twitter
    X
    Home ಚಲನಚಿತ್ರಗಳ ಒಳನೋಟ

    ಮುಂಬರುವ ಕನ್ನಡ ಪ್ಯಾನ್ ಇಂಡಿಯಾ ಸಿನಿಮಾಗಳ ಪಟ್ಟಿ ಇಲ್ಲಿದೆ.

    Author Sowmya Bairappa | Published: Sunday, October 16, 2022, 11:55 AM [IST]

    ಇತ್ತೀಚಿನ ದಿನಗಳಲ್ಲಿ ಕನ್ನಡ ಚಿತ್ರರಂಗದಲ್ಲಿ ನಿರ್ಮಾಣ ಆಗುತ್ತಿರುವ ಸಿನಿಮಾಗಳು ಪರಭಾಷೆಯ ಚಿತ್ರಗಳಿಗೆ ಪೈಪೋಟಿ ಕೊಡುತ್ತಿದೆ ಎನ್ನುವುದರಲ್ಲಿ ಅನುಮಾನವಿಲ್ಲ. ಉತ್ತಮ, ಗಟ್ಟಿತನದ ಕಥೆ, ಅದ್ಧೂರಿ ಮೇಕಿಂಗ್ ಜೊತೆಗೆ ಕನ್ನಡ ಸಿನಿಮಾಗಳು ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿವೆ. ದೇಶ ವಿದೇಶಗಳಲ್ಲಿಯೂ ಮೆಚ್ಚುಗೆ ಪಡೆಯುತ್ತಿವೆ. ಹಲವಾರು ಪ್ಯಾನ್​ ಇಂಡಿಯಾ ಸಿನಿಮಾಗಳು ಕನ್ನಡ ಸಿನಿಮಾರಂಗ ಹೆಮ್ಮೆಪಡುವ ರೀತಿ ಬಾಕ್ಸ್​ ಆಫೀಸ್​ನಲ್ಲಿ ಕಲಕ್ಷನ್ ಮಾಡಿವೆ. ಕೆಜಿಎಫ್​ ಸಿನಿಮಾದಿಂದ ಹಿಡಿದು ಸದ್ಯ ಅಬ್ಬರಿಸುತ್ತಿರುವ ಕಾಂತಾರ ಚಿತ್ರದ ವರೆಗೆ ಎಲ್ಲ ಸಿನಿಮಾಗಳು ಅದ್ಭುತ ಪ್ರತಿಕ್ರಿಯೆ ಪಡೆದಿವೆ. ಮುಂಬರುವ ಕನ್ನಡ ಪ್ಯಾನ್ ಇಂಡಿಯಾ ಸಿನಿಮಾಗಳ ಪಟ್ಟಿ ಇಲ್ಲಿದೆ.

    cover image
    ಕ್ರಾಂತಿ

    ಕ್ರಾಂತಿ

    1

    ಯಜಮಾನ ಚಿತ್ರದ ನಂತರ ಬಿ ಸುರೇಶ್ ಮತ್ತು ಶೈಲಜಾ ನಾಗ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ನಿರ್ಮಾಣ ಮಾಡುತ್ತಿರುವ ಚಿತ್ರ ಕ್ರಾಂತಿ. ದರ್ಶನ್ ಅವರ ಈ 55ನೇ ಚಿತ್ರವನ್ನು ವಿ ಹರಿಕೃಷ್ಣ ನಿರ್ದೇಶನ ಮಾಡುತ್ತಿದ್ದಾರೆ. ಸಿನಿಮಾದ ನಾಯಕಿಯಾಗಿ ರಚಿತಾ ರಾಮ್ ಕಾಣಿಸಿಕೊಂಡಿದ್ದಾರೆ. ಈ ಚಿತ್ರ ಕನ್ನಡ ಸೇರಿದಂತೆ ತೆಲುಗು, ತಮಿಳು, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲಿ ಮೂಡಿಬರುತ್ತಿದೆ. 

    ಕಬ್ಜ

    ಕಬ್ಜ

    2

    ಆರ್ ಚಂದ್ರು ನಿರ್ದೇಶನದಲ್ಲಿ ಮೂಡಿಬರಲಿರುವ ಕಬ್ಜ ಚಿತ್ರದಲ್ಲಿ ರಿಯಲ್ ಸ್ಟಾರ್ ಉಪೇಂದ್ರ ನಾಯಕನಾಗಿ ನಟಿಸಲಿದ್ದಾರೆ. ಚಿತ್ರವನ್ನು ಕನ್ನಡ ಮಾತ್ರವಲ್ಲದೇ ತೆಲಗು, ತಮಿಳು, ಮಲಯಾಳಂ, ಮರಾಠಿ, ಬಂಗಾಲಿ ಮತ್ತು ಹಿಂದಿ ಸೇರಿದಂತೆ ಏಳು ಭಾಷೆಗಳಲ್ಲಿ ಬಿಡುಗಡೆ ಮಾಡುವುದಾಗಿ ಚಿತ್ರತಂಡ ಘೋಷಿಸಿದೆ. ಚಿತ್ರದಲ್ಲಿ ಉಪೇಂದ್ರ ಲಾಂಗ್ ಹಿಡಿದು ಮತ್ತೊಂದು ಭೂಗತ ಲೋಕದ ಕಥೆಯನ್ನು ಅನಾವರಣ ಮಾಡುವ ನಿರೀಕ್ಷೆಯಿದೆ. ಕಿಚ್ಚ ಸುದೀಪ್ ಭಾರ್ಗವ್ ಭಕ್ಷಿ ಪಾತ್ರದಲ್ಲಿ ನಟಿಸುತ್ತಿದ್ದಾರೆ. 

    ಮಾರ್ಟಿನ್

    ಮಾರ್ಟಿನ್

    3

    ಅದ್ಧೂರಿ ಚಿತ್ರದ ಎಂಟು ವರ್ಷಗಳ ನಂತರ ಧ್ರುವ ಸರ್ಜಾ ಮತ್ತು ಎ.ಪಿ.ಅರ್ಜುನ್ ಒಂದಾಗುತ್ತಿದ್ದಾರೆ. 'ಮಾರ್ಟಿನ್' ಧ್ರುವ ಸರ್ಜಾರ ಆರನೇ ಚಿತ್ರವಾಗಿದೆ. ಈ ಚಿತ್ರಕ್ಕೆ ಉದಯ್ ಕೆ ಮೆಹತಾ ಬಂಡವಾಳ ಹೂಡಿದ್ದಾರೆ. ಈ ಚಿತ್ರ ಕನ್ನಡ ಸೇರಿದಂತೆ ತೆಲುಗು, ತಮಿಳು, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲಿ ಬಿಡುಗಡೆಯಾಗಲಿದೆ.  

     

    ಸಲಾರ್

    ಸಲಾರ್

    4

    ಪ್ರಶಾಂತ್ ನೀಲ್ ನಿರ್ದೇಶನ ಮತ್ತು ವಿಜಯ್ ಕಿರಂಗದೂರ್ ಅವರ ಹೊಂಬಾಳೆ ಫಿಲ್ಮ್ಸ್ ಬ್ಯಾನರ್​ನಲ್ಲಿ ಮೂಡಿಬರುತ್ತಿರುವ ಸಲಾರ್ ಚಿತ್ರದಲ್ಲಿ ಪ್ರಭಾಸ್ ನಾಯಕನಾಗಿ ನಟಿಸುತ್ತಿದ್ದಾರೆ. ಈ ಚಿತ್ರ ತೆಲುಗು, ಕನ್ನಡ, ಹಿಂದಿ, ತಮಿಳು ಮತ್ತು ಮಲಯಾಳಂ ಭಾಷೆಗಳಲ್ಲಿ ಮೂಡಿಬರಲಿದೆ. ಬಹುತೇಕ ಕೆಜೆಎಫ್ ತಾಂತ್ರಿಕ ವರ್ಗವೇ ಇರಲಿದೆ. ರವಿ ಬಸ್ರೂರ್ ಸಂಗೀತ ನೀಡುತ್ತಿದ್ದರೆ, ಭುವನ ಗೌಡ ಛಾಯಾಗ್ರಹಣವಿದೆ. ನಾಯಕಿಯಾಗಿ ಶೃತಿ ಹಾಸನ್ ಅಭಿನಯಿಸಲಿದ್ದಾರೆ. 

    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X