ಆಮೀರ್ ಖಾನ್ ಜೊತೆ 'ಮಹಾಭಾರತ' ಸಿನಿಮಾ: ವಿಜಯೇಂದ್ರ ಪ್ರಸಾದ್ ಹೇಳಿದ್ದೇನು?

ಚಿತ್ರಪ್ರಿಯರು ಮಹಾಭಾರತ ಸಿನಿಮಾಗಾಗಿ ಭಾರಿ ಕುತೂಹಲದಿಂದ ಕಾಯುತ್ತಿದ್ದಾರೆ. ಸಿನಿಮಾ. ನಿರ್ದೇಶಕ ರಾಜಮೌಳಿ ಮಹಾಭಾರತ ಸಿನಿಮಾ ಮಾಡುತ್ತಾರೆ ಎಂದು ವರ್ಷಗಳಿಂದ ಹೇಳಲಾಗುತ್ತಿದೆ. ಆದರೆ ಈ ಬಗ್ಗೆ ಇನ್ನೂ ಅಧಿಕೃತವಾಗಿ ಬಹಿರಂಗವಾಗಿಲ್ಲ. ರಾಜಮೌಳಿ ಸದ್ಯ ಆರ್ ಆರ್ ಆರ್ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಈ ಸಿನಿಮಾದ ನಂತರ ಮಹೇಶ್ ಬಾಬು ಜೊತೆ ಸಿನಿಮಾ ಮಾಡಲು ಸಜ್ಜಾಗಿದ್ದಾರೆ. ಅಂದ್ಮೇಲೆ ಮಹಾಭಾರತ ಸಿನಿಮಾ ಸದ್ಯಕ್ಕೆ ಸೆಟ್ಟೇರುವ ಸಾಧ್ಯತೆ ಇಲ್ಲ.

Recommended Video

Case filed against 8 people including Karan Johar, Sanjay Leela Bhansali, Salman Khan | Filmibeat

ಇದರ ಬೆನ್ನಲೆ ಈಗ ಬಾಲಿವುಡ್ ನಟ ಆಮೀರ್ ಖಾನ್ ಮಹಾಭಾರತ ಸಿನಿಮಾ ಮಾಡುತ್ತಾರೆ ಎನ್ನುವ ಮಾತು ಕೇಳಿ ಬರುತ್ತಿದೆ. ಅಲ್ಲದೆ ಈಗಾಗಲೆ ಮಹಾಭಾರತ ಸಿನಿಮಾದ ಬಗ್ಗೆ ಮಾತುಕತೆ ಪ್ರಾರಂಭವಾಗಿದ್ದು, ಬಾಹುಬಲಿ ರಚನೆಕಾರ ವಿಜಯೇಂದ್ರ ಪ್ರಸಾದ್ ಸ್ಕ್ರಿಪ್ಟ್ ಕೆಲಸ ಪ್ರಾರಂಭಿಸಿದ್ದಾರೆ ಎನ್ನುವ ಸುದ್ದಿ ವೈರಲ್ ಆಗಿತ್ತು. ಆದರೀಗ ಈ ಬಗ್ಗೆ ವಿಜಯೇಂದ್ರ ಪ್ರಸಾದ್ ಪ್ರತಿಕ್ರಿಯೆ ನೀಡಿದ್ದಾರೆ.

ವೆಬ್ ಪೋರ್ಟಲ್ ವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ವಿಜಯೇಂದ್ರ ಪ್ರಸಾದ್, ಆಮೀರ್ ಖಾನ್ ಜೊತೆ ಯಾವುದೆ ಮಾತುಕತೆ ನಡೆದಿಲ್ಲ. ಇದೆಲ್ಲ ಸುಳ್ಳು ಸುದ್ದಿ. ಮಹಾಭಾರತ ಸಂಬಂಧಿ ಯಾವುದೆ ಕೆಲಸಗಳು ನಡೆಯುತ್ತಿಲ್ಲ. ಸಂವಹನಕ್ಕೆ ಭಾಷೆ ಅಡ್ಡಿಯಾಗುತ್ತಿದೆ. ಎಲ್ಲವನ್ನೂ ಫೋನ್ ನಲ್ಲಿ ಚರ್ಚೆ ಮಾಡಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ.

Vijayendra Prasad Revealed Not Talk With Aamir Khan About Mahabharata

ಇತ್ತ ರಾಜಮೌಳಿ ಸಹ ಮಹಾಭಾರತ ಸಿನಿಮಾ ಮಾಡುತ್ತಾರೆ. ಪುತ್ರನ ಸಿನಿಮಾಗೆ ವಿಜಯೇಂದ್ರ ಪ್ರಸಾದ್ ಕಥೆ ಬರೆಯುತ್ತಿದ್ದಾರೆ. ಹಾಗಾಗಿ ಆಮೀರ್ ಖಾನ್ ಸಿನಿಮಾವನ್ನು ನಿರಾಕರಿಸಿದ್ದಾರೆ ಎನ್ನುವ ಮಾತು ಕೇಳಿಬರುತ್ತಿದೆ.

More from Filmibeat

English summary
Baahubali writer Vijayendra Prasad revealed not talk with Aamir khan about Mahabharata.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X