ಕೋವಿಡ್ ಲಸಿಕೆ ಪಡೆದ ನಟ ಮಹೇಶ್ ಬಾಬು ಹೇಳಿದ್ದೇನು?

ಕೊರೊನಾದಿಂದ ಇಡೀ ದೇಶ ತತ್ತರಿಸಿ ಹೋಗಿದೆ. ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಸಾವಿರಾರು ಮಂದಿ ಕೊರೊನಾಗೆ ಬಲಿಯಾಗುತ್ತಿದ್ದಾರೆ. ಮತ್ತೊಂದೆಡೆ ಕೊರೊನಾ ಲಸಿಕೆ ಕೂಡ ನೀಡಲಾಗುತ್ತಿದೆ. ಸಾಕಷ್ಟು ಮಂದಿ ಕೊರೊನಾ ಲಸಿಕೆ ಪಡೆದಿದ್ದಾರೆ.

ಅನೇಕ ಸಿನಿ ಸೆಲೆಬ್ರಿಟಿಗಳು ಕೊರೊನಾ ಲಸಿಕೆ ಪಡೆಯುವ ಜೊತೆಗೆ ಎಲ್ಲರೂ ಪಡೆದುಕೊಳ್ಳುವಂತೆ ಮನವಿ ಮಾಡುತ್ತಿದ್ದಾರೆ. ಸದ್ಯ 45 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಕೊರೊನಾ ಲಸಿಕೆ ನೀಡಲಾಗುತ್ತಿದೆ. ಇದೀಗ ತೆಲುಗು ಸ್ಟಾರ್ ನಟ ಮಹೇಶ್ ಬಾಬು ಕೊರೊನಾ ಲಸಿಕೆ ಪಡೆದಿದ್ದಾರೆ. ವ್ಯಾಕ್ಸಿನ್ ಪಡೆದ ಬಗ್ಗೆ ಮಹೇಶ್ ಬಾಬು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. ಎರಡನೇ ಅಲೆ ಭೀಕರವಾಗಿದೆ ಎಲ್ಲರೂ ಲಸಿಕೆ ಪಡೆಯಿರಿ ಎಂದು ಹೇಳಿದ್ದಾರೆ.

'ನಾನು ಲಸಿಕೆ ಹಾಕಿಸಿಕೊಂಡಿದ್ದೇನೆ. ದಯವಿಟ್ಟು ನೀವು ಕೂಡ ಪಡೆಯಿರಿ. ಕೊರೊನಾ ಎರಡನೇ ಅಲೆ ಭೀಕರವಾಗಿದೆ. ಈ ಸಮಯದಲ್ಲಿ ಲಸಿಕೆ ಪಡೆಯುವುದು ಉತ್ತಮ. 18 ವರ್ಷಕ್ಕಿಂತ ಮೇಲ್ಪಟ್ಟವರು ಮೇ 1ರಿಂದ ಕೊರೊನಾ ವ್ಯಾಕ್ಸಿನ್ ಪಡೆಯಬಹುದು' ಎಂದು ಹೇಳಿದ್ದಾರೆ.

Telugu Actor Mahesh Babu gets covid-19 vaccine

ಸದ್ಯ ಸಿನಿಮಾ ಕೆಲಸಗಳಿಗೆ ಬ್ರೇಕ್ ಬಿದ್ದಿದ್ದು, ಸ್ಟಾರ್ ಕಲಾವಿದರು ಮನೆಯಲ್ಲೇ ಕುಟುಂಬದ ಜೊತೆ ಕಾಲ ಕಳೆಯುತ್ತಿದ್ದಾರೆ. ಮಹೇಶ್ ಬಾಬು ಕೂಡ ಕುಟುಂಬದ ಜೊತೆ ಸಮಯ ಕಳೆಯುತ್ತಿದ್ದಾರೆ. ಮಗಳು ಸಿತಾರ ಮತ್ತು ಪತ್ನಿ ನಮ್ರತಾ ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ಪೋಸ್ಟ್‌ಗಳನ್ನು ಶೇರ್ ಮಾಡುತ್ತಿರುತ್ತಾರೆ.

ಮಹೇಶ್ ಸದ್ಯ ಸರ್ಕಾರು ಪಾರಿ ಪಾಟ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಈಗಾಗಲೇ ಚಿತ್ರೀಕರಣ ಪ್ರಾರಂಭವಾಗಿದ್ದು, ವಿದೇಶದಲ್ಲಿ ಕೆಲವು ದೃಶ್ಯಗಳ ಚಿತ್ರೀಕರಣ ಮಾಡಿ ಮುಗಿಸಿದೆ ಸಿನಿಮಾತಂಡ. ಚಿತ್ರದಲ್ಲಿ ಮಹೇಶ್ ಬಾಬುಗೆ ನಾಯಕಿಯಾಗಿ ಕೀರ್ತಿ ಸುರೇಶ್ ಕಾಣಿಸಿಕೊಂಡಿದ್ದಾರೆ.

Recommended Video

ಅಪ್ಪು ಜೊತೆ ಪವನ್ ಮಾಡ್ತಿರೋ ಚಿತ್ರದ ಸ್ಪೆಷಾಲಿಟಿ | Filmibeat Kannada

More from Filmibeat

English summary
Tollywood Actor Mahesh Babu gets covid-19 vaccine. He says it needof the hour.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X