twitter
    X
    Home ಚಲನಚಿತ್ರಗಳ ಒಳನೋಟ

    2023ರಲ್ಲಿ ಬಿಡುಗಡೆಯಾಗಲಿರುವ ಬಹುನಿರೀಕ್ಷಿತ 14 ಕನ್ನಡ ಸಿನಿಮಾಗಳ ಪಟ್ಟಿ ಇಲ್ಲಿದೆ.

    Author Sowmya Bairappa | Published: Thursday, December 29, 2022, 12:55 PM [IST]

    ಇತ್ತೀಚಿನ ದಿನಗಳಲ್ಲಿ ಕನ್ನಡ ಚಿತ್ರರಂಗದಲ್ಲಿ ನಿರ್ಮಾಣ ಆಗುತ್ತಿರುವ ಸಿನಿಮಾಗಳು ಉತ್ತಮ, ಗಟ್ಟಿತನದ ಕಥೆ, ಅದ್ಧೂರಿ ಮೇಕಿಂಗ್ ಜೊತೆಗೆ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿವೆ. ದೇಶ ವಿದೇಶಗಳಲ್ಲಿಯೂ ಮೆಚ್ಚುಗೆ ಪಡೆಯುತ್ತಿವೆ. ಹೀಗಾಗಿ ಕನ್ನಡ ಸಿನಿಮಾಗಳ ಮೇಲೆ ನಿರೀಕ್ಷೆಗಳು ಹೆಚ್ಚುತ್ತಿವೆ. 2022 ಕನ್ನಡ ಚಿತ್ರರಂಗದಲ್ಲಿ ಹಿಂದೆಂದೂ ನೋಡಿರದಷ್ಟು ದೊಡ್ಡ ಸಿನಿಮಾಗಳನ್ನು ನೀಡಿದೆ. ಕನ್ನಡದ ಪ್ಯಾನ್ ಇಂಡಿಯಾ ಸಿನಿಮಾಗಳು ಬಾಕ್ಸಾಫೀಸ್‌ನಲ್ಲಿ ಇಡೀ ವಿಶ್ವವೇ ತಿರುಗಿ ನೋಡುವಂತೆ ಮಾಡಿದೆ. ಕೆಜಿಎಫ್ 2, ಕಾಂತಾರ, 777 ಚಾರ್ಲಿ, ಜೇಮ್ಸ್ ಹಾಗೂ ವಿಕ್ರಾಂತ್ ರೋಣದಂತಹ ಸಿನಿಮಾಗಳು ಗಳಿಕೆಯಲ್ಲಿ ಟಾಪ್‌ನಲ್ಲಿವೆ. ಬಾಲಿವುಡ್‌, ಟಾಲಿವುಡ್‌, ಕಾಲಿವುಡ್ ಚಿತ್ರರಂಗವನ್ನೇ ಮೀರಿಸಿದೆ. ಹೀಗಾಗಿ ಮುಂಬರುವ ಕನ್ನಡ ಸಿನಿಮಾಗಳ ಬಗ್ಗೆ ನೀರಿಕ್ಷೆಯೂ ಹೆಚ್ಚುತ್ತಿದೆ. 2023ರಲ್ಲಿ ಬಿಡುಗಡೆಯಾಗಲಿರುವ ಬಹುನಿರೀಕ್ಷಿತ 13 ಕನ್ನಡ ಸಿನಿಮಾಗಳ ಪಟ್ಟಿ ಕೆಳಕಂಡಂತಿದೆ.

    cover image
    ಕ್ರಾಂತಿ

    ಕ್ರಾಂತಿ

    1

    ಯಜಮಾನ ಚಿತ್ರದ ನಂತರ ಬಿ ಸುರೇಶ್ ಮತ್ತು ಶೈಲಜಾ ನಾಗ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ನಿರ್ಮಾಣ ಮಾಡುತ್ತಿರುವ ಚಿತ್ರ ಕ್ರಾಂತಿ. ದರ್ಶನ್ ಅವರ ಈ 55ನೇ ಚಿತ್ರವನ್ನು ವಿ ಹರಿಕೃಷ್ಣ ನಿರ್ದೇಶನ ಮಾಡುತ್ತಿದ್ದಾರೆ. ಸಿನಿಮಾದ ನಾಯಕಿಯಾಗಿ ರಚಿತಾ ರಾಮ್ ಕಾಣಿಸಿಕೊಂಡಿದ್ದಾರೆ. ಈ ಚಿತ್ರ ಕನ್ನಡ ಸೇರಿದಂತೆ ತೆಲುಗು, ತಮಿಳು, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲಿ ಮೂಡಿಬರುತ್ತಿದೆ. 

    ರಾಘವೇಂದ್ರ ಸ್ಟೋರ್ಸ್

    ರಾಘವೇಂದ್ರ ಸ್ಟೋರ್ಸ್

    2

    ಹೊಂಬಾಳೆ ಫಿಲ್ಮ್ಸ್‌ ನಿರ್ಮಾಣದ 12ನೇ ಸಿನಿಮಾ ರಾಘವೇಂದ್ರ ಸ್ಟೋರ್ಸ್. ಈ ಸಿನಿಮಾದಲ್ಲಿ ನವರಸ ನಾಯಕ ಜಗ್ಗೇಶ್ ನಾಯಕನಾಗಿ ನಟಿಸುತ್ತಿದ್ದಾರೆ. ರಾಜಕುಮಾರ, ಯುವರತ್ನ ಸಿನಿಮಾಗಳ ಖ್ಯಾತಿಯ ಸಂತೋಷ್ ಆನಂದ್‌ರಾಮ್ ಈ ಸಿನಿಮಾವನ್ನು ನಿರ್ದೇಶನ ಮಾಡುತ್ತಿದ್ದಾರೆ. ಸಾಮಾಜಿಕ ಸಂದೇಶವಿರುವ ಹಾಸ್ಯ ರಾಜಕೀಯಗಳನ್ನು ಒಳಗೊಂಡ ಹೊಸತನದ ಸಿನಿಮಾ ಇದಾಗಿದೆ.  

     

    ಮಾರ್ಟಿನ್

    ಮಾರ್ಟಿನ್

    3

    ಅದ್ಧೂರಿ ಚಿತ್ರದ ಎಂಟು ವರ್ಷಗಳ ನಂತರ ಧ್ರುವ ಸರ್ಜಾ ಮತ್ತು ಎ.ಪಿ.ಅರ್ಜುನ್ ಒಂದಾಗುತ್ತಿದ್ದಾರೆ. 'ಮಾರ್ಟಿನ್' ಧ್ರುವ ಸರ್ಜಾರ ಆರನೇ ಚಿತ್ರವಾಗಿದೆ. ಈ ಚಿತ್ರಕ್ಕೆ ಉದಯ್ ಕೆ ಮೆಹತಾ ಬಂಡವಾಳ ಹೂಡಿದ್ದಾರೆ. ಈ ಚಿತ್ರ ಕನ್ನಡ ಸೇರಿದಂತೆ ತೆಲುಗು, ತಮಿಳು, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲಿ ಬಿಡುಗಡೆಯಾಗಲಿದೆ.  

     

    ಬಾನ ದಾರಿಯಲ್ಲಿ

    ಬಾನ ದಾರಿಯಲ್ಲಿ

    4

    ಪ್ರೀತಮ್ ಗುಬ್ಬಿ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ರೋಮ್ಯಾಂಟಿಕ್ ಡ್ರಾಮಾ `ಬಾನ ದಾರಿಯಲ್ಲಿ' ಚಿತ್ರದಲ್ಲಿ ಗೋಲ್ಡನ್ ಗಣೇಶ್ ಮುಖ್ಯ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಚಿತ್ರಕ್ಕೆ ವಿ ಹರಿಕೃಷ್ಣ ಸಂಗೀತ ಮತ್ತು ದೀಪು ಎಸ್ ಕುಮಾರ್ ಸಂಕಲನವಿದೆ. ಚಿತ್ರಕ್ಕೆ ನಾಯಕಿಯರಾಗಿ `ರುಕ್ಮಿಣಿ ವಸಂತ್' ಮತ್ತು `ರೀಷ್ಮಾ ನಾಣಯ್ಯ' ನಟಿಸುತ್ತಿದ್ದಾರೆ. 

    ಸಪ್ತ ಸಾಗರದಾಚೆ ಎಲ್ಲೋ

    ಸಪ್ತ ಸಾಗರದಾಚೆ ಎಲ್ಲೋ

    5

    ಪುಷ್ಕರ್ ಮಲ್ಲಿಕಾರ್ಜುನಯ್ಯ ನಿರ್ಮಾಣದಲ್ಲಿ ಮೂಡಿ ಬರುತ್ತಿರುವ 'ಸಪ್ತ ಸಾಗರದಾಚೆ ಎಲ್ಲೋ' ಚಿತ್ರದಲ್ಲಿ ರಕ್ಷಿತ್ ಶೆಟ್ಟಿ ನಾಯಕನಾಗಿ ನಟಿಸುತ್ತಿದ್ದಾರೆ.. ಹೇಮಂತ್ ರಾವ್ ಈ ಸಿನಿಮಾವನ್ನು ನಿರ್ದೇಶನ ಮಾಡಿದ್ದಾರೆ. ಬೀರಬಲ್ ಚಿತ್ರದ ಖ್ಯಾತಿಯಾ ರುಕ್ಮಿಣಿ ವಸಂತ್ ನಾಯಕಿಯಾಗಿ ನಟಿಸಿದ್ದಾರೆ. 777 ಚಾರ್ಲಿ ಬಳಿಕ ರಕ್ಷಿತ್ ಶೆಟ್ಟಿ ಅಭಿನಯದ ಈ ಸಿನಿಮಾದ ಮೇಲೆ ನಿರೀಕ್ಷೆಗಳು ಹೆಚ್ಚಿವೆ.  

    ಪೆಪೆ

    ಪೆಪೆ

    6

    ವಿನಯ್ ರಾಜ್ ಕುಮಾರ್ ನಾಯಕನಾಗಿ ಅಭಿನಯಿಸುತ್ತಿರುವ ಏಳನೇ ಚಿತ್ರ ಪೆಪೆ. ಶ್ರೀಲೇಶ್ ಎಸ್ ನಾಯರ್ ನಿರ್ದೇಶನ ಮಾಡುತ್ತಿರುವ ಈ ಚಿತ್ರಕ್ಕೆ ಉದಯ ಶಂಕರ್ ಎಸ್ ಮತ್ತು ನಿಜಗುಣ ಗುರುಸ್ವಾಮಿ ಬಂಡವಾಳ ಹೂಡುತ್ತಿದ್ದಾರೆ. 970 ರಿಂದ 2020 ರವರೆಗಿನ ಟೈಮ್‌ಲೈನ್‌ ಕಥೆ ಇದಾಗಿದ್ದು, ಚಿತ್ರದಲ್ಲಿ ವಿನಯ್ ಅವರಲ್ಲದೆ, ಅರುಣಾ ಬಾಲರಾಜ್ ಮತ್ತು ಅನೇಕ ಹೊಸಬರು ನಟಿಸಿದ್ದಾರೆ. ಅವರಲ್ಲಿ ಕಿಟ್ಟಿ, ಸಂಧ್ಯಾ ಅರಕೆರೆ, ಶಿವು, ಮೇದಿನಿ, ಕೆಳಮನೆ ಮತ್ತು ಕಾಜಲ್ ಕುಂದರ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. 

    ಕಬ್ಜ

    ಕಬ್ಜ

    7

    ಆರ್ ಚಂದ್ರು ನಿರ್ದೇಶನದಲ್ಲಿ ಮೂಡಿಬರಲಿರುವ ಕಬ್ಜ ಚಿತ್ರದಲ್ಲಿ ರಿಯಲ್ ಸ್ಟಾರ್ ಉಪೇಂದ್ರ ನಾಯಕನಾಗಿ ನಟಿಸಲಿದ್ದಾರೆ. ಚಿತ್ರವನ್ನು ಕನ್ನಡ ಮಾತ್ರವಲ್ಲದೇ ತೆಲಗು, ತಮಿಳು, ಮಲಯಾಳಂ, ಮರಾಠಿ, ಬಂಗಾಲಿ ಮತ್ತು ಹಿಂದಿ ಸೇರಿದಂತೆ ಏಳು ಭಾಷೆಗಳಲ್ಲಿ ಬಿಡುಗಡೆ ಮಾಡುವುದಾಗಿ ಚಿತ್ರತಂಡ ಘೋಷಿಸಿದೆ. ಚಿತ್ರದಲ್ಲಿ ಉಪೇಂದ್ರ ಲಾಂಗ್ ಹಿಡಿದು ಮತ್ತೊಂದು ಭೂಗತ ಲೋಕದ ಕಥೆಯನ್ನು ಅನಾವರಣ ಮಾಡುವ ನಿರೀಕ್ಷೆಯಿದೆ. ಕಿಚ್ಚ ಸುದೀಪ್ ಭಾರ್ಗವ್ ಭಕ್ಷಿ ಪಾತ್ರದಲ್ಲಿ ನಟಿಸುತ್ತಿದ್ದಾರೆ. 

    ಶಿವಾಜಿ ಸುರತ್ಕಲ್ 2

    ಶಿವಾಜಿ ಸುರತ್ಕಲ್ 2

    8

    ಶಿವಾಜಿ ಸುರತ್ಕಲ್ ಭಾಗ ಎರಡರಲ್ಲಿ ರಮೇಶ್ ಅರವಿಂದ್ ಮತ್ತು ರಾಧಿಕಾ ಚೇತನ್ ಮುಖ್ಯ ಪಾತ್ರಗಳಲ್ಲಿ ನಟಿಸಿದ್ದಾರೆ. ಆಕಾಶ್ ಶ್ರೀವತ್ಸ್ ನಿರ್ದೇಶನದಲ್ಲಿ ಮೂಡಿಬಂದಿರುವ ಈ ಚಿತ್ರಕ್ಕೆ ರೇಖಾ ಕೆ.ಎನ್ ಮತ್ತು ಅನೂಪ್ ಗೌಡ ಬಂಡವಾಳ ಹೂಡಿದ್ದಾರೆ. 

    ಬ್ಯಾಡ್ ಮ್ಯಾನರ್ಸ್

    ಬ್ಯಾಡ್ ಮ್ಯಾನರ್ಸ್

    9

    ದುನಿಯಾ ಸೂರಿ ನಿರ್ದೇಶನದಲ್ಲಿ ಮೂಡಿ ಬಂದಿರುವ ಬ್ಯಾಡ್ ಮ್ಯಾನರ್ಸ್ ಚಿತ್ರದಲ್ಲಿ ಯಂಗ್ ರೆಬೆಲ್ ಸ್ಟಾರ್ ಅಭಿಷೇಕ್ ಅಂಬರೀಶ್ ನಾಯಕನಾಗಿ ನಟಿಸಿದ್ದಾರೆ. ಚಿತ್ರದಲ್ಲಿ ನಾಯಕಿಯರಾಗಿ ಪ್ರಿಯಾಂಕಾ ಕುಮಾರ್ ಮತ್ತು ರಚಿತಾ ರಾಮ್ ನಟಿಸಿದ್ದಾರೆ. ಚಿತ್ರಕ್ಕೆ ಕೆ.ಎಂ.ಸುಧೀರ್ ಬಂಡವಾಳ ಹೂಡಿದ್ದು,  ಚರಣರಾಜ್ ಸಂಗೀತ ನೀಡಿದ್ದಾರೆ. ದೀಪು ಎಸ್ ಕುಮಾರ್ ಸಂಕಲನ ಮತ್ತು ಶೇಖರ್ ಎಸ್ ಛಾಯಾಗ್ರಹಣವಿದೆ.

     

    ಹೊಯ್ಸಳ

    ಹೊಯ್ಸಳ

    10

    ಡಾಲಿ ಧನಂಜಯ್ ನಟನೆಯ 25ನೇ ಚಿತ್ರ ಹೊಯ್ಸಳ ಚಿತ್ರವನ್ನು ವಿಜಯ್ ಎನ್ ನಿರ್ದೇಶಿಸಿದ್ದಾರೆ. ಚಿತ್ರಕ್ಕೆ ಕಾರ್ತಿಕ್ ಗೌಡ ಮತ್ತು ಯೋಗಿ ಜಿ ರಾಜ್ ಬಂಡವಾಳ ಹೂಡಿದ್ದಾರೆ.  ಥಮನ್ ಸಂಗೀತ ನೀಡಿದ್ದಾರೆ.

    ರುದ್ರ ಪ್ರಯಾಗ

    ರುದ್ರ ಪ್ರಯಾಗ

    11

    ರಿಷಬ್ ಶೆಟ್ಟಿ ನಿರ್ದೇಶನ ಮಾಡಲಿರುವ ರುದ್ರ ಪ್ರಯಾಗ ಚಿತ್ರವನ್ನು  ಜಯಣ್ಣ ಮತ್ತು ಭೋಗೇಂದ್ರ ನಿರ್ಮಿಸಲಿದ್ದಾರೆ. ಚಿತ್ರದಲ್ಲಿ ಅನಂತನಾಗ್ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಇವರ ಜೊತೆಗೆ ಶ್ರದ್ಧಾ ಶ್ರೀನಾಥ್ ಮತ್ತು ಶೈನ್ ಶೆಟ್ಟಿ ನಟಿಸಲಿದ್ದಾರೆ. 

    ಘೋಸ್ಟ್

    ಘೋಸ್ಟ್

    12

    ಎಂ.ಜಿ. ಶ್ರೀನಿವಾಸ್ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಆ್ಯಕ್ಷನ್ ಥ್ರಿಲ್ಲರ್ ಚಿತ್ರ `ಘೋಸ್ಟ್' ನಲ್ಲಿ ಸೆಂಚುರಿ ಸ್ಟಾರ್ ಶಿವರಾಜಕುಮಾರ್ ನಾಯಕನಾಗಿ ನಟಿಸುತ್ತಿದ್ದಾರೆ. ಚಿತ್ರಕ್ಕೆ ಸಂದೇಶ್ ನಾಗರಾಜ್ ಬಂಡವಾಳ ಹೂಡಿದ್ದಾರೆ.

     

    U And I

    U And I

    13

    ಉಪ್ಪಿ 2 ಚಿತ್ರದ ನಂತರ U And I ಸಿನಿಮಾ ಮೂಲಕ ಮತ್ತೊಮ್ಮೆ ಉಪೇಂದ್ರ ನಿರ್ದೇಶಕನ ಕ್ಯಾಪ್ ತೊಡಲಿದ್ದಾರೆ. ಉಪೇಂದ್ರರವರು ಕಥೆ, ಚಿತ್ರಕಥೆ ಮತ್ತು ಸಂಭಾಷಣೆ ಬರೆದು ನಿರ್ದೇಶಿಸಿಲಿರುವ ಈ ಚಿತ್ರ ಪಾಲಿಟಿಕಲ್ ಥ್ರಿಲ್ಲರ್ ಆಗಿರಲಿದೆ.

    D56

    D56

    14

    ಚಾಲೆಂಜಿಂಗ್ ಸ್ಟಾರ್ ದರ್ಶನ್ ರವರ 56 ನೇ ಚಿತ್ರವನ್ನು ತರುಣ್ ಸುಧೀರ್ ನಿರ್ದೇಶನ ಮಾಡಲಿದ್ದಾರೆ. ಚಿತ್ರಕ್ಕೆ ರಾಕಲೈನ್ ವೆಂಕಟೇಶ್ ಬಂಡವಾಳ ಹೂಡಲಿದ್ದಾರೆ. ಮಾಲಾಶ್ರೀ ಮತ್ತು ರಾಮು ಪುತ್ರಿ ರಾಧನಾ ರಾಮ್ ಚಿತ್ರದ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. 

     

    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X