ಒಂದು ಸಿನಿಮಾ ಸೂಪರ್ ಹಿಟ್ ಆಯಿತು ಅಂದರೆ ಆ ಸಿನಿಮಾವನ್ನು ಬೇರೆ ಭಾಷೆಗಳಿಗೆ ರಿಮೇಕ್ ಮಾಡುವುದು ಸಹಜ. ಅದರಲ್ಲೂ ದಕ್ಷಿಣ ಭಾರತದ ಅನೇಕ ಸಿನಿಮಾಗಳು ಭಾರತಾದ್ಯಂತ ಹೆಚ್ಚು ಸದ್ದು ಮಾಡುತ್ತಿರುತ್ತವೆ. 90ರ ದಶಕದಲ್ಲಿ ಕನ್ನಡ ಚಿತ್ರರಂಗ ರಿಮೇಕ್‌ಗೆ ಹೆಚ್ಚು ಒತ್ತು ನೀಡಿತ್ತು. ಆದರೆ, ಇತ್ತೀಚೆಗಿನ ದಿನಗಳಲ್ಲಿ ರಿಮೇಕ್ ಪ್ರಮಾಣ ಕಡಿಮೆಯಾಗಿದೆ. ಈಗ ಕನ್ನಡ ಸಿನಿಮಾಗಳು ಬೇರೆ-ಬೇರೆ ಭಾಷೆಗಳಿಗೆ ರಿಮೇಕ್ ಆಗುತ್ತಿವೆ. ಇಲ್ಲಿ ಬಾಲಿವುಡ್‌ಗೆ ರಿಮೇಕ್ ಆದ ಆರು ಕನ್ನಡ ಸಿನಿಮಾಗಳ ಪಟ್ಟಿಯನ್ನು ನೀಡಲಾಗಿದೆ.