್ಯ: ಸಮಂತಾ ಪ್ರತಿಕ್ರಿಯೆ ಹೀಗಿದೆ
ನಟಿ ಸಾಯಿ ಪಲ್ಲವಿ ಜೊತೆ ಓಡಿಹೋದ ಟಾಲಿವುಡ್ ಖ್ಯಾತ ನಟ ನಾಗ ಚೈತನ್ಯ ಎನ್ನುವ ಸುದ್ದಿ ಅಚ್ಚರಿ ಮೂಡಿಸಿದರೂ ಇದು ನಿಜ. ಆದರೆ ಇದು ಸಿನಿಮಾದಲ್ಲಿ. ಹೌದು, ಸಾಯಿ ಪಲ್ಲವಿ ಮತ್ತು ನಾಗ ಚೈತನ್ಯ ನಟನೆಯ ಬಹುನಿರೀಕ್ಷೆಯ ಲವ್ ಸ್ಟೋರಿ ಸಿನಿಮಾದ ಟೀಸರ್ ರಿಲೀಸ್ ಆಗಿದೆ.
ಟೀಸರ್ ನಲ್ಲಿ ನಾಗ ಚೈತನ್ಯ ಜೊತೆ ಸಾಯಿ ಪಲ್ಲವಿ ಪರಾರಿಯಾಗುವ ದೃಶ್ಯ ವೈರಲ್ ಆಗಿದೆ. ಲವ್ ಸ್ಟೋರಿ ಸಿನಿಮಾದ ಟೀಸರ್ ಈಗಾಗಲೇ ಅಭಿಮಾನಿಗಳ ಗಮನ ಸೆಳೆದಿದ್ದು, ಚಿತ್ರಾಭಿಮಾನಿಗಳಲ್ಲಿ ಕುತೂಹಲ ಹೆಚ್ಚಿಸಿದೆ. ಅಂದಹಾಗೆ ನಾಗ ಚೈತನ್ಯ ಮತ್ತು ಸಾಯಿ ಪಲ್ಲವಿ ಲವ್ ಸ್ಟೋರಿ ನೋಡಿ ಚೈ ಪತ್ನಿ ಸಮಂತಾ ಪ್ರತಿಕ್ರಿಯೆ ನೀಡಿದ್ದಾರೆ.
ಬರಿಗಾಲಲ್ಲಿ ಪ್ರಿಯಕರನ ಜೊತೆ ಸಾಯಿ ಪಲ್ಲವಿ ಪರಾರಿ: 'ಲವ್‌ಸ್ಟೋರಿ'
ಟೀಸರ್ ನೋಡಿ ಫಿದಾ ಆಗಿರುವ ಸಮಂತಾ ಪತಿಯ ಅಭಿನಯವನ್ನು ಹಾಡಿ ಹೊಗಳಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಟೀಸರ್ ಅನ್ನು ಶೇರ್ ಮಾಡಿ, 'ಈ ಪಾತ್ರವನ್ನು ನಿಮಗಿಂತ ಚೆನ್ನಾಗಿ ಯಾರು ಮಾಡಲು ಸಾಧ್ಯವಿಲ್ಲ. ಇನ್ನಷ್ಟು ಸಾಧನೆ ಮಾಡಿರಿ' ಎಂದು ಬರೆದುಕೊಂಡು ಲಿಂಕ್ ಶೇರ್ ಮಾಡಿದ್ದಾರೆ.
ನಾಗ ಚೈತನ್ಯ ಹಾಗೂ ಸಾಯಿ ಪಲ್ಲವಿ 'ಲವ್ ಸ್ಟೋರಿ' ಸಿನಿಮಾಗೆ ಖ್ಯಾತ ನಿರ್ದೇಶಕ ಶೇಖರ್ ಕಮ್ಮುಲ ಆಕ್ಷನ್ ಕಟ್ ಹಳಿದ್ದಾರೆ. ಸುಂದರ-ಸರಳ ಪ್ರೇಮಕತೆಯಾದ 'ಲವ್ ಸ್ಟೋರಿ' ಸಿನಿಮಾದ ಟೀಸರ್ ಗೆ ಅದ್ಭುತವಾದ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಚಿತ್ರದಲ್ಲಿ ನಾಗ ಚೈತನ್ಯ ಸಾಮಾನ್ಯ ಯುವಕನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಟೀಸರ್ ನ ಕೊನೆಯಲ್ಲಿ ನಾಗಚೈತನ್ಯ ಜೊತೆ ಸಾಯಿ ಪಲ್ಲವಿ ಬರಿಗಾಲಿನಲ್ಲಿ ಓಡಿಹೋಗುತ್ತಿರುವ ದೃಶ್ಯವಿದೆ. ಈ ದೃಶ್ಯ ಈಗ ಸಿಕ್ಕಾಪಟ್ಟೆ ವೈರಲ್ ಆಗಿದೆ.
ಅಂದಹಾಗೆ ನಿರ್ದೇಶಕ ಶೇಖರ್ ಕಮ್ಮುಲ ಜೊತೆಗೆ ಸಾಯಿ ಪಲ್ಲವಿಗೆ ಇದು ಎರಡನೇ ಸಿನಿಮಾ. ಈ ಮೊದಲು 'ಫಿದಾ' ಹೆಸರಿನ ಸಿನಿಮಾದಲ್ಲಿ ನಟಿಸಿದ್ದರು ಸಾಯಿ ಪಲ್ಲವಿ. ಆ ಸಿನಿಮಾ ಸೂಪರ್-ಡೂಪರ್ ಹಿಟ್ ಆಗಿತ್ತು. 'ಲವ್‌ಸ್ಟೋರಿ' ಸಿನಿಮಾ ಸಹ ಸೂಪರ್ ಹಿಟ್ ಆಗುವ ಸಾಧ್ಯತೆ ಇದೆ. ಈಗಾಗಲೇ ಚಿತ್ರೀಕರಣ ಮುಗಿಸಿರುವ ಸಿನಿಮಾತಂಡ ಸದ್ಯದಲ್ಲೇ ಅಭಿಮಾನಿಗಳ ಮುಂದೆ ಬರಲು ಸಜ್ಜಾಗಿದ್ದಾರೆ.