twitter
    For Quick Alerts
    ALLOW NOTIFICATIONS  
    For Daily Alerts

    ಕಾಂಗ್ರೆಸ್ ಗೆ ಕೈ ಕೊಟ್ಟು ಬಿಜೆಪಿ ಸೇರುತ್ತಿರುವ ನಟಿ ವಿಜಯಶಾಂತಿ

    By ಫಿಲ್ಮ್ ಡೆಸ್ಕ್
    |

    ತೆಲುಗಿನ ಖ್ಯಾತ ನಟಿ, ಕಾಂಗ್ರೆಸ್ ಪಕ್ಷದ ಸ್ಟಾರ್ ಪ್ರಚಾರಕಿ ಲೇಡಿ ಸೂಪರ್ ಸ್ಟಾರ್ ಅಂತನೇ ಖ್ಯಾತಿಗಳಿಸಿರುವ ವಿಜಯಶಾಂತಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಗೊಳ್ಳುತ್ತಿದ್ದಾರೆ. ಇತ್ತೀಚಿಗಷ್ಟೆ ಬಹುಭಾಷಾ ನಟಿ ಖುಷ್ಬೂ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದರು. ಇದರ ಬೆನ್ನಲ್ಲೇ ಮತ್ತೋರ್ವ ನಟಿ ಬಿಜೆಪಿ ಸೇರುತ್ತಿರುವುದು ಕುತೂಹಲ ಮೂಡಿಸಿದೆ.

    ಇಂದು ಸೋಮವಾರ (ಡಿ.07)ವಿಜಯಶಾಂತಿ ಅಧಿಕೃತವಾಗಿ ಬಿಜೆಪಿ ಸೇರಲು ಮುಹೂರ್ತ ನಿಗದಿಯಾಗಿದೆ ಎಂದು ಹೇಳಲಾಗುತ್ತಿದೆ. ವಿಜಯಶಾಂತಿ ಬಿಜೆಪಿ ಸೇರಿದ ಬಳಿಕ ಗೃಹ ಸಚಿವ ಅಮಿತಾ ಶಾ ಅವರನ್ನು ಭೇಟಿ ಮಾಡಲಿದ್ದಾರೆ. ಈಗಾಗಲೇ ತೆಲಂಗಾಣ ಬಿಜೆಪಿ ಮುಖ್ಯಸ್ಥ ಬಂಡಿ ಸಂಜಯ್ ಕುಮಾರ್ ಹೈದರಾಬಾದ್ ನಿಂದ ದೆಹಲಿಗೆ ತೆರಳಿದ್ದಾರೆ.

    ಕಾಂಗ್ರೆಸ್ ಗೆ ಕೈ ಕೊಟ್ಟು ಬಿಜೆಪಿ ಸೇರಿದ ನಟಿ ಖುಷ್ಬೂಕಾಂಗ್ರೆಸ್ ಗೆ ಕೈ ಕೊಟ್ಟು ಬಿಜೆಪಿ ಸೇರಿದ ನಟಿ ಖುಷ್ಬೂ

    ವಿಜಯಶಾಂತಿ ಸೇರ್ಪಡೆಯಿಂದ ಹೈದರಾಬಾದ್ ಪಾಲಿಕೆ ಚುನಾವಣೆ ಅಷ್ಟೇ ಅಲ್ಲದೆ ಮುಂಬರುವ ತಮಿಳುನಾಡು ಚುನಾವಣೆಯಲ್ಲೂ ಪಕ್ಷಕ್ಕೆ ಲಾಭವಾಗಲಿದೆ ಎನ್ನುವುದು ಬಿಜೆಪಿ ಲೆಕ್ಕಾಚಾರ. ನಟಿ ವಿಜಯಶಾಂತಿ 2014ರಲ್ಲಿ ಕಾಂಗ್ರೆಸ್ ಸೇರಿದ್ದರು.

    Vijayashanthi Resigned from Congress and will join BJP on Monday

    ಕಾಂಗ್ರೆಸ್ ಸೇರುವ ಮುನ್ನ ವಿಜಯಶಾಂತಿ ಟಿ ಆರ್ ಎಸ್ ನ ಮುಖ್ಯಸ್ಥ ಕೆ. ಚಂದ್ರಶೇಖರ್ ರಾವ್ ಅವರ ಬೆಂಬಲವಾಗಿ ನಿಂತಿದ್ದರು. 2018ರಿಂದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ವಿಜಯಶಾಂತಿ ಅವರನ್ನು ಸ್ಟಾರ್ ಪ್ರಚಾರಕಿಯಾಗಿ ನೇಮಕ ಮಾಡಿದ್ದರು.

    1997ರಲ್ಲಿ ಬಿಜೆಪಿ ಪರ ಇದ್ದ ವಿಜಯಶಾಂತಿ ಆಂಧ್ರಪ್ರದೇಶ ವಿಭಜನೆಯಾದ ಬಳಿಕ ತೆಲಂಗಾಣ ರಾಜ್ಯ ಉದಯವಾಗಿದ್ದನ್ನು ಸ್ವಾಗತಿಸಿ ತೆಲಂಗಾಣ ರಾಷ್ಟ್ರ ಸಮಿತಿ ಹಾಗೂ ಕೆಸಿಆರ್ ಪರ ಬೆಂಬಲ ವ್ಯಕ್ತಪಡಿಸಿದ್ದರು. 2009 ರಿಂದ 2014ರ ತನಕ ಮೇದಕ್ ಸಂಸದೆಯಾಗಿದ್ದರು. ಆದರೆ, ಮೇದಕ್ ನಿಂದ ವಿಧಾನಸಭೆಗೆ ಸ್ಪರ್ಧಿಸಿ, ಸೋಲು ಕಂಡಿದ್ದರು. ನಂತರ ಟಿ ಆರ್ ಎಸ್ ತೊರೆದು ಕಾಂಗ್ರೆಸ್ ಸೇರಿದ್ದರು.

    English summary
    Actress turned politician Vijayashanthi resigned from Congress and will join BJP on Monday.
    Monday, December 7, 2020, 9:39
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X