ಪ್ರಭಾಸ್ 'ಸಲಾರ್' ಸಿನಿಮಾದಲ್ಲಿ ನಟಿ ಶ್ರುತಿ ಹಾಸನ್ ಪಾತ್ರ ರಿವೀಲ್

ಟಾಲಿವುಡ್ ಸ್ಟಾರ್ ಪ್ರಭಾಸ್ ಮತ್ತು ಕನ್ನಡದ ನಿರ್ದೇಶಕ ಪ್ರಶಾಂತ್ ನೀಲ್ ಕಾಂಬಿನೇಷನ್ ನಲ್ಲಿ ಬರ್ತಿರುವ ಸಲಾರ್ ಸಿನಿಮಾದ ಚಿತ್ರೀಕರಣ ಭರ್ಜರಿಯಾಗಿ ನಡೆಯುತ್ತಿದೆ.

ಚಿತ್ರದಲ್ಲಿ ಪ್ರಭಾಸ್ ಗೆ ನಾಯಕಿಯಾಗಿ ಖ್ಯಾತ ನಟಿ ಶ್ರುತಿ ಹಾಸನ್ ಕಾಣಿಸಿಕೊಳ್ಳುತ್ತಿದ್ದಾರೆ. ಅಂದಹಾಗೆ ಸಲಾರ್ ಸಿನಿಮಾ ಸ್ಯಾಂಡಲ್ ವುಡ್ ನ ಸೂಪರ್ ಹಿಟ್ ಉಗ್ರಂ ಸಿನಿಮಾದ ರಿಮೇಕ್ ಎಂದು ಹೇಳಲಾಗುತ್ತಿದೆ. ಆದರೆ ಉಗ್ರಂನಲ್ಲಿ ನಟಿಸಿದ್ದ ನಟಿ ಹರಿಪ್ರಿಯಾ ಪಾತ್ರಕ್ಕೂ ಸಲಾರ್ ನ ಶ್ರುತಿ ಹಾಸನ್ ಪಾತ್ರಕ್ಕೂ ಯಾವುದೇ ಹೋಲಿಕೆ ಇಲ್ಲ.

ಸಲಾರ್ ಸಿನಿಮಾದಲ್ಲಿ ನಟಿ ಶ್ರುತಿ ಹಾಸನ್ ಪಾತ್ರ ರಿವೀಲ್ ಆಗಿದೆ. ಚಿತ್ರದಲ್ಲಿ ಶ್ರುತಿ ಹಾಸನ್ ಪತ್ರಕರ್ತೆಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಆದರೆ ಉಗ್ರಂನಲ್ಲಿ ನಟಿ ಹರಿಪ್ರಿಯಾ ವಿದೇಶದಿಂದ ಭಾರತಕ್ಕೆ ವಾಪಸ್ ಆಗಿರುವ ಹುಡುಗಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಹಾಗಾಗಿ ಇಬ್ಬರ ಪಾತ್ರಕ್ಕೂ ತುಂಬಾ ವ್ಯತ್ಯಾಸ ವಿದೆ ಎನ್ನುವುದು ಗೊತ್ತಾಗುತ್ತಿದೆ. ಸಲಾರ್ ಸಾಕಷ್ಟು ಬದಲಾವಣೆ ಮಾಡಿಕೊಳ್ಳಲಾಗಿದ್ದು, ನಾಯಕಿ ಪಾತ್ರವನ್ನು ಬದಲಾಯಿಸಲಾಗಿದೆ ಎನ್ನುವುದು ಮೇಲ್ನೋಟಕ್ಕೆ ಗೊತ್ತಾಗುತ್ತಿದೆ.

Shruti Haasan likely to play political journalist role in Prabhas starrer Salaar movie

ಸಲಾರ್ ನಲ್ಲಿ ಶ್ರುತಿ ಹಾಸನ್ ಪೊಲಿಟಿಕಲ್ ಜರ್ನಲಿಸ್ಟ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ ಎನ್ನುವ ಸುದ್ದಿ ವೈರಲ್ ಆಗಿದೆ. ಆದರೆ ಈ ಬಗ್ಗೆ ಸಿನಿಮಾತಂಡ ಆಗಲಿ ಅಥವಾ ಶ್ರುತಿ ಹಾಸನ್ ಎಲ್ಲಿಯೂ ಬಹಿರಂಗ ಪಡಿಸಿಲ್ಲ. ದೊಡ್ಡ ಬಜೆಟ್ ನಲ್ಲಿ ಸಿದ್ಧವಾಗುತ್ತಿರುವ ಸಲಾರ್ ನಲ್ಲಿ ಇನ್ನೂ ಏನೆಲ್ಲ ಬದಲಾವಣೆ ಮಾಡಿಕೊಂಡಿದ್ದಾರೆ ಎನ್ನುವುದು ಅಭಿಮಾನಿಗಳ ಸದ್ಯದ ಕುತೂಹಲ.

ಈಗಾಗಲೇ ಸಲಾರ್ ಚಿತ್ರೀಕರಣ ಬಹುತೇಕ ಮುಕ್ತಾಯವಾಗಿದೆ. ಸದ್ಯ ರವಿ ಬಸ್ರೂರ್ ಸ್ಟುಡಿಯೋದಲ್ಲಿ ಸಂಗೀತ ಕೆಲಸ ನಡೆಯುತ್ತಿದೆ. ನಟ ಪ್ರಭಾಸ್ ಸಲಾರ್ ಜೊತೆಗೆ ಆದಿಪುರುಷ್ ಸಿನಿಮಾದಲ್ಲೂ ಬ್ಯುಸಿಯಾಗಿದ್ದಾರೆ. ಸಲಾರ್ ಗೆ ಹೊಂಬಾಳೆ ಫಿಲ್ಮ್ಸ್ ಬಂಡವಾಳ ಹೂಡುತ್ತಿದೆ.

More from Filmibeat

English summary
Actress Shruti Haasan likely to play political journalist role in Prabhas starrer Salaar movie.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X