ನಟ ಚಿರಂಜೀವಿ 'ಆಚಾರ್ಯ' ಚಿತ್ರೀಕರಣಕ್ಕೆ ಹೊರಡುವ ಮೊದಲು ಕೇಳಿಬಂತು ಬ್ಯಾಡ್ ನ್ಯೂಸ್
ಟಾಲಿವುಡ್ ಮೆಗಾಸ್ಟಾರ್ ಚಿರಂಜೀವಿ ಬಹುನಿರೀಕ್ಷೆಯ ಆಚಾರ್ಯ ಸಿನಿಮಾದ ಚಿತ್ರೀಕರಣಕ್ಕೆ ಹೊರಡಲು ಸಿದ್ಧರಾಗಿದ್ದರು. ಆದರೆ ಚಿತ್ರೀಕರಣ ಪ್ರಾರಂಭ ಮಾಡುವ ಮೊದಲೇ ಮೆಗಾ ಸ್ಟಾರ್ ಕಡೆಯಿಂದ ಬ್ಯಾಡ್ ನ್ಯೂಸ್ ಕೇಳಿಬಂದಿದೆ.
ಕೊರೊನಾ ವರದಿ ಪಾಸಿಟಿವ್ ಬಂದಿದೆ ಎಂದು ನಟ ಚಿರಂಜೀವಿ ಸಾಮಾಜಿಕ ಜಾಲತಾಣದಲ್ಲಿ ಬಹಿರಂಗಪಡಿಸಿದ್ದಾರೆ. ಆಚಾರ್ಯ ಸಿನಿಮಾದ ಚಿತ್ರೀಕರಣಕ್ಕೆ ಹೊರಡುವ ಮೊದಲು ನಿಯಮದಂತೆ ಕೊರೊನಾ ಪರೀಕ್ಷೆಗೆ ಒಳಗಾಗಿದ್ದಾರೆ. ಆದರೆ ಕೊರೊನಾ ವರದಿ ಪಾಸಿಟಿವ್ ಬಂದಿದೆ. ಸೋಂಕಿನ ಯಾವುದೇ ಲಕ್ಷಣಗಳಿಲ್ಲ, ಹೋಮ್ ಕ್ವಾರಂಟೈನ್ ನಲ್ಲಿ ಇರುವುದಾಗಿ ಚಿರಂಜೀವಿ ಟ್ವೀಟ್ ಮೂಲಕ ಬಹಿರಂಗ ಪಡಿಸಿದ್ದಾರೆ. ಮುಂದೆ ಓದಿ..

ಕೊರೊನಾ ಪರೀಕ್ಷೆಗೆ ಒಳಗಾಗುವ ಸಾಧ್ಯತೆ ಇದೆ.
ಚಿರಂಜೀವಿ, ನಟ ನಾಗಾರ್ಜುನ ಮತ್ತು ಸಿಎಂ ಭೇಟಿಯಾದ ಬಳಿಕ ಕೊರೊನಾ ಪಾಸಿಟಿವ್ ಬಂದಿರುವುದರಿಂದ ಇದೀಗ ನಟ ನಾಗಾರ್ಜುನ ಮತ್ತು ತೆಲಂಗಾಣ ಸಿ ಎಂ ಕೊರೊನಾ ಪರೀಕ್ಷೆಗೆ ಒಳಗಾಗುವ ಸಾಧ್ಯತೆ ಇದೆ. ಸಿಎಂ ಭೇಟಿ ಸಮಯದಲ್ಲಿ ಸಾಕಷ್ಟು ಮಂದಿ ಹಾಜರಿದ್ದರು.
More from Filmibeat
English summary
Telugu Actor Chiranjeevi tests Positive for corona, Quarantine at home.


Click it and Unblock the Notifications











