For Quick Alerts
  ALLOW NOTIFICATIONS  
  For Daily Alerts

  ಪ್ರಿನ್ಸ್ ಮಹೇಶ್ ಬಾಬುಗೆ ಆಂಟಿ ಆಗ್ತಾರಾ ಬಾಲಿವುಡ್ ಸ್ಟಾರ್ ನಟಿ ಶಿಲ್ಪಾ ಶೆಟ್ಟಿ?

  |

  ಬಾಲಿವುಡ್ ಸ್ಟಾರ್ ನಟ ಮಹೇಶ್ ಬಾಬು ಸದ್ಯ ಸರ್ಕಾರು ವಾರಿ ಪಾಟ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಈ ಸಿನಿಮಾ ಜೊತೆಗೆ ಪ್ರಿನ್ಸ್ ಮುಂದಿನ ಸಿನಿಮಾ ಕೂಡ ಸದ್ದು ಮಾಡುತ್ತಿದೆ. ನಿರ್ದೇಶಕ ತ್ರಿವಿಕ್ರಮ್ ಆಕ್ಷನ್ ಕಟ್ ಹೇಳುತ್ತಿರುವ ಇನ್ನು ಹೆಸರಿಡದ ಚಿತ್ರದಲ್ಲಿ ಮಹೇಶ್ ಬಾಬು ನಟಿಸುತ್ತಿದ್ದಾರೆ.

  ಮಹೇಶ್ ಬಾಬು ಮತ್ತು ತ್ರಿವಿಕ್ರಮ್ ಕಾಂಬಿನೇಷನ್ ನಲ್ಲಿ ಮೂಡಿಬರುತ್ತಿರುವ 3ನೇ ಸಿನಿಮಾ ಇದಾಗಿದೆ. 11 ವರ್ಷಗಳ ಬಳಿಕ ಮಹೇಶ್ ಬಾಬು ಮತ್ತು ತ್ರಿವಿಕ್ರಮ್ ಒಂದಾಗುತ್ತಿದ್ದು, ಚಿತ್ರದ ಮೇಲೆ ಅಭಿಮಾನಿಗಳ ನಿರೀಕ್ಷೆ ದುಪ್ಪಟ್ಟಾಗಿದೆ. ಈ ಸಿನಿಮಾ ಸೆಟ್ಟೇರುವ ಮೊದಲ ಸಿಕ್ಕಾಪಟ್ಟೆ ಚರ್ಚೆಯಾಗುತ್ತಿದ್ದು ಚಿತ್ರದ ಬಗ್ಗೆ ಮತ್ತೊಂದು ಸುದ್ದಿ ಕೇಳಿಬರುತ್ತಿದೆ.

  ನನ್ನನ್ನು ಬಳಸಿಕೊಂಡು ದೂರತಳ್ಳಿದ್ರು; ಅಕ್ಷಯ್ ಕುಮಾರ್ ಬಗ್ಗೆ ಶಾಕಿಂಗ್ ಹೇಳಿಕೆ ನೀಡಿದ್ದ ಶಿಲ್ಪಾ ಶೆಟ್ಟಿ

  ಮಹೇಶ್ ಬಾಬು ಹೊಸ ಸಿನಿಮಾದಲ್ಲಿ ಬಾಲಿವುಡ್ ಸ್ಟಾರ್ ನಟಿ ಶಿಲ್ಪಾ ಶೆಟ್ಟಿ ಕಾಣಿಸಿಕೊಳ್ಳುತ್ತಿದ್ದಾರೆ ಎನ್ನುವ ಮಾತು ಕೇಳಿಬರುತ್ತಿದೆ. ಚಿತ್ರದ ಪ್ರಮುಖ ಪಾತ್ರದಲ್ಲಿ ಅಂದರೆ ಮಹೇಶ್ ಬಾಬು ಚಿಕ್ಕಮ್ಮನ ಪಾತ್ರದಲ್ಲಿ ಬಾಲಿವುಡ್ ಬ್ಯೂಟಿ ಶಿಲ್ಪಾ ಶೆಟ್ಟಿ ಬಣ್ಣ ಹಚ್ಚುತ್ತಿದ್ದಾರಂತೆ. ಆದರೆ ಈ ಬಗ್ಗೆ ಚಿತ್ರತಂಡ ಯಾವುದೇ ಅಧಿಕೃತ ಮಾಹಿತಿ ಬಹಿರಂಗ ಪಡಿಸಿಲ್ಲ.

  ಅನೇಕ ವರ್ಷಗಳಿಂದ ಬಣ್ಣದ ಲೋಕದಿಂದ ದೂರ ಉಳಿದಿದ್ದ ಶಿಲ್ಪಾ ಶೆಟ್ಟಿ ಇತ್ತೀಚಿಗಷ್ಟೆ ಹಂಗಾಮ-2 ಮೂಲಕ ಮತ್ತೆ ಬಣ್ಣ ಹಚ್ಚಿದ್ದರು. ಸಿನಿಮಾ ಸದ್ಯ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದ್ದು, ಸದ್ಯದಲ್ಲೇ ತೆರೆಗೆ ಬರುವ ಸಾಧ್ಯತೆ ಇದೆ. ಈ ಸಿನಿಮಾ ಬಳಿಕ ಶಿಲ್ಪಾ ದಕ್ಷಿಣ ಭಾರತೀಯ ಚಿತ್ರರಂಗದ ಕಡೆ ಮುಖಮಾಡಲಿದ್ದು, ತೆಲುಗು ಚಿತ್ರದಲ್ಲಿ ಬಣ್ಣಹಚ್ಚುತ್ತಾರಾ ಎನ್ನುವುದು ಕುತೂಹಲ ಮೂಡಿಸಿದೆ.

  ಅಭಿಮಾನಿಗಳ ಜೊತೆ ಕೈ ಜೋಡಿಸಿ ಬಡವರಿಗೆ ಆಸರೆಯಾದ ಶಿವರಾಜ್ ಕುಮಾರ್ | Filmibeat Kannada

  ಮಹೇಶ್ ಬಾಬು ಸದ್ಯ ಪರಶುರಾಮ್ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಸರ್ಕಾರು ವಾರಿ ಪಾಟ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈಗಾಗಲೇ ಚಿತ್ರೀಕರಣ ಪ್ರಾರಂಭ ಮಾಡಲಾಗಿದ್ದು ಕೊರೊನಾ ಹಾವಳಿಯ ಕಾರಣದಿಂದ ಚಿತ್ರೀಕರಣ ಸ್ಥಗಿತಗೊಳಿಸಲಾಗಿದೆ. ಚಿತ್ರದಲ್ಲಿ ನಾಯಕಿಯಾಗಿ ಕೀರ್ತಿ ಸುರೇಶ್ ಕಾಣಿಸಿಕೊಳ್ಳುತ್ತಿದ್ದಾರೆ.

  English summary
  Bollywood Actress Shilpa Shetty likely to play important role in Mahesh Babu and Trivikram's movie.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X