'ರಾಧೆ-ಶ್ಯಾಮ್' ಸಿನಿಮಾ ಪ್ರದರ್ಶಿಸುತ್ತಿದ್ದ ಚಿತ್ರಮಂದಿರ ಸೀಜ್!

ಪ್ರಭಾಸ್-ಪೂಜಾ ಹೆಗ್ಡೆ ನಟನೆಯ ಭಾರಿ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ 'ರಾಧೆ-ಶ್ಯಾಮ್' ಇಂದಷ್ಟೆ ಬಿಡುಗಡೆ ಆಗಿದ್ದು ಮಿಶ್ರ ಪ್ರತಿಕ್ರಿಯೆಯನ್ನು ಪ್ರೇಕ್ಷಕರಿಂದ ಪಡೆದುಕೊಂಡಿದೆ. 'ರಾಧೆ-ಶ್ಯಾಮ್' ಸಿನಿಮಾ ನಿರೀಕ್ಷಿತ ಮಟ್ಟದಲ್ಲಿ ಇಲ್ಲವೆಂಬ ಅಭಿಪ್ರಾಯವೇ ಪ್ರೇಕ್ಷಕರಿಂದ ವ್ಯಕ್ತವಾಗುತ್ತಿದೆ.

'ರಾಧೆ-ಶ್ಯಾಮ್' ಸಿನಿಮಾದ ಹಿಂದಿ ಡಬ್ಬಿಂಗ್‌ ನೀರಸವಾಗಿ ಓಪನಿಂಗ್ ಪಡೆದುಕೊಂಡಿದೆ ಎಂಬ ವರದಿಗಳು ಬಂದಿವೆ. ಈ ನಡುವೆ 'ರಾಧೆ-ಶ್ಯಾಮ್' ಸಿನಿಮಾ ಪ್ರದರ್ಶನ ಕಾಣುತ್ತಿದ್ದ ಚಿತ್ರಮಂದಿರಗಳನ್ನು ಸೀಜ್ ಮಾಡಿರುವ ಘಟನೆ ಸಹ ಆಂಧ್ರ ಪ್ರದೇಶದಲ್ಲಿ ನಡೆದಿದೆ.

ಆಂಧ್ರ ಪ್ರದೇಶದಲ್ಲಿ ಕಳೆದೊಂದು ವರ್ಷದಿಂದಲೂ ಚಿತ್ರರಂಗ ಹಾಗೂ ಸರ್ಕಾರದ ನಡುವೆ ಚಿತ್ರಮಂದಿರಗಳ ಟಿಕೆಟ್ ವಿಚಾರವಾಗಿ ತಿಕ್ಕಾಟ ನಡೆಯುತ್ತಲೇ ಇತ್ತು. ಆದರೆ ಚಿರಂಜೀವಿ ಮಧ್ಯ ಪ್ರವೇಶದಿಂದ ಸಮಸ್ಯೆ ತುಸು ನಿವಾರಣೆ ಆಗಿದ್ದು, 'ರಾಧೆ-ಶ್ಯಾಮ್' ಸಿನಿಮಾ ಬಿಡುಗಡೆಗೆ ಕೆಲ ದಿನಗಳ ಮುಂಚೆಯಷ್ಟೆ ಸರ್ಕಾರವು ಹೊಸ ಆದೇಶ ಹೊರಡಿಸಿ, ದೊಡ್ಡ ಸಿನಿಮಾಗಳು ಸಿನಿಮಾ ಬಿಡುಗಡೆ ಆದ ಮೊದಲ ಹತ್ತು ದಿನಗಳು ಚಿತ್ರಮಂದಿರಗಳ ಟಿಕೆಟ್ ದರಗಳನ್ನು ಹೆಚ್ಚಿಸಬಹುದು ಎಂದು ಸರ್ಕಾರ ಹೇಳಿದೆ. ಆದರೆ ಆಂಧ್ರ-ತೆಲಂಗಾಣಗಳಲ್ಲಿ ಜನಪ್ರಿಯವಾಗಿರುವ ಬೆನಿಫಿಟ್ ಶೋಗಳನ್ನು ನಡೆಸುವಂತಿಲ್ಲ ಎಂದಿದೆ.

Theaters Screening Prabhass Radhe-Shyam Movie is Seized In Andhra Pradesh

ಆದರೆ ಆಂಧ್ರದ ಕೆಲವು ನಗರ, ಪಟ್ಟಣಗಳಲ್ಲಿ ಸರ್ಕಾರದ ಆದೇಶ ಉಲ್ಲಂಘಿಸಿ 'ರಾಧೆ-ಶ್ಯಾಮ್' ಸಿನಿಮಾದ ಬೆನಿಫಿಟ್ ಶೋಗಳನ್ನು ನಡೆಸಲಾಗಿದೆ. ಈ ನಿಯಮ ಉಲ್ಲಂಘನೆ ಸರ್ಕಾರದ ಅಧಿಕಾರಿಗಳ ಗಮನಕ್ಕೆ ಬಂದ ಕಡೆಗಳಲ್ಲಿ ಚಿತ್ರಮಂದಿರಗಳನ್ನು ಸೀಜ್ ಮಾಡಿ ಬಂದ್ ಮಾಡಿಸಲಾಗಿದೆ.

ಶ್ರೀಕಾಕುಳಂನ ರಾಜಂ ಎಂಬಲ್ಲಿ ನಿಯಮ ಉಲ್ಲಂಘಿಸಿ 'ರಾಧೆ-ಶ್ಯಾಮ್' ಸಿನಿಮಾದ ಬೆನಿಫಿಟ್ ಶೋ ನಡೆಸಲಾಗುತ್ತಿತ್ತು. ಚಿತ್ರಮಂದಿರದ ಮೇಲೆ ದಾಳಿ ಮಾಡಿದ ಕಂದಾಯ ಅಧಿಕಾರಿಗಳು ಸಿನಿಮಾ ಪ್ರದರ್ಶನವನ್ನು ನಿಲ್ಲಿಸಿದ್ದಲ್ಲದೆ ಚಿತ್ರಮಂದಿರವನ್ನು ಸೀಜ್ ಮಾಡಿದ್ದಾರೆ. ಶ್ರೀಕಾಕುಳಂ ಮಾತ್ರವೇ ಅಲ್ಲದೆ ಇನ್ನೂ ಕೆಲವು ಪಟ್ಟಣ ಪ್ರಾಂಥ್ಯಗಳಲ್ಲಿ ಚಿತ್ರಮಂದಿರಗಳು ನಿಯಮ ಬಾಹಿರವಾಗಿ ಬೆನಿಫಿಟ್ ಶೋಗಳನ್ನು ಪ್ರದರ್ಶಿಸಿರುವುದು ವರದಿ ಆಗಿವೆ.

ಆಂಧ್ರ ಪ್ರದೇಶದ ಚಿತ್ರಮಂದಿರಗಳ ಟಿಕೆಟ್ ದರವನ್ನು ಧಾರುಣವಾಗಿ ಇಳಿಸಿದ್ದರು ಸಿಎಂ ಜಗನ್, ಮುನ್ಸಿಪಲ್ ಕಾರ್ಪೊರೇಷನ್ ವ್ಯಾಪ್ತಿಯಲ್ಲಿನ ಮಲ್ಟಿಫ್ಲೆಕ್ಸ್ ಚಿತ್ರಮಂದಿರದಲ್ಲಿ ಪ್ರೀಮಿಯಂ ಟಿಕೆಟ್ ದರ 250ರೂ ದಾಟುವಂತಿಲ್ಲ. ಡಿಲಕ್ಸ್ ವಿಭಾಗದ ದರ 150 ರು. ದಾಟುವಂತಿಲ್ಲ. ಎಕಾನಮಿ ಕ್ಲಾಸ್ ಟಿಕೆಟ್ 75 ರು. ದಾಟುವಂತಿಲ್ಲ. ಎಸಿ ಚಿತ್ರಮಂದಿರಗಳಲ್ಲಿ ಪ್ರೀಮಿಯಂ ಟಿಕೆಟ್ ದರ 100 ರು ದಾಟುವಂತಿಲ್ಲ, ಡಿಲಕ್ಸ್ 60 ರು. ಹಾಗೂ ಎಕಾನಮಿ 40 ರು ದಾಟುವಂತಿಲ್ಲ. ನಾನ್ ಎಸಿ ಚಿತ್ರಮಂದಿರಗಳಲ್ಲಿ, ಪ್ರೀಮಿಯಂ ಟಿಕೆಟ್ ದರ 60, ಡಿಲಕ್ಸ್ 40, ಎಕಾನಮಿ 20 ಇರಬೇಕು ಎಂದು ಆದೇಶಿಸಲಾಗಿತ್ತು. ಮುನ್ಸಿಪಾಲಿಟಿ ಪ್ರಾಂಥ್ಯದಲ್ಲಿ ಮಲ್ಟಿಫ್ಲೆಕ್ಸ್‌ಗಳ ಪ್ರೀಮಿಯಂ ಟಿಕೆಟ್ ದರ 150, ಡಿಲಕ್ಸ್ 100, ಎಕಾನಮಿ 60 ರುಗಳನ್ನು ದಾಟುವಂತಿಲ್ಲ. ಎಸಿ ಚಿತ್ರಮಂದಿರಗಳ ಪ್ರೀಮಿಯಂ ಟಿಕೆಟ್ ದರ 70 ರು, ಡಿಲಕ್ಸ್ 50 ರು, ಎಕಾನಮಿ 30 ರು ದಾಟುವಂತಿಲ್ಲ. ನಗರ ಪಂಚಾಯಿತಿ ವ್ಯಾಪ್ತಿಯಲ್ಲಿನ ಮಲ್ಟಿಫ್ಲೆಕ್ಸ್‌ನ ಪ್ರೀಮಿಯಂ ಟಿಕೆಟ್ ದರ 120 ರು, ಡಿಲಕ್ಸ್ ಟಿಕೆಟ್ ದರ 80 ರು, ಎಕಾನಮಿ 40 ರುಪಾಯಿ ಬೆಲೆ ದಾಟುವಂತಿಲ್ಲ. ಎಸಿ ಹೊಂದಿದ ಚಿತ್ರಮಂದಿರಗಳಲ್ಲಿ ಪ್ರೀಮಿಯಂ ಟಿಕೆಟ್ ದರ 35 ರು, ಡಿಲಕ್ಸ್ 25 ರು, ಎಕಾನಮಿ 15 ರು ದಾಟುವಂತಿಲ್ಲ. ಇನ್ನು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ, ಮಲ್ಟಿಫ್ಲೆಕ್ಸ್‌ ಪ್ರೀಮಿಯಂ ಟಿಕೆಟ್ ಬೆಲೆ 80 ರು, ಡಿಲಕ್ಸ್ 50 ರು, ಎಕಾನಮಿ 30 ರು. ಎಸಿ ಹೊಂದಿದ ಚಿತ್ರಮಂದಿರಗಳ ಪ್ರೀಮಿಯಂ ಟಿಕೆಟ್ ದರ 20 ರು. ಡಿಲಕ್ಸ್ 15 ರು, ಎಕಾನಮಿ 10 ರು. ಇನ್ನು ಎಸಿ ಇರದ ಚಿತ್ರಮಂದಿರಗಳ ಪ್ರೀಮಿಯಂ ಟಿಕೆಟ್ ದರ 15, ಡಿಲಕ್ಸ್ 10, ಎಕಾನಮಿ ಕ್ಲಾಸ್‌ನ ಟಿಕೆಟ್ ದರ 5 ರುಪಾಯಿ ದಾಟುವಂತಿರಲಿಲ್ಲ.

ಈಗಲೂ ಇದೇ ಮಾದರಿಯ ಟಿಕೆಟ್ ದರಗಳು ಮುಂದುವರೆದಿವೆಯಾದರೂ ದೊಡ್ಡ ಬಜೆಟ್ ಸಿನಿಮಾಗಳು ಬಿಡುಗಡೆ ಆದಾಗ ಮೊದಲ ಹತ್ತು ದಿನ ಚಿತ್ರಮಂದಿರಗಳ ಟಿಕೆಟ್ ದರವನ್ನು ನಿಗದಿತ ಪರ್ಸೆಂಟೇಜ್‌ನಷ್ಟು ಏರಿಸಿಕೊಳ್ಳಬಹುದು ಎಂದು ಹೊಸ ಆದೇಶವನ್ನು ಜಗನ್ ಸರ್ಕಾರ ನೀಡಿದೆ. ಇದರಿಂದ ದೊಡ್ಡ ಬಜೆಟ್ ಸಿನಿಮಾ ನಿರ್ಮಾಪಕರು ತುಸು ನಿರಾಳರಾಗಿದ್ದಾರೆ.

More from Filmibeat

English summary
Theater screening Prabhas-Pooja Hegde starer 'Radhe-Shyam' movie is seized in Andhra Pradesh's Sreekakulam and some other towns.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X