ಚಲನಚಿತ್ರಗಳ ಒಳನೋಟ
ಬಿಗ್ ಬಾಸ್ ಕನ್ನಡ ಸೀಸನ್ 10 ಸೆಪ್ಟಂಬರ್ ತಿಂಗಳಲ್ಲಿ ಆರಂಭವಾಗಲಿದ್ದು, ಈವರೆಗೆ ೯ ಸೀಸನ್‌ಗಳು ಪ್ರಸಾರವಾಗಿವೆ. ಈ ರಿಯಾಲಿಟಿ ಶೋನಲ್ಲಿ ಭಾಗವಹಿಸಿದ್ದ ಮಾಜಿ ಸ್ಪರ್ಧಿಗಳ ಪೈಕಿ ಕೆಲವರು ನಟನೆ ಜೊತೆಗೆ ಜೀವನೋಪಾಯಕ್ಕಾಗಿ ಸ್ವಂತ ಉದ್ಯೋಗ ನಡೆಸುತ್ತಿದ್ದಾರೆ. ಇನ್ನೂ ಕೆಲವರು ನಟನೆಗಿಂತ ಉದ್ಯೋಗಕ್ಕೆ ಹೆಚ್ಚಿನ ಒತ್ತು ನೀಡುತ್ತಿದ್ದಾರೆ. ಹಾಗಾದರೆ, ಯಾವ್ಯಾವ ಬಿಗ್ ಬಾಸ್ ಸ್ಪರ್ಧಿಗಳು ಯಾವ ಬಿಸಿನೆಸ್ ಮಾಡುತ್ತಿದ್ದಾರೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.