For Quick Alerts
  ALLOW NOTIFICATIONS  
  For Daily Alerts

  ರಕ್ತ, ಬೆವರು, ಹಿಂಸೆ; ಮತ್ತೆ ಚಿತ್ರೀಕರಣ ಪ್ರಾರಂಭ ಮಾಡಿದ ನಟ ವಿಜಯ್ ದೇವರಕೊಂಡ

  By ಫಿಲ್ಮಿಬೀಟ್ ಡೆಸ್ಕ್
  |

  ಟಾಲಿವುಡ್ ಸೆನ್ಸೇಷನ್ ಸ್ಟಾರ್ ವಿಜಯ್ ದೇವರಕೊಂಡ ಸದ್ಯ ಬಹುನಿರೀಕ್ಷೆಯ ಲೈಗರ್ ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಈ ಸಿನಿಮಾದ ಮೇಲೆ ವಿಜಯ್ ದೇವರಕೊಂಡ ಸಿಕ್ಕಾಪಟ್ಟೆ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈಗಾಗಲೇ ಸಿನಿಮಾ ಫಸ್ಟ್ ಲುಕ್ ಬಿಡುಗಡೆಯಾದಾಗಿದ್ದು, ಅಭಿಮಾನಿಗಳ ಕುತೂಹಲ ಮತ್ತಷ್ಟು ಹೆಚ್ಚಾಗಿದೆ.

  ಲೈಗರ್ ಪ್ಯಾನ್ ಇಂಡಿಯಾ ಸಿನಿಮಾವಾಗಿದೆ. ಸದ್ಯ ಕೊರೊನಾ ಎರಡನೇ ಅಲೆ ಹೆಚ್ಚಾದ ಬಳಿಕ ಚಿತ್ರೀಕರಣಕ್ಕೆ ಬ್ರೇಕ್ ಹಾಕಲಾಗಿತ್ತು. ಇದೀಗ ಮತ್ತೆ ವಿಜಯ್ ದೇವರಕೊಂಡ ಚಿತ್ರೀಕರಣಕ್ಕೆ ಮರಳಿದ್ದಾರೆ. ಇಂದಿನಿಂದ (ಸೆಪ್ಟಂಬರ್ 15) ಲೈಗರ್ ಸಿನಿಮಾದ ಚಿತ್ರೀಕರಣ ಪ್ರಾರಂಭವಾಗಿದೆ. ಈ ಬಗ್ಗೆ ಸ್ವತಃ ವಿಜಯ್ ದೇವರಕೊಂಡ ಸಾಮಾಜಿಕ ಜಾಲತಾಣದಲ್ಲಿ ಬಹಿರಂಗ ಪಡಿಸಿದ್ದಾರೆ.

  ಬ್ಯಾಕ್ ಪೋಸ್ ಫೋಟೋ ಶೇರ್ ಮಾಡುವ ಮೂಲಕ ವಿಜಯ್ ದೇವರಕೊಂಡ ಚಿತ್ರೀಕರಣ ಪ್ರಾರಂಭವಾಗಿರುವುದಾಗಿ ಹೇಳಿದ್ದಾರೆ. ಜೊತೆಗೆ ಫೋಟೋಗೆ ರಕ್ತ, ಬೆವರು, ಹಿಂಸೆ ಎನ್ನುವ ಕ್ಯಾಪ್ಷನ್ ನೀಡಿದ್ದಾರೆ. ಲೈಗರ್ ಸಿನಿಮಾದ ಅಪ್‌ಡೇಟ್‌ಗಾಗಿ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದರು. ಆದರೆ ಸಿನಿಮಾದ ಬಗ್ಗೆ ಯಾವುದೇ ಮಾಹಿತಿ ಬಹಿರಂಗವಾಗಿರಲಿಲ್ಲ. ಇದೀಗ ಚಿತ್ರೀಕರಣ ಪ್ರಾರಂಭವಾಗಿರುವ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.

  ಅಂದಹಾಗೆ ಲೈಗರ್ ಚಿತ್ರಕ್ಕೆ ಖ್ಯಾತ ನಿರ್ದೇಶಕ ಪುರಿ ಜಗನ್ನಾಥ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಅಂದಹಾಗೆ ಪುರಿ ಜಗನ್ನಾಥ್ ಇತ್ತೀಚಿಗಷ್ಟೆ ಡ್ರಗ್ಸ್ ಪ್ರಕರಣ ಸಂಬಂಧ ಇಡಿ ಅಧಿಕಾರಿಗಳ ವಿಚಾರಣೆ ಎದುರಿಸಿದ್ದಾರೆ. 2017ರಲ್ಲಿ ಡ್ರಗ್ಸ್ ಪ್ರಕರಣ ಸಂಬಂಧ ಪುರಿ ಜಗನ್ನಾಥ್ ಇಡಿ ಅಧಿಕಾರಿಗಳ ಮುಂದೆ ಹಾಜರಾಗಿದ್ದರು. ಟಾಲಿವುಡ್ ಅನ್ನೇ ತಲ್ಲಣಗೊಳಿಸಿದ್ದ ಡ್ರಗ್ಸ್ ಪ್ರಕರಣದಲ್ಲಿ ಖ್ಯಾತ ನಿರ್ದೇಶಕ ಪುರಿ ಜಗನ್ನಾಥ್ ಹೆಸರು ಸಹ ಕೇಳಿಬಂದಿತ್ತು. ಇದೀಗ ಮತ್ತೆ ವಿಚಾರಣೆ ನಡೆಯುತ್ತಿದ್ದು, ಲೈಗರ್ ನಿರ್ದೇಶಕರು ಸಹ ವಿಚಾರಣೆಗೆ ಹಾಜರಾಗಿದ್ದರು. ವಿಚಾರಣೆ ಬಳಿಕ ವಿಜಯ್ ದೇವರಕೊಂಡ ಜೊತೆ ಲೈಗರ್ ಸಿನಿಮಾದ ಚಿತ್ರೀಕರಣ ಪ್ರಾರಂಭ ಮಾಡಿದ್ದಾರೆ.

  ಅಂದಹಾಗೆ ಲೈಗರ್ ಸಿನಿಮಾದಲ್ಲಿ ಬಾಲಿವುಡ್ ಖ್ಯಾತ ನಟಿ ಅನನ್ಯಾ ಪಾಂಡೆ ಕಾಣಿಸಿಕೊಂಡಿದ್ದಾರೆ. ಮೊದಲ ಬಾರಿಗೆ ಅನನ್ಯಾ ಪಾಂಡೆ ದಕ್ಷಿಣ ಭಾರತೀಯ ಸಿನಿಮಾರಂಗದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಅಂದಹಾಗೆ ಲೈಗರ್ ಸಿನಿಮಾಗೆ ಬಾಲಿವುಡ್ ನ ಖ್ಯಾತ ನಿರ್ಮಾಪಕ ಕರಣ್ ಜೋಹರ್ ಬಂಡವಾಳ ಹೂಡಿದ್ದಾರೆ.

  ಇತ್ತೀಚಿಗಷ್ಟೆ ವಿಜಯ್ ದೇವರಕೊಂಡ ಡಬ್ಬಿಂಗ್ ಮಾಡುತ್ತಿರುವ ಫೋಟೋವನ್ನು ಹಂಚಿಕೊಂಡಿದ್ದರು. ಫೋಟೋದಲ್ಲಿ ವಿಜಯ್ ಸಖತ್ ಸ್ಟೈಲಿಶ್ ಆಗಿ ಕಾಣಿಸಿಕೊಂಡಿದ್ದರು. ಒಂದು ಕೈಯಲ್ಲಿ ಸ್ಕ್ರಿಪ್ಟ್ ಮತ್ತೊಂದು ಕೈಯಲ್ಲಿ ಕಾಫಿ ಮಗ್ ಹಿಡಿದುಕೊಂಡಿದ್ದರು. ಅಂದಹಾಗೆ ಬಹುನಿರೀಕ್ಷೆಯ ಲೈಗರ್ ಸಿನಿಮಾ ಮುಂದಿನ ವರ್ಷ ತೆರೆಗೆ ಬರುವ ಸಾಧ್ಯತೆ ಇದೆ. ಸಿನಿಮಾತಂಡದ ಲೆಕ್ಕಾಚಾರದ ಪ್ರಕಾರ ಸೆಪ್ಟಂಬರ್ 9ರಂದು ತೆರೆಗೆ ಬರಬೇಕಿತ್ತು. ಆದರೆ ಕೊರೊನಾ ಕಾರಣದಿಂದ ಸಿನಿಮಾತಂಡದ ಲೆಕ್ಕಾಚಾರ ಉಲ್ಟಪಲ್ಟವಾಗಿದೆ. ಹೊಸ ದಿನಾಂಕ ಯಾವುದು ಎಂದು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.

  English summary
  Tollywood star Vijay Devarakonda resume Liger shoot, He shares photo.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X