ಸಾಮಾನ್ಯವಾಗಿ ಹಬ್ಬದ ಸಂದರ್ಭದಲ್ಲಿ ಬಿಗ್ ಬಜೆಟ್ ಸಿನಿಮಾಗಳನ್ನು ಬಿಡುಗಡೆ ಮಾಡಲಾಗುತ್ತೆ. ಯಾಕೆಂದರೆ ಹಬ್ಬದ ಸಮಯದಲ್ಲಿ ರಜೆ ಇರುವುದರಿಂದ ಹೆಚ್ಚಿನ ಜನರು ಥಿಯೇಟರ್‌ಗೆ ಬರುತ್ತಾರೆ. ಸಂಕ್ರಾಂತಿ ಹಬ್ಬಕ್ಕೆ ತಮಿಳು ಹಾಗೂ ತೆಲುಗಿನಲ್ಲಿ ಸ್ಟಾರ್ ನಟರ ಚಿತ್ರಗಳು ರಿಲೀಸ್ ಆಗುತ್ತವೆ. ಅದರಂತೆ ರಾಮ್ ಚರಣ್ ಅಭಿನಯದ ಗೇಮ್ ಚೇಂಜರ್ ಬಿಡುಗಡೆಗೆ ಸಜ್ಜಾಗಿದೆ. ಸಿನಿಮಾದಲ್ಲಿ ದೊಡ್ಡ ತಾರಾಬಳಗವಿದ್ದು, ಈ ಚಿತ್ರದ ಮೇಲಿನ ನಿರೀಕ್ಷೆಗಳು ಹೆಚ್ಚಾಗಿವೆ. ಇಲ್ಲಿ ಗೇಮ್ ಚೇಂಜರ್ ಸಿನಿಮಾದಲ್ಲಿ ನಟಿಸಲು ಯಾವ್ಯಾವ ಕಲಾವಿದರು ಎಷ್ಟೆಷ್ಟು ಸಂಭಾವನೆ ಪಡೆದಿದ್ದಾರೆ ಎಂಬ ಮಾಹಿತಿಯನ್ನು ನೀಡಲಾಗಿದೆ.