For Quick Alerts
  ALLOW NOTIFICATIONS  
  For Daily Alerts

  ಸಮಂತಾ ಮೊದಲ ಪ್ಯಾನ್ ಇಂಡಿಯಾ ಸಿನಿಮಾ 'ಯಶೋದಾ' ರಿಲೀಸ್‌ಗೆ ರೆಡಿ!

  |

  ಸಮಂತಾ ಕೆಲವು ದಿನಗಳಿಂದ ಸೈಲೆಂಟ್ ಆಗಿದ್ದಾರೆ. ಎಲ್ಲಿದ್ದಾರೆ? ಏನ್ಮಾಡ್ತಿದ್ದಾರೆ? ಅನ್ನೋ ಸುಳಿವೇ ಇಲ್ಲ. ಸದಾ ಸೋಶಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿದ್ದ ಸಮಂತಾ ಹೀಗೆ ಸೈಲೆಂಟ್ ಆಗಿರೋದು ಅವರ ಅಭಿಮಾನಿಗಳಿಗೆ ಸಹಿಸಿಕೊಳ್ಳುವುದಕ್ಕೆ ಆಗುತ್ತಿಲ್ಲ.

  ವಿಚ್ಛೇದನದ ಬಳಿಕ ಸಮಂತಾ ಬ್ಯಾಕ್ ಟು ಬ್ಯಾಕ್ ಸಿನಿಮಾಗಳಿಗೆ ಗ್ರೀನ್ ಸಿಗ್ನಲ್ ಕೊಟ್ಟಿದ್ದರು. ಆ ಸಿನಿಮಾಗಳು ಏನಾಯ್ತು? ಜಾಹೀರಾತುಗಳು, ಸೋಶಿಯಲ್ ಮೀಡಿಯಾ ಅಂತ ಬ್ಯುಸಿಯಾಗಿರುತ್ತಿದ್ದ ಸಮಂತಾ ಸೈಲೆಂಟ್ ಆಗಿದ್ದು ಅವರ ಫ್ಯಾನ್ಸ್‌ಗೆ ನಿರಾಸೆ ಮೂಡಿಸಿತ್ತು. ಈಗ ಖುಷಿ ಪಡುವಂತಹ ಹೊಸ ಸುದ್ದಿಯೊಂದು ಹೊರಬಿದ್ದಿದೆ.

  'ಯಶೋದಾ' ರಿಲೀಸ್ ಡೇಟ್ ಅನೌನ್ಸ್

  'ಯಶೋದಾ' ರಿಲೀಸ್ ಡೇಟ್ ಅನೌನ್ಸ್

  ಸಮಂತಾ ಪ್ಯಾನ್ ಇಂಡಿಯಾ ಸಿನಿಮಾದಲ್ಲಿ ನಟಿಸುತ್ತಿರೋದು ಅಭಿಮಾನಿಗಳಿಗೆ ಗೊತ್ತೇ ಇದೆ. ಹೀಗಾಗಿ ಈ ಸಿನಿಮಾ ನೋಡುವುದಕ್ಕೆ ಸಿನಿಪ್ರಿಯರು ಕೂಡ ತುದಿಗಾಲಲ್ಲಿ ನಿಂತಿದ್ದರು. ಆದರೆ, ಸಿನಿಮಾ ತಂಡ ಮಾತ್ರ ಈ ಬಗ್ಗೆ ಮಾಹಿತಿಯನ್ನು ಬಿಟ್ಟುಕೊಟ್ಟಿರಲಿಲ್ಲ. ಅಂದ್ಹಾಗೆ ಸಮಂತಾ ಅಭಿನಯದ ಆ ಸಿನಿಮಾವೇ 'ಯಶೋದಾ'. ಈ ಸಿನಿಮಾ ಬಿಡುಗಡೆಗೆ ವೇದಿಕೆ ಸಜ್ಜಾಗಿದ್ದು, ಅಕ್ಟೋಬರ್ 17ರಂದು ಸಿನಿಮಾದ ರಿಲೀಸ್ ಡೇಟ್ ಅನ್ನು ಅನೌನ್ಸ್ ಮಾಡಿದ್ದಾರೆ. ನವೆಂಬರ್ 11ಕ್ಕೆ ಸಿನಿಮಾ ಬಿಡುಗಡೆ ಮಾಡೋಕೆ ಚಿತ್ರತಂಡ ನಿರ್ಧರಿಸಿದೆ.

  ಮೊದಲ ಪ್ಯಾನ್ ಇಂಡಿಯಾ ಸಿನಿಮಾ

  ಮೊದಲ ಪ್ಯಾನ್ ಇಂಡಿಯಾ ಸಿನಿಮಾ

  'ಯಶೋದಾ' ಸಮಂತಾ ಅಭಿನಯದ ಮೊದಲ ಪ್ಯಾನ್ ಇಂಡಿಯಾ ಸಿನಿಮಾ. ಹೀಗಾಗಿ ಈ ಸಿನಿಮಾವನ್ನು ತೆಲುಗು, ತಮಿಳು ಬಿಟ್ಟು ಬೇರೆ ಭಾಷೆಯಲ್ಲಿ ಜನರು ಹೇಗೆ ಸ್ವೀಕರಿಸುತ್ತಾರೆ? ಅನ್ನೋದು ಕುತೂಹಲಕ್ಕೆ ಎಡೆ ಮಾಡಿಕೊಟ್ಟಿದೆ. ಈಗಾಗಲೇ ಕುತೂಹಲ ಕೆರಳಿಸಿರುವ 'ಯಶೋದಾ' ನವೆಂಬರ್ 11ರಂದು ತೆಲುಗು, ತಮಿಳು, ಕನ್ನಡ, ಮಲಯಾಳಂ ಹಾಗೂ ಹಿಂದಿ ಭಾಷೆಯಲ್ಲಿ ಬಿಡುಗಡೆಯಾಗಲಿದೆ. ಈ ಸಿನಿಮಾವನ್ನು ಶಿವಲೆಂಕ ಕೃಷ್ಣ ಪ್ರಸಾದ್ ನಿರ್ಮಾಣ ಮಾಡುತ್ತಿದ್ದಾರೆ.

  ಇದು ಆಕ್ಷನ್ ಥ್ರಿಲ್ಲರ್ ಸಿನಿಮಾ

  ಇದು ಆಕ್ಷನ್ ಥ್ರಿಲ್ಲರ್ ಸಿನಿಮಾ

  'ಯಶೋದಾ' ಸಿನಿಮಾ ಇದು ಹೊಸ ಶೈಲಿಯ ಆಕ್ಷನ್ ಥ್ರಿಲ್ಲರ್ ಸಿನಿಮಾ. ಸಸ್ಪೆನ್ಸ್ ಹಾಗೂ ಎಮೋಷನ್‌ಗಳನ್ನು ಸೇರಿಸಿ ಕಥೆಯನ್ನು ಹೆಣೆಯಲಾಗಿದೆ. ಸಮಂತಾ ಈ ಸಿನಿಮಾದಲ್ಲಿ ಬರುವ ಆಕ್ಷನ್ ಹಾಗೂ ದೃಶ್ಯಗಳಿಗಾಗಿ ಸಿಕ್ಕಾಪಟ್ಟೆ ಕಷ್ಟ ಪಟ್ಟಿದ್ದಾರೆ. ತೆಲುಗು ಹಾಗೂ ತಮಿಳು ಎರಡೂ ಭಾಷೆಯಲ್ಲಿಯೂ ಇವರೇ ಡಬ್ಬಿಂಗ್ ಮಾಡಿದ್ದಾರೆ. ಹೊಸ ಶೈಲಿ ಸಿನಿಮಾಗಳನ್ನು ಇಷ್ಟ ಪಡುವವರಿಗೆ ಈ ಸಿನಿಮಾ ಖಂಡಿತಾ ಇಷ್ಟ ಆಗುತ್ತೆ ಎನುತ್ತೆ 'ಯಶೋದಾ' ಟೀಮ್.

  ಸಮಂತಾ ಜೊತೆ ದಿಗ್ಗಜರ ಸಮಾಗಮ

  ಸಮಂತಾ ಜೊತೆ ದಿಗ್ಗಜರ ಸಮಾಗಮ

  'ಯಶೋದಾ' ಸಿನಿಮಾದಲ್ಲಿ ಸಮಂತಾ ಜೊತೆಗೆ ವರಲಕ್ಷ್ಮೀ ಶರತ್‌ ಕುಮಾರ್, ಉನ್ನಿ ಮುಕುಂದನ್, ರಾವ್ ರಮೇಶ್, ಮುರಳಿ ಶರ್ಮ, ಸಂಪತ್ ರಾಜ್, ಶತ್ರು, ಮಧಿರಿಮಾ, ಕಲ್ಪಿಕಾ ಗಣೇಶ್, ದಿವ್ಯಾ ಶ್ರೀಪಾದ, ಪ್ರಿಯಾಂಕಾ ಶರ್ಮಾ ಸೇರಿದಂತೆ ಹಲವು ಮಂದಿ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಅದ್ದೂರಿ ಬಜೆಟ್‌ನಲ್ಲಿ ನಿರ್ಮಿಸಿರುವ ಈ ಸಿನಿಮಾವನ್ನು 100ಕ್ಕೂ ಹೆಚ್ಚು ದಿನಗಳ ಕಾಲ ಚಿತ್ರೀಕರಣ ಮಾಡಲಾಗಿದೆ. ಮಣಿಶರ್ಮ ಸಂಗೀತ ನೀಡಿದ್ದಾರೆ. ಸದ್ಯ ತೆಲುಗು ಭಾಷೆಯ ಸಿನಿಮಾಗೆ ಸೆನ್ಸಾರ್ ಆಗಿದ್ದು, ಇನ್ನು ಉಳಿದ ಭಾಷೆಯ ಅವತರಣಿಕೆಗಳಿಗೆ ಸೆನ್ಸಾರ್ ಆಗಬೇಕಿದೆ.

  English summary
  Samantha Starrer First Pan India Movie Yashoda will be releasing On November 11, Know More.
  Tuesday, October 18, 2022, 10:08
  IIFA

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X