ವಿಜಯ್ ದೇವರಕೊಂಡ ಮತ್ತು ಅನನ್ಯಾ ಪಾಂಡೆ ಸಿನಿಮಾದ ಟೈಟಲ್ ಮತ್ತು ಫಸ್ಟ್ ಲುಕ್ ಔಟ್

ಟಾಲಿವುಡ್ ನ ಸೆನ್ಸೇಷನ್ ನಟ ವಿಜಯ್ ದೇವರಕೊಂಡ ಸದ್ಯ ನಿರ್ದೇಶಕ ಪುರಿ ಜಗನ್ನಾಥ್ ಸಾರಥ್ಯದಲ್ಲಿ ಮೂಡಿಬರುತ್ತಿರುವ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈಗಾಗಲೇ ಬಹುತೇಕ ಚಿತ್ರೀಕರಣ ಮುಗಿಸಿರುವ ಸಿನಿಮಾತಂಡ ಚಿತ್ರಕ್ಕೆ ಟೈಟಲ್ ಫೈನಲ್ ಮಾಡಿರಲಿಲ್ಲ.

ಫೈಟರ್ ಎಂದು ತಾತ್ಕಾಲಿಕವಾಗಿ ಹೆಸರಿಡಲಾಗಿತ್ತು. ಆದರೀಗ ಸಿನಿಮಾಗೆ ಟೈಟಲ್ ಫೈನಲ್ ಆಗಿದ್ದು, ಫಸ್ಟ್ ಲುಕ್ ಸಹ ರಿಲೀಸ್ ಆಗಿದೆ. ಚಿತ್ರಕ್ಕೆ 'ಲೈಗರ್' ಎಂದು ಹೆಸರಿಡಲಾಗಿದೆ. ಫಸ್ಟ್ ಲುಕ್ ನಲ್ಲಿ ವಿಜಯ್ ದೇವರಕೊಂಡ ಬಾಕ್ಸರ್ ಆಗಿ ಕಾಣಿಸಿಕೊಂಡಿದ್ದಾರೆ. ಟೈಟಲ್ ಕೆಳಗೆ 'ಕ್ರಾಸ್ ಬೀಡ್' ಎಂದು ಟ್ಯಾಗ್ ಲೈನ್ ಇದೆ.

ಚಿತ್ರದಲ್ಲಿ ವಿಜಯ್ ದೇವರಕೊಂಡಗೆ ನಾಯಕಿಯಾಗಿ ಅನನ್ಯಾ ಪಾಂಡೆ ಕಾಣಿಸಿಕೊಳ್ಳುತ್ತಿದ್ದಾರೆ. ಮೊದಲ ಬಾರಿಗೆ ಅನನ್ಯಾ ದಕ್ಷಿಣ ಭಾರತದ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಲೈಗರ್ ಪ್ಯಾನ್ ಇಂಡಿಯಾ ಸಿನಿಮಾವಾಗಿದ್ದು, ದಕ್ಷಿಣ ಭಾರತದ ಎಲ್ಲಾ ಭಾಷೆಯ ಜೊತೆಗೆ ಹಿಂದಿಯಲ್ಲೂ ತೆರೆಗೆ ಬರುತ್ತಿದೆ. ಈ ಮೂಲಕ ವಿಜಯ್ ದೇವರಕೊಂಡ ಪ್ಯಾನ್ ಇಂಡಿಯಾ ನಾಯಕನಾಗಿ ಗುರುತಿಸಿಕೊಳ್ಳುತ್ತಿದ್ದಾರೆ.

Vijay Devarakonda starrer Liger movie first look release

ಹೃತಿಕ್ ರೋಷನ್ ನಟನೆಯ ಫೈಟರ್ ಸಿನಿಮಾ ಅನೌನ್ಸ್ ಮಾಡಿದ ಬಳಿಕ ಟೈಟಲ್ ಬದಲಾಯಿಸಲಾಗಿದೆ ಎನ್ನಲಾಗಿದೆ. ಹೃತಿಕ್ ರೋಷನ್ ಮತ್ತು ದೀಪಿಕಾ ಪಡುಕೋಣೆ ಸಿನಿಮಾಗೆ ಫೈಟರ್ ಎಂದು ಹೆಸರಿಡಲಾಗಿದೆ. ಲೈಗರ್ ಮೂಲಕ ವಿಜಯ್ ದೇವರಕೊಂಡ ಬಾಲಿವುಡ್ ಗೆ ಎಂಟ್ರಿ ಕೊಡುತ್ತಿದ್ದಾರೆ.

Recommended Video

KGF ಮೀರಿಸಲಿದೆ ಸಲಾರ್ | Filmibeat Kannada

ವಿಜಯ್ ದೇವರಕೊಂಡ ಮೊದಲ ಪ್ಯಾನ್ ಇಂಡಿಯಾ ಸಿನಿಮಾ ಹೇಗಿರಲಿದೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿದೆ.

More from Filmibeat

English summary
Tollywood Actor Vijay Devarakonda starrer Liger movie first look release.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X