ಅಲ್ಲು ಅರ್ಜುನ್ 'ಪುಷ್ಪಾ' ಸಿನಿಮಾದಲ್ಲಿ ತಮಿಳು ಸ್ಟಾರ್ ನಟ
ತೆಲುಗು ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಅಭಿನಯದ ಪುಷ್ಪಾ ಸಿನಿಮಾದ ಚಿತ್ರೀಕರಣ ಪ್ರಾರಂಭವಾಗಿದೆ. ಲಾಕ್ ಡೌನ್ ಬಳಿಕ ಮೊದಲ ಬಾರಿಗೆ ಚಿತ್ರೀಕರಣಕ್ಕೆ ಹೊರಟಿದ್ದಾರೆ ಅಲ್ಲು ಅರ್ಜುನ್ ಮತ್ತು ತಂಡ. ಪುಷ್ಪಾ ನಿರ್ದೇಶಕ ಸುಕುಮಾರ್ ಸಾರಥ್ಯದಲ್ಲಿ ಮೂಡಿ ಬರುತ್ತಿರುವ ಸಿನಿಮಾ.
ಚಿತ್ರದಲ್ಲಿ ಅಲ್ಲು ಅರ್ಜುನ್ ಗೆ ನಾಯಕಿಯಾಗಿ ರಶ್ಮಿಕಾ ಮಂದಣ್ಣ ಕಾಣಿಸಿಕೊಳ್ಳುತ್ತಿದ್ದಾರೆ. ಸದ್ಯ ಭರ್ಜರಿಯಾಗಿ ಚಿತ್ರೀಕರಣ ನಡೆಸುತ್ತಿರುವ ಸಿನಿಮಾತಂಡದಿಂದ ಮತ್ತೊಂದು ಸುದ್ದಿ ಕೇಳಿ ಬರುತ್ತಿದೆ. ಪುಷ್ಪಾ ಸಿನಿಮಾಗೆ ತಮಿಳಿನ ಮತ್ತೋರ್ವ ಖ್ಯಾತ ನಟ ಎಂಟ್ರಿ ಕೊಡುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.
ಹೌದು, ತಮಿಳು ನಟ ಆರ್ಯ ಪುಷ್ಪಾ ಸಿನಿಮಾದ ಪ್ರಮುಖ ಪಾತ್ರದಲ್ಲಿ ನಟಿಸಲಿದ್ದಾರೆ ಎನ್ನುವ ಸುದ್ದಿ ಕೇಳಿಬರುತ್ತಿದೆ. ಮೂಲಗಳ ಪ್ರಕಾರ ನಟ ವಿಜಯ್ ಸೇತುಪತಿ ಮಾಡಬೇಕಿದ್ದ ಪಾತ್ರದಲ್ಲಿ ನಟ ಆರ್ಯ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ. ಆದರೆ ಬಗ್ಗೆ ಸಿನಿಮಾತಂಡ ಯಾವುದೇ ಅಧಿಕೃತ ಮಾಹಿತಿ ಬಹಿರಂಗ ಪಡಿಸಿಲ್ಲ.

ಪುಷ್ಪಾ ಸಿನಿಮಾದಲ್ಲಿ ಖ್ಯಾತ ನಟ ಜಗಪತಿ ಬಾಬು, ಕನ್ನಡದ ನಟ ಡಾಲಿ ಸೇರಿದಂತೆ ಅನೇಕರು ನಟಿಸುತ್ತಿದ್ದಾರೆ. ಚಿತ್ರದಲ್ಲಿ ಅಲ್ಲು ಅರ್ಜುನ್ ಲಾರಿ ಡ್ರೈವರ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ.
ಅಲ್ಲು ಅರ್ಜುನ್ ಸಿನಿ ಜೀವನದಲ್ಲೇ ಅತ್ಯಂತ ಸವಾಲಿನ ಪಾತ್ರ ಇದಾಗಿದೆಯಂತೆ. ಈಗಾಗಲೇ ಸಿನಿಮಾದಿಂದ ಒಂದು ಲುಕ್ ರಿಲೀಸ್ ಮಾಡಲಾಗಿದ್ದು, ಕಾಡಿನ ಮಧ್ಯೆ ಅಲ್ಲು ಅರ್ಜುನ್ ನಡೆದುಕೊಂಡು ಹೋಗುತ್ತಿರುವ ಪೋಸ್ಟರ್ ಅಭಿಮಾನಿಗಳ ನಿದ್ದೆ ಗೆಡಿಸಿದೆ.


Click it and Unblock the Notifications











