ಯಾವುದೇ ಸಿನಿಮಾ ಹಿನ್ನೆಲೆಯಿಲ್ಲದೆ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟ ಯಶ್ ಇಂದು ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಮಿಂಚುತ್ತಿದ್ದಾರೆ. ಅಭಿಮಾನಿಗಳಿಂದ ರಾಕಿಂಗ್ ಸ್ಟಾರ್ ಎಂಬ ಬಿರುದು ಪಡೆದುಕೊಂಡಿದ್ದಾರೆ. ಬಸ್ ಚಾಲಕನ ಮಗನಾಗಿರುವ ರಾಕಿಂಗ್ ಸ್ಟಾರ್ ಯಶ್, ಇಂದು ಕೆಜಿಎಫ್ ಚಿತ್ರದ ಮೂಲಕ ನ್ಯಾಷನಲ್ ಸ್ಟಾರ್ ಆಗಿ ಗುರುತಿಸಿಕೊಂಡಿದ್ದಾರೆ. ಆದರೆ, ನಟ ಯಶ್ ಒಂದೇ ದಿನದಲ್ಲಿ ಇಷ್ಟೆಲ್ಲಾ ಸಾಧಿಸಲು ಸಾಧ್ಯವಾಗಿಲ್ಲ. ತಮ್ಮ ಕಠಿಣ ಪರಿಶ್ರಮದಿಂದ ಸ್ಟಾರ್ ಆಗಿರುವ ಯಶ್ ಬಗ್ಗೆ ನಿಮಗೆ ಗೊತ್ತಿಲ್ಲದ ಕೆಲವು ಸಂಗತಿಗಳು ಇಲ್ಲಿವೆ.