ನಾಗಚೈತನ್ಯ ಜೊತೆ ಸಾಯಿ ಪಲ್ಲವಿ ಮದುವೆ ಫೋಟೋ ವೈರಲ್
ಟಾಲಿವುಡ್ ನಟ ನಾಗಚೈತನ್ಯ ಮತ್ತು ಸಾಯಿ ಪಲ್ಲವಿ ಮದುವೆ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ಕಳೆದ ಕಳೆವು ದಿನಗಳಿಂದ ಇಬ್ಬರ ಲವ್ ಸ್ಟೋರಿ ಕೇಳುತ್ತಿದ್ದ ಅಭಿಮಾನಿಗಳು ಈಗ ಮದುವೆ ಫೋಟೋ ನೋಡಿ ಅಚ್ಚರಿ ಪಡುತ್ತಿದ್ದಾರೆ.
ಅಂದಹಾಗೆ ಈ ಫೋಟೋ 'ಲವ್ ಸ್ಟೋರಿ' ಸಿನಿಮಾದ ಹೊಸ ಪೋಸ್ಟರ್. ಹೌದು, ನಾಗಚೈತನ್ಯ ಮತ್ತು ಸಾಯಿ ಪಲ್ಲವಿ ಇಬ್ಬರು ಲವ್ ಸ್ಟೋರಿ ಎನ್ನುವ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈಗಾಗಲೇ ಬಹುತೇಕ ಚಿತ್ರೀಕರಣ ಮುಗಿಸಿರುವ ಸಿನಿಮಾತಂಡ ಇಂದು ದೀಪಾವಳಿಯ ಪ್ರಯುಕ್ತ ಹೊಸ ಪೋಸ್ಟರ್ ಮೂಲಕ ಅಭಿಮಾನಿಗಳ ಮುಂದೆ ಬಂದಿದ್ದಾರೆ.
ಲಾಕ್ ಡೌನ್ ಬಳಿಕ ಮತ್ತೆ ಚಿತ್ರೀಕರಣ ಪ್ರಾರಂಭ ಮಾಡಿರುವ ಸಿನಿಮಾತಂಡ ಇದೀಗ ಹೊಸ ಪೋಸ್ಟರ್ ಮೂಲಕ ಗಮನ ಸೆಳೆಯುತ್ತಿದೆ. ಅದ್ದೂರಿಯಾಗಿ ಅಲಂಕೃತಗೊಂಡಿರುವ ಮಂಟಪದಲ್ಲಿ, ನಾಗಚೈತನ್ಯ ಮತ್ತು ಸಾಯಿ ಪಲ್ಲವಿ ಹಸೆಮಣೆ ಮೇಲೆ ಕುಳಿತಿದ್ದು, ಇಬ್ಬರು ಒಬ್ಬರಿಗೊಬ್ಬರು ನೋಡಿಕೊಂಡು ನಗುತ್ತಿರುವ ಲುಕ್ ಅಭಿಮಾನಿಗಳ ನಿದ್ದೆ ಗೆಡಿಸಿದೆ.

ಲವ್ ಸ್ಟೋರಿ ಚಿತ್ರಕ್ಕೆ ಶೇಖರ್ ಕಮ್ಮುಲ ಆಕ್ಷನ್ ಕಟ್ ಹೇಳಿದ್ದಾರೆ. ಹೆಸರೇ ಹೇಳುವ ಹಾಗೆ ಈ ಸಿನಿಮಾ ಒಂದು ರೊಮ್ಯಾಂಟಿಕ್ ಎಮೋಷನಲ್ ಡ್ರಾಮಾ ಕಥೆಯಾಗಿದೆ. ಈ ಚಿತ್ರದಲ್ಲಿ ನಿರ್ದೇಶಕ ಶೇಖರ್ ಮರ್ಯಾದಾ ಹತ್ಯೆಯಂತಹ ಗಂಭೀರ ಸಮಸ್ಯೆಯ ವಿರುದ್ಧ ಕಠಿಣವಾದ ಸಂದೇಶವನ್ನು ನೀಡಿದ್ದಾರೆ ಎನ್ನಲಾಗಿದೆ.
ಈಗಾಗಲೇ ಸಿನಿಮಾದಿಂದ ಪೋಸ್ಟರ್ಸ್ ಮತ್ತು ಟೀಸರ್ ರಿಲೀಸ್ ಮಾಡಲಾಗಿದ್ದು, ಅಭಿಮಾನಿಗಳಿಂದ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ. ಸದ್ಯ ಕೊನೆಯ ಹಂತದ ಚಿತ್ರೀಕರಣ ಪ್ರಾರಂಭವಾಗಿದ್ದು ಸದ್ಯದಲ್ಲೇ ಚಿತ್ರೀಕರಣ ಮುಗಿಸಲಿದೆ. ಮೂಲಗಳ ಪ್ರಕಾರ ಸಿನಿಮಾ ಈ ವರ್ಷದ ಕೊನೆಯಲ್ಲಿ ಅಂದರೆ ಕ್ರಿಸ್ಮಸ್ ಗೆ ಸಿನಿಮಾ ರಿಲೀಸ್ ಆಗುವ ಸಾಧ್ಯತೆ ಇದೆ.


Click it and Unblock the Notifications











