ಡ್ರಗ್ಸ್ ಪ್ರಕರಣ; ಇಡಿ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾದ ನಟ ರವಿ ತೇಜಾ

By ಫಿಲ್ಮಿಬೀಟ್ ಡೆಸ್ಕ್

ನಾಲ್ಕು ವರ್ಷಗಳ ಹಳೆಯ ಡ್ರಗ್ಸ್ ಪ್ರಕರಣ ಸಂಬಂಧ ತೆಲುಗು ಸ್ಟಾರ್ ನಟ ರವಿ ತೇಜಾ ಇಂದು (ಸೆಪ್ಟಂಬರ್ 09) ವಿಚಾರಣೆಗೆ ಹಾಜರಾಗಿದ್ದಾರೆ. ಇಂದು ಬೆಳಗ್ಗೆ ಹೈದರಾಬಾದ್ ನ ಇಡಿ (ಜಾರಿ ನಿರ್ದೇಶನಾಲಯ) ಕಚೇರಿಗೆ ಆಗಮಿಸಿದ ನಟ ರವಿ ತೇಜಾ ಅಧಿಕಾರಿಗಳ ಪ್ರಶ್ನೆಗೆ ಉತ್ತರ ನೀಡುತ್ತಿದ್ದಾರೆ. ಸೆಪ್ಟಂಬರ್ 08ರಂದು ರಾಣಾ ದಗ್ಗುಬಾಟಿ ವಿಚಾರಣೆಗೆ ಹಾಜರಾಗಿದ್ದರು.

ಈಗಾಗಲೇ ತೆಲುಗಿನ ಖ್ಯಾತ ನಿರ್ದೇಶಕ ಪುರಿ ಜಗನ್ನಾಥ್, ನಟಿಯರಾದ ಚಾರ್ಮಿ ಕೌರ್, ರಕುಲ್ ಪ್ರೀತ್ ಸಿಂಗ್ ಮತ್ತು ರಾಣಾ ದಗ್ಗುಬಾಟಿ ವಿಚಾರಣೆ ಎದುರಿಸಿದ್ದಾರೆ. ಇಂದು ರವಿ ತೇಜಾ ಸರದಿಯಾಗಿದ್ದು ಈಗಾಗಲೇ ಇಡಿ ಅಧಿಕಾರಿಗಳ ಮುಂದೆ ಹಾಜರಾಗಿದ್ದಾರೆ.

2017ರ ಡ್ರಗ್ಸ್ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ತೆಲುಗಿನ ಕೆಲವು ಸೆಲೆಬ್ರಿಟಿಗಳಿಗೆ ಸಮನ್ಸ್ ಜಾರಿ ಮಾಡಲಾಗಿತ್ತು. ಅದರಂತೆ ಸೆಲೆಬ್ರಿಟಿಗಳು ತಮಗೆ ನೀಡಿದ ದಿನಾಂಕದಂದು ವಿಚಾರಣೆಗೆ ಎದುರಿಸುತ್ತಿದ್ದಾರೆ. ನಾಲ್ಕು ವರ್ಷಗಳ ಹಿಂದೆ 2017ರಲ್ಲಿ ದಕ್ಷಿಣ ಭಾರತೀಯ ಸಿನಿಮಾರಂಗವನ್ನು ತಲ್ಲಣಗೊಳಿಸಿದ್ದ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಟಾಲಿವುಡ್ ಕೆಲವು ಸೆಲೆಬ್ರಿಟಿಗಳಿಗೆ ಸಮನ್ಸ್ ನೀಡಿತ್ತು. ಖ್ಯಾತ ನಟಿ ರಕುಲ್ ಪ್ರೀತ್ ಸಿಂಗ್, ರಾಣಾ ದಗ್ಗುಬಾಟಿ, ಪುರಿ ಜಗನ್ನಾಥ್, ಚಾರ್ಮಿ ಕೌರ್, ಮುಮೈತ್ ಖಾನ್ ಸೇರಿದಂತೆ ಒಟ್ಟು 13 ಜನರಿಗೆ ವಿಚಾರಣೆಗೆ ಹಾಜರಾಗಬೇಕೆಂದು ಸೂಚಿಸಿ ಸಮನ್ಸ್ ಜಾರಿ ಮಾಡಿತ್ತು.

Tollywood star Actor Ravi Teja appears before ED in Hyderabad

ಆಗಸ್ಟ್ 31ರಂದು ಪುರಿ ಜಗನ್ನಾಥ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿತ್ತು. ಅದರಂತೆ ಪುರಿ ಜಗನ್ನಾಥ್ ಇಡಿ ಅಧಿಕಾರಿಗಳ ಮುಂದೆ ಹಾಜರಾಗಿದ್ದರು. ಸುಮಾರು ಹತ್ತು ಗಂಟೆಗಳ ಕಾಲ ಇಡಿ ಅಧಿಕಾರಿಗಳಿಂದ ಪ್ರಶ್ನೆಗಳನ್ನು ಎದುರಿಸಿದರು. ಸೆಪ್ಟಂಬರ್ 2ರಂದು ನಟಿ, ನಿರ್ಮಾಪಕಿ ಚಾರ್ಮಿ ಕೌರ್ ಇಡಿ ಅಧಿಕಾರಿಗಳ ಮುಂದಿ ಹಾಜರಾಗಿದ್ದರು. ಸತತ ನಾಲ್ಕು ಗಂಟೆಗಳ ಕಾಲ ಚಾರ್ಮಿ ವಿಚಾರಣೆ ಎದುರಿಸಿದರು. ಬಳಿಕ ಸೆಪ್ಟಂಬರ್ 3ರಂದು ರಕುಲ್ ಪ್ರೀತ್ ಸಿಂಗ್ ವಿಚಾರಣೆಗೆ ಹಾಜರಾಗಿದ್ದರು. ಸೆಪ್ಟಂಬರ್ 8ರಂದು ರಾಣಾ ದಗ್ಗುಬಾಟಿ ಇಡಿ ಅಧಿಕಾರಿಗಳ ಮುಂದೆ ಹಾಜರಾಗಿದ್ದರು. ಇನ್ನು ಅನೇಕ ಮಂದಿಯ ವಿಚಾರಣೆ ಬಾಕಿ ಇದ್ದು, ಒಬ್ಬರೆ ಇಡಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.

2017ರ ಡ್ರಗ್ಸ್ ಪ್ರಕರಣ ಸಂಬಂಧ ಹೈದರಾಬಾದ್ ಅಬಕಾರಿ ಇಲಾಖೆಯ ವಿಶೇಷ ತನಿಖಾ ತಂಡ (ಎಸ್‌ಐಟಿ) ಟಾಲಿವುಡ್ ನ 12 ಸೆಲೆಬ್ರಿಟಿಗಳನ್ನು ವಿಚಾರಣೆಗೆ ಒಳಪಡಿಸಿತ್ತು. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಇಲಾಖೆಯೂ ಮನಿ ಲಾಂಡರಿಂಗ್ ಪ್ರಕರಣ ದಾಖಲಿಸಿಕೊಂಡಿತ್ತು. ಮನಿ ಲಾಂಡರಿಂಗ್ ಸಂಬಂಧಿಸಿದಂತೆ ಈಗ 13 ಸೆಲೆಬ್ರಿಟಿಗಳನ್ನು ಪ್ರಶ್ನೆ ಮಾಡಲಾಗುತ್ತಿದೆ.

ರವಿ ತೇಜಾ ಸಿನಿಮಾ ವಿಚಾರಕ್ಕೆ ಬರುವುದಾದರೆ ಇತ್ತೀಚಿಗಷ್ಟೆ ಕ್ರ್ಯಾಕ್ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬಂದಿದ್ದರು. ಈ ಸಿನಿಮಾಗೆ ಅಭಿಮಾನಿಗಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಸದ್ಯ ಖಿಲಾಡಿ ಮತ್ತು ರಾಮರಾವ್ ಆಟ್ ಡ್ಯೂಟಿ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಸದ್ಯ ಖಿಲಾಡಿ ಸಿನಿಮಾದ ಚಿತ್ರೀಕರಣದಲ್ಲಿರುವ ರವಿತೇಜಾ ಇದೀಗ ಇಡಿ ಅಧಿಕಾರಿಗಳ ವಿಚಾರಣೆಗೆ ಹಾಜರಾಗಿದ್ದಾರೆ. ಅಧಿಕಾರಿಗಳು ಕೇಳುವ ಪ್ರಶ್ನೆಗಳಿಗೆ ರವಿತೇಜಾ ಉತ್ತರಿಸುತ್ತಿದ್ದಾರೆ.

More from Filmibeat

English summary
Tollywood star Actor Ravi Teja appears before ED in Hyderabad.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X