ಖಾಸಗಿ ಬಸ್‌ನಲ್ಲಿ 'ಗೇಮ್ ಚೇಂಜರ್' ಚಿತ್ರ ಪ್ರದರ್ಶನ, ₹2000 ಕೊಟ್ಟರೆ ಆರಾಮಾಗಿ ಸಿನಿಮಾ ನೋಡಬಹುದು..!
ಒಂದು ಚಿತ್ರದ ಹಿಂದೆ ಹತ್ತಾರು ಕಥೆಗಳಿರುತ್ತವೆ, ವ್ಯಥೆಗಳಿರುತ್ತವೆ. ಸಿನಿಮಾ ನಿರ್ಮಾಣ ಸಿನಿಮಾವೊಂದನ್ನು ಚಿತ್ರಮಂದಿರದಲ್ಲಿ ಕುಳಿತು ನೋಡಿದಷ್ಟು ಸುಲಭವಲ್ಲ. ಇಲ್ಲಿ ಎಲ್ಲೆಲ್ಲಿಂದಲೋ ದುಡ್ಡು ಹೊಂಚಿತಂದು ಚಿತ್ರವನ್ನು ಮಾಡುವ ನಿರ್ಮಾಪಕರಿದ್ದಾರೆ. ಜೀವವನ್ನೇ ಬಸಿದು ನಿರ್ದೇಶನ ಮಾಡುವ ನಿರ್ದೇಶಕರಿದ್ದಾರೆ .
ತಮ್ಮ ಚಿತ್ರಕ್ಕೆ ತಿಂಗಳಾನುಗಟ್ಟಲೆ ಕುಳಿತು ಸ್ಕ್ರಿಪ್ಟು, ಪ್ಲ್ಯಾನಿಂಗು, ನೂರಾರು ದಿನಗಳ ಚಿತ್ರೀಕರಣವನ್ನು ಮಾಡಿ ಜವಾಬ್ದಾರಿಗಳನ್ನು ಹೆಗಲಿಗೇರಿಸಿಕೊಂಡು ಅನೇಕರು ಇಲ್ಲಿ ದುಡಿಯುತ್ತಾರೆ. ಆದರೆ ಈಗೀಗ ಯಾವ ಭಯ ಇಲ್ಲದೇ ಈಗಷ್ಟೇ ಬಿಡುಗಡೆಯಾದ ಚಿತ್ರಗಳನ್ನು ಆನ್‌ಲೈನ್‌ನಲ್ಲಿ ಲೀಕ್ ಮಾಡುವುದು, ಪೈರಸಿಯನ್ನು ಮಾಡುವುದು, ಸಾಧ್ಯವಾದರೆ ಕೆಲ ಮಹತ್ವದ ಸೀನ್‌ಗಳನ್ನು ನಿರ್ಭಯವಾಗಿ ಲೀಕ್ ಮಾಡುವ ಲೀಕಾಸುರರ ಹಾವಳಿ ಹೆಚ್ಚುತ್ತಲೆ ಇದೆ.

ಈ ತರಹದ ವಿದ್ಯಮಾನ ಚಿತ್ರದ ಮಾರುಕಟ್ಟೆಗೆ ಗಳಿಕೆಗೆ ಪೆಟ್ಟು ನೀಡಬಹುದು ಎಂಬ ಅರಿವು ಇದ್ದರೂ ಕೂಡ ಅರಿವು ಇಲ್ಲದಂತೆ ಸೋಶಿಯಲ್ ಮೀಡಿಯಾದಲ್ಲಿ ಇಡೀ ಚಿತ್ರವನ್ನು ಅಪ್‌ಲೋಡ್ ಮಾಡುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಎಷ್ಟೇ ಜಾಗರೂಕತೆಯಿಂದ ಇದ್ದರೂ ಕೂಡ ಕಿಡಿಗೇಡಿಗಳು ಚಿತ್ರವನ್ನು ಸೆರೆ ಹಿಡಿದು ಕ್ಷಣಾರ್ಧದಲ್ಲಿ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಮಾಡುತ್ತಾರೆ. ಇದಕ್ಕೆ ಇನ್ನೊಂದು ಜ್ವಲಂತ ಉದಾಹರಣೆಯಂತೆ ಮೊನ್ನೆ ಮೊನ್ನೆ ಬಿಡುಗಡೆಯಾದ ರಾಮ್ ಚರಣ್ ಅಭಿನಯದ ಗೇಮ್ ಚೇಂಜರ್ ಚಿತ್ರ ಆನ್ ಲೈನ್‌ನಲ್ಲಿ ಸೋರಿಕೆಯಾಗಿದೆ. ಸಾಲದಕ್ಕೆ ಖಾಸಗಿ ಬಸ್‌ಗಳಲ್ಲಿ ಯಾವ ಹೆದರಿಕೆ ಅಳುಕಿಲ್ಲದೆ ಈ ಚಿತ್ರದ HD ಪ್ರಿಂಟ್‌ನ್ನು ಪ್ರದರ್ಶನ ಮಾಡಲಾಗುತ್ತಿದೆ.
ಸಾಮಾನ್ಯವಾಗಿ ಖಾಸಗಿ ಬಸ್‌ಗಳಲ್ಲಿ ದೂರದ ಊರುಗಳಿಗೆ ತೆರಳುವ ಸಂದರ್ಭದಲ್ಲಿ ಹಳೆಯ ಚಿತ್ರದ ಪ್ರದರ್ಶನವನ್ನು ಮಾಡಲಾಗುತ್ತೆ. ಆದರೆ, ಇಲ್ಲಿ ಮೊನ್ನೆ ಮೊನ್ನೆ ಬಿಡುಗಡೆಯಾದ ಗೇಮ್ ಚೇಂಜರ್ ಚಿತ್ರದ HD ಪ್ರಿಂಟ್‌ನ್ನೇ ಪ್ರದರ್ಶನ ಮಾಡಲಾಗುತ್ತಿದೆ. ಇನ್ನು ಇದು ಹಬ್ಬದ ಸೀಸನ್. ಸಂಕ್ರಾಂತಿ ಹಬ್ಬದ ಪ್ರಯುಕ್ತ ಸಹಜವಾಗಿ ಜನಜಂಗುಳಿ ಇರುತ್ತೆ. ಬಸ್‌ಗಳಿಗೆ ಬೇಡಿಕೆ ಕೂಡ ಹೆಚ್ಚಾಗುತ್ತೆ. ಖಾಸಗಿ ಬಸ್‌ನಲ್ಲಿ ಟಿಕೆಟ್ ದರವನ್ನು ಕೂಡ ಹೆಚ್ಚು ಮಾಡಿರಲಾಗುತ್ತೆ. ಇದಕ್ಕೆ ಪೂರಕವಾಗಿ ಹೈದ್ರಾಬಾದ್‌ನಲ್ಲಿ ಎರಡರಿಂದ ಮೂರು ಸಾವಿರ ಹಣವನ್ನು ಖಾಸಗಿ ಬಸ್‌ನವರು ಈ ಹಬ್ಬದ ಸಮಯದಲ್ಲಿ ಪೀಕುತ್ತಿದ್ದಾರೆ ಎನ್ನುವ ಸುದ್ದಿ ಕೇಳಿ ಬರುತ್ತಿದೆ. ಟಿಕೆಟ್ ದರವನ್ನೇರಿಸಿ ಸಂಕ್ರಾಂತಿ ಹಬ್ಬದ ಪ್ರಯುಕ್ತ ಜನರನ್ನು ತಮ್ಮತ್ತ ಸೆಳೆಯಲು ಖಾಸಗಿ ಬಸ್‌ನವರು ಈ ಕೆಲಸವನ್ನು ಮಾಡಿದ್ದಾರೆ ಎನ್ನುವ ಅನುಮಾನವನ್ನು ಸದ್ಯಕ್ಕೆ ಅನೇಕರು ವ್ಯಕ್ತಪಡಿಸುತ್ತಿದ್ದಾರೆ. ಗೇಮ್ ಚೇಂಜರ್ ಚಿತ್ರತಂಡ ಈ ಖಾಸಗಿ ಬಸ್ ಅವರಿಂದ ಕೂಡ ಹಣ ವಸೂಲಿ ಮಾಡಬೇಕೆಂದು ಆಗ್ರಹಿಸುತ್ತಿದ್ದಾರೆ.
ಇನ್ನೂ ಕೆಲವರು ಚಿತ್ರವನ್ನು ಚಿತ್ರಮಂದಿರದಲ್ಲಿಯೇ ನೋಡಲು ಸಾಧ್ಯವಾಗುತ್ತಿಲ್ಲ. ಹೀಗಿರುವಾಗ ಖಾಸಗಿ ಬಸ್‌ನಲ್ಲಿ ದುಬಾರಿ ಟಿಕೆಟ್ ಖರೀದಿಸಿ ಈ ಚಿತ್ರವನ್ನು ಹೇಗೆ ಸಹಿಸಿಕೊಳ್ಳುವುದು ಎಂದು ತಮಾಷೆಯನ್ನು ಮಾಡುತ್ತಿದ್ದಾರೆ. ಸದ್ಯಕ್ಕೆ ಹೈದ್ರಾಬಾದ್‌ನ ಖಾಸಗಿ ಬಸ್‌ನಲ್ಲಿ ಗೇಮ್ ಚೇಂಜರ್ ಚಿತ್ರವನ್ನು ಪ್ರದರ್ಶಿಸುತ್ತಿರುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಕೆಲವರ ಆಕ್ರೋಶಕ್ಕೂ ಈ ವಿಡಿಯೋ ಕಾರಣವಾಗಿದೆ. ಇನ್ನುಳಿದಂತೆ ಗೇಮ್ ಚೇಂಜರ್ ಮಿಶ್ರ ಪ್ರತಿಕ್ರಿಯೆ ನಡುವೆಯೇ ಬಾಕ್ಸಾಫೀಸ್‌ನ ದೋಚುತ್ತಿದೆ ಎಂದು ಹೇಳಲಾಗುತ್ತಿದೆ. ಆದರೆ, ಅನೇಕರು ಈ ವಿಚಾರದಲ್ಲಿ ಅನುಮಾನ ವ್ಯಕ್ತಪಡಿಸಿದ್ದಾರೆ. ಬೇಕು ಬೇಕಂತಲೇ ಚಿತ್ರತಂಡ ತಪ್ಪು ಲೆಕ್ಕವನ್ನು ನೀಡುತ್ತಿದೆ ಈ ಮೂಲಕ ಪ್ರೇಕ್ಷಕರ ದಾರಿಯನ್ನು ತಪ್ಪಿಸುತ್ತಿದೆ ಎಂದು ಕಿಡಿ ಕಾರುತ್ತಿದ್ದಾರೆ. ಇದೆಲ್ಲದ್ರ ನಡುವೆ ಚಿತ್ರದ HD ಪ್ರಿಂಟ್ ಲೀಕ್ ಆಗಿ ಕಂಡ ಕಂಡಲೆಲ್ಲ ಪ್ರದರ್ಶನಗೊಳ್ಳುತ್ತಿದೆ. ಇದರಿಂದ ಚಿತ್ರದ ಗಳಿಕೆಯ ಮೇಲೆ ಪರಿಣಾಮ ಉಂಟಾಗಲಿದೆ. ಅದರಲ್ಲಿ ಯಾವ ಅನುಮಾನವೂ ಇಲ್ಲ.


Click it and Unblock the Notifications











