For Quick Alerts
  ALLOW NOTIFICATIONS  
  For Daily Alerts

  ಕಾಡಿಗೆ ಎಂಟ್ರಿ ಕೊಟ್ಟ ಅಲ್ಲು ಅರ್ಜುನ್ ನೋಡಲು ಮುಗಿಬಿದ್ದ ಅಭಿಮಾನಿಗಳು

  |

  ಟಾಲಿವುಡ್ ಸ್ಟೈಲಿಸ್ ಸ್ಟಾರ್ ಅಲ್ಲು ಅರ್ಜುನ್ ರಗಡ್ ಲುಕ್ ನಲ್ಲಿ ಅಭಿಮಾನಿಗಳಿಗೆ ದರ್ಶನ ನೀಡಿದ್ದಾರೆ. ಲಾಕ್ ಡೌನ್ ಬಳಿಕ ಮೊದಲ ಬಾರಿಗೆ ಅಲ್ಲು ಅರ್ಜುನ್ ಕುಟುಂಬದ ಜೊತೆ ಮನೆಯಿಂದ ಹೊರಬಂದಿದ್ದಾರೆ. ತೆಲಂಗಾಣದ ಅಡಿಲಾಬಾದ್ ಕಾಡಿಗೆ ಅಲ್ಲು ಅರ್ಜುನ್ ಭೇಟಿ ನೀಡಿದ್ದಾರೆ.

  ಅಲ್ಲು ಅರ್ಜುನ್ ಎಂಟ್ರಿ ಕೊಡುತ್ತಿದ್ದಂತೆ ಅಭಿಮಾನಿಗಳು ನೆಚ್ಚಿನ ನಟನನ್ನು ನೋಡಲು ಮುಗಿಬಿದ್ದಾರೆ. ಯಾವುದೇ ಸಾಮಾಜಿಕ ಅಂತರ, ಮಾಸ್ಕ್ ಇಲ್ಲದೆ ಅಭಿಮಾನಿಗಳು ಮುತ್ತಿಕೊಂಡಿದ್ದಾರೆ. ಕಾರಿನ ಒಳಗೆ ಕುಳಿತಿದ್ದ ಅಲ್ಲು, ಜನರ ಗುಂಪು ನೋಡಿ ಕೆಳಗೆ ಇಳಿಯಲಿಲ್ಲ. ಕಾರಿನ ಒಳಗೆಯೇ ಕುಳಿತಿದ್ದ ಅಲ್ಲು ಅರ್ಜುನ್ ಫೋಟೋವನ್ನು ಕ್ಲಿಕ್ಕಿಸಿಕೊಂಡು ಸಂತಸಪಟ್ಟಿದ್ದಾರೆ.

  ಪವನ್ ಕಲ್ಯಾಣ್ ಹುಟ್ಟುಹಬ್ಬದಂದು ಫ್ಯಾನ್ಸ್ ಸಾವು: ಕುಟುಂಬದ ನೆರವಿಗೆ ನಿಂತ ಮೆಗಾ ನಟರು

  ಬಳಿಕ ಕಾರಿನನಿಂದ ಇಳಿದು ಅಭಿಮಾನಿಗಳತ್ತ ಕೈ ಬೀಸಿದ್ದಾರೆ. ಅಲ್ಲು ಅರ್ಜುನ್ ನೋಡಿ ಅಭಿಮಾನಿಗಳು ಫುಲ್ ಖುಷ್ ಆಗಿದ್ದಾರೆ. ಈ ವಿಡಿಯೋ ಮತ್ತು ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕುಟುಂಬದ ಜೊತೆ ಸಮಯ ಕಳೆಯುತ್ತಿರುವ ಅಲ್ಲು, ಹರಿತ ವನಮ್ ಪಾರ್ಕ್ ಮತ್ತು ಕುಂತಲಾ ಜಲಪಾತಕ್ಕೆ ಭೇಟಿ ನೀಡಿದ್ದಾರೆ.

  ಕೆಲವರು ಅಲ್ಲು ಪ್ರವಾಸವನ್ನು ಪ್ರಶ್ನೆ ಮಾಡುತ್ತಿದ್ದಾರೆ. ಸರ್ಕಾರ ಇನ್ನೂ ಪ್ರವಾಸಿ ತಾಣವನ್ನು ತೆರೆದಿಲ್ಲ. ಆದರೆ ಅಲ್ಲು ಅರ್ಜುನ್ ಮತ್ತು ಕುಟುಂಬ ಹೇಗೆ ಪ್ರವಾಸ ಮಾಡುತ್ತಿದ್ದಾರೆ ಎಂದು ಕೇಳುತ್ತಿದ್ದಾರೆ. ಆದರೆ ಅಲ್ಲು ಮಾತ್ರ ಕುಟುಂಬ ಮತ್ತು ಸ್ನೇಹಿತರ ಜೊತೆ ಪ್ರವಾಸವನ್ನು ಎಂಜಾಯ್ ಮಾಡುತ್ತಿದ್ದಾರೆ.

  ಪತ್ನಿ Revathi ಕಾಲೆಳೆದ Nikhil Kumaraswamy | Oneindia Kannada

  ಅಲ್ಲು ಅರ್ಜುನ್ ಸದ್ಯ ಪುಷ್ಪ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಲಾರಿ ಡ್ರೈವರ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಅಲ್ಲು ಅರ್ಜುನ್ ಗೆ ನಾಯಕಿಯಾಗಿ ರಶ್ಮಿಕಾ ಮಂದಣ್ಣ ಕಾಣಿಸಿಕೊಳ್ಳುತ್ತಿದ್ದಾರೆ. ಈಗಾಗಲೇ ಎಲ್ಲಾ ತಯಾರಿಗಳನ್ನು ಮಾಡಿಕೊಂಡಿರುವ ಪುಷ್ಪ ತಂಡ ಸದ್ಯದಲ್ಲೇ ಚಿತ್ರೀಕರಣಕ್ಕೆ ಹೊರಡಲಿದೆ.

  English summary
  Tollywood Actor Allu Arjun visits Adilabad in telangana with family and friends.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X