'ಅಮೃತವರ್ಷಿಣಿ' ಶರತ್ ಬಾಬು ಆರೋಗ್ಯದಲ್ಲಿ ಏರುಪೇರು
ಬಹುಭಾಷಾ ನಟ ಶರತ್ ಬಾಬು ಮತ್ತೊಮ್ಮೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಕುಟುಂಬಸ್ಥರು ಹೈದರಾಬಾದ್ ಎಐಜಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಸದ್ಯ ಅವರ ಆರೋಗ್ಯ ಸ್ಥಿರವಾಗಿದ್ದು ಯಾರು ಆತಂಕಪಡುವ ಆಗತ್ಯ ಇಲ್ಲ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ. ಕನ್ನಡ, ತೆಲುಗು, ತಮಿಳು, ಮಲಯಾಳಂ ಭಾಷೆಯ ಸಿನಿಮಾಗಳಲ್ಲಿ ಶರತ್ ಬಾಬು ನಟಿಸಿದ್ದಾರೆ.
ಶರತ್ ಬಾಬು ಅವರಿಗೆ 71 ವರ್ಷ ವಯಸ್ಸಾಗಿದ್ದು ವಯೋಸಹಜ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಕೆಲವು ದಿನಗಳ ಹಿಂದೆ ಅವರ ಆರೋಗ್ಯದಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಇದೀಗ ಮತ್ತೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೆಲ ಸಿನಿಮಾಗಳಲ್ಲಿ ಲೀಡ್ ರೋಲ್‌ನಲ್ಲೂ ನಟಿಸಿರುವ ಶರತ್ ಬಾಬು ನಂತರ ಪೋಷಕ ಪಾತ್ರಗಳಲ್ಲಿ ಹೆಚ್ಚು ಕಾಣಿಸಿಕೊಂಡಿದ್ದರು. ನೂರಾರು ಸಿನಿಮಾಗಳಲ್ಲಿ ಕಿರುತೆರೆ ಧಾರಾವಾಹಿಗಳಲ್ಲಿ ಬಣ್ಣ ಹಚ್ಚಿದ್ಧಾರೆ.

ಆಸ್ಪತ್ರೆಗೆ ಕರೆದೊಯ್ದ ಸಮಯದಲ್ಲಿ ಶರತ್ ಬಾಬು ಉಸಿರಾಡಲು ತೊಂದರೆ ಅನುಭವಿಸುತ್ತಿದ್ದರು. ಹಾಗಾಗಿ ಐಸಿಯುನಲ್ಲಿ ಚಿಕಿತ್ಸೆ ನಡೀಲಾಗಿತ್ತು. ಆದರೆ ಈಗ ಚೇತರಿಸಿಕೊಂಡಿದ್ದು ನಾರ್ಮಲ್ ವಾರ್ಡ್‌ಗೆ ಶಿಫ್ಟ್ ಮಾಡಿರುವುದಾಗಿ ವೈದ್ಯರು ಹೇಳಿದ್ದಾರೆ. ಕೊನೆಯದಾಗಿ ಪವನ್ ಕಲ್ಯಾಣ್ ಅಭಿನಯದ 'ವಕೀಲ್ ಸಾಬ್' ಸಿನಿಮಾದಲ್ಲಿ ಅವರು ಕಾಣಿಸಿಕೊಂಡರು. 'ತುಳಸಿದಳ' ಚಿತ್ರದ ಮೂಲಕ ಕನ್ನಡಕ್ಕೆ ಬಂದ ಶರತ್ ಬಾಬು ಮುಂದೆ 'ರಣಚಂಡಿ', 'ಶಕ್ತಿ', 'ಅಮೃತವರ್ಷಿಣಿ' ಸೇರಿದಂತೆ ಹಲವು ಸಿನಿಮಾಗಳಲ್ಲಿ ಬಣ್ಣ ಹಚ್ಚಿದ್ದಾರೆ. 'ಆರ್ಯನ್' ಕನ್ನಡದಲ್ಲಿ ಅವರ ಕೊನೆ ಸಿನಿಮಾ.


Click it and Unblock the Notifications











