ಚಲನಚಿತ್ರಗಳ ಒಳನೋಟ
ಕೊಡಗಿನ ಕುವರಿ ರಶ್ಮಿಕಾ ಮಂದಣ್ಣ ಸದ್ಯ ಟಾಲಿವುಡ್, ಬಾಲಿವುಡ್,ಕಾಲಿವುಡ್ ಸೇರಿದಂತೆ ಸಾಲು-ಸಾಲು ಸಿನಿಮಾ ಮಾಡುತ್ತಾ ಬ್ಯುಸಿಯಾಗಿದ್ದಾರೆ. ರಕ್ಷಿತ್ ಶೆಟ್ಟಿ ಅಭಿನಯದ ಕಿರಿಕ್ ಪಾರ್ಟಿ ಸಿನಿಮಾ ಮೂಲಕ ಚಿತ್ರರಂಗ ಪ್ರವೇಶಿಸಿದ ರಶ್ಮಿಕಾ ಇಂದು ನ್ಯಾಷನಲ್ ಕ್ರಶ್ ಆಗಿದ್ದಾರೆ. ಕಿರಿಕ್ ಪಾರ್ಟಿ ಚಿತ್ರದಲ್ಲಿನ ಸಾನ್ವಿ ಪಾತ್ರ ಇವರಿಗೆ ತುಂಬಾ ಪ್ರಸಿದ್ಧಿ ತಂದುಕೊಟ್ಟಿತ್ತು. ಬಳಿಕ ಕೆಲ ಕನ್ನಡ ಸಿನಿಮಾಗಳಲ್ಲಿ ನಟಿಸಿದ ರಶ್ಮಿಕಾ, ನಂತರ ಟಾಲಿವುಡ್‌ಗೆ ಪದಾರ್ಪಣೆ ಮಾಡಿದರು, ಮತ್ತೆ ಕನ್ನಡ ಚಿತ್ರರಂಗಕ್ಕೆ ಮರಳಿಲ್ಲ. ರಶ್ಮಿಕಾ ಅಭಿಯದ ಕನ್ನಡ ಸಿನಿಮಾಗಳ ಪಟ್ಟಿ ಇಲ್ಲಿದೆ.