X
ಹೋಮ್ ಚಲನಚಿತ್ರಗಳ ಒಳನೋಟ

ಹಾಸ್ಟೆಲ್ ಹುಡುಗರ ಸಿನಿಮಾಗೆ ಭರ್ಜರಿ ರೆಸ್ಪಾನ್ಸ್: ನಾಲ್ಕನೇ ದಿನದ ಕಲೆಕ್ಷನ್ ರಿಪೋರ್ಟ್ ಇಲ್ಲಿದೆ.

Author Sowmya Bairappa | Published: Tuesday, July 25, 2023, 12:38 PM [IST]

ಕಳೆದವಾರ ಬಿಡುಗಡೆಯಾದ 500ಕ್ಕೂ ಹೆಚ್ಚು ರಂಗಭೂಮಿ ಕಲಾವಿದರು ಅಭಿನಯಿಸಿರುವ ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾ ರಾಜ್ಯಾದ್ಯಂತ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಸಂಪೂರ್ಣ ಹೊಸಬರೇ ಸೇರಿಕೊಂಡು ಮಾಡಿರುವ ಈ ಚಿತ್ರಕ್ಕೆ ಪ್ರೇಕ್ಷಕರಿಂದ ಉತ್ತಮ ರೆಸ್ಪಾನ್ಸ್ ಸಿಗುತ್ತಿದೆ. ಕನ್ನಡ ಚಿತ್ರರಂಗದ ತಾರೆಯರು ಕೂಡ ವಿಭಿನ್ನ ಪ್ರಯತ್ನದ ಈ ಸಿನಿಮಾವನ್ನು ನೋಡಿ ಮೆಚ್ಚಿಕೊಂಡಿದ್ದಾರೆ. ಇಲ್ಲಿ ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾದ ನಾಲ್ಕನೇ ದಿನದ ಕಲೆಕ್ಷನ್ ವಿವರ ಇಲ್ಲಿದೆ.


cover image

ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾ ಜುಲೈ 21ರಂದು ರಾಜ್ಯಾದ್ಯಂತ ಬಿಡುಗಡೆಯಾಗಿತ್ತು. ಬಿಡುಗಡೆಯಾದ ಮೊದಲ ದಿನ ಅಂದರೆ ಶುಕ್ರವಾರ 1.09 ಕೋಟಿ ರೂ ಗಳಿಕೆ ಕಂಡಿತ್ತು. ಹಾಗೆಯೇ ಎರಡನೇ ದಿನ ಅಂದರೆ ಶನಿವಾರ 2.1 ಕೋಟಿ ರೂ ಗಳಿಸಿದೆ.  ಈ ಮೂಲಕ ಮೂರು ದಿನದ ಗಳಿಕೆ ಸೇರಿ ಈ ಸಿನಿಮಾ 6 ಕೋಟಿ ರೂಪಾಯಿ ವರೆಗೂ ಕಲೆಕ್ಷನ್ ಮಾಡಿದೆ. 

 

ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾ ಬಿಡುಗಡೆಯಾದ ದಿನದಿಂದಲೂ ಕಲೆಕ್ಷನ್ ವಿಚಾರದಲ್ಲಿ ಸದ್ದು ಮಾಡುತ್ತಿದೆ. ವೀಕೆಂಡ್‌ನಲ್ಲಿ ಸಿನಿಮಾ ನೋಡುವವರ ಸಂಖ್ಯೆ ಗಣನೀಯ ಏರಿಕೆಯಾಗಿದ್ದರಿಂದ ಮೊದಲ ಎರಡು ದಿನಗಳಿಗಿಂತ ಭಾನುವಾರ ಹಾಸ್ಟೆಲ್ ಹುಡುಗರು ಸಿನಿಮಾದ ಕಲೆಕ್ಷನ್ ಹೆಚ್ಚಿದೆ. ಟ್ರೇಡ್ ಎಕ್ಸಪರ್ಟ್‌ಗಳ ಮಾಹಿತಿಯ ಪ್ರಕಾರ, ಈ ಸಿನಿಮಾ ಮೂರನೇ ದಿನ ಬರೋಬ್ಬರಿ ಮೂರು ಕೋಟಿ ರೂಪಾಯಿ ಕಲೆಕ್ಷನ್ ಮಾಡಲಾಗಿದೆ. 

ಹಾಸ್ಟೆಲ್ ಹುಡುಗರು ಸಿನಿಮಾದ ಸೋಮವಾರದ ಗಳಿಕೆ ಒಂದು ಕೋಟಿ ರೂ. ದಾಟಿದೆ. ಈ ಮೂಲಕ ಮೊದಲ ನಾಲ್ಕು ದಿನಗಳಲ್ಲಿ ಈ ಚಿತ್ರ ೭ ಕೋಟಿ ರೂಪಾಯಿ ಕೊಳ್ಳೆ ಹೊಡೆದಿದೆ. ಬಿಗ್ ಬಜೆಟ್‌ನ ಪ್ಯಾನ್ ಇಂಡಿಯಾ ಸಿನಿಮಾಗಳೇ ಫಸ್ಟ್ ವೀಕೆಂಡ್‌ನಲ್ಲಿ ಪ್ರೇಕ್ಷಕರ ಬರ ಎದುರಿಸುವ ಸಮಯದಲ್ಲಿ ಹೊಸಬರ ಸಿನಿಮಾ ಈ ಪಾಟಿ ಸದ್ದು ಮಾಡ್ತಿರೋದು ಕನ್ನಡ ಚಿತ್ರರಂಗಕ್ಕೆ ಸಂತಸ ತಂದಿದೆ. ಐದನೇ ದಿನವೂ ಈ ಸಿನಿಮಾಗೆ ಒಳ್ಳೆಯ ರೆಸ್ಪಾನ್ಸ್ ಸಿಕ್ಕಿದ್ದು, ಹೊಸಬರ ತಂಡ ಗೆಲುವಿನ ನಗೆ ಬೀರಿದೆ.

ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಈ ಸಿನಿಮಾದ ಟೈಟಲ್ ಪೋಸ್ಟರ್ ರಿಲೀಸ್ ಮಾಡಿದ್ದರು. ನಂತರದಲ್ಲಿ ಸ್ಯಾಂಡಲ್‌ವುಡ್ ಸ್ಟಾರ್ ನಟರು ಹಾಸ್ಟೆಲ್ ಹುಡುಗರಿಗೆ ಬೆಂಬಲ ಸೂಚಿಸುತ್ತಾ ಬಂದಿದ್ದರು. ರಿಷಬ್ ಶೆಟ್ಟಿ, ರಕ್ಷಿತ್ ಶೆಟ್ಟಿ, ಪವನ್ ಕುಮಾರ್, ದಿಗಂತ್, ರಮ್ಯಾ ಈ ಸಿನಿಮಾದಲ್ಲಿ ಅತಿಥಿಗಳಾಗಿ ಕಾಣಿಸಿಕೊಂಡಿದ್ದರು. ಇತ್ತೀಚೆಗೆ ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ಚಿತ್ರತಂಡವನ್ನು ಮನೆಗೆ ಕರೆದು ಸಕ್ಸಸ್ ಸಂಭ್ರಮದಲ್ಲಿ ಭಾಗಿಯಾಗಿದ್ದರು. ಸೋಮವಾರ ರಮೇಶ್ ಅರವಿಂದ್, ಶಿವಣ್ಣ, ಅಜಯ್, ರಾಜ್‌ ಬಿ ಶೆಟ್ಟಿ, ಸಪ್ತಮಿ ಗೌಡ, ಲವ್ಲಿ ಸ್ಟಾರ್ ಪ್ರೇಮ್ ಸೇರಿದಂತೆ ಹಲವರು ಚಿತ್ರ ವೀಕ್ಷಸಿ, ಹೊಸಬರ ಪ್ರಯತ್ನಕ್ಕೆ ಬಹುಪರಾಕ್ ಹೇಳಿದ್ದಾರೆ.  

 

ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾವನ್ನು ಮೊದಲು ರಾಜ್ಯಾದ್ಯಂತ 130 ಸ್ಕ್ರೀನ್‌ಗಳಲ್ಲಿ ಬಿಡುಗಡೆ ಮಾಡಲಾಗಿತ್ತು. ನಂತರ ಚಿತ್ರಕ್ಕೆ ಉತ್ತಮ ರೆಸ್ಪಾನ್ಸ್ ಸಿಕ್ಕ ತಕ್ಷಣ 10 ಸ್ಕ್ರೀನ್ ಹೆಚ್ಚಿಸಲಾಗಿತ್ತು. ಭಾನುವಾರ  ಸುಮಾರು 200 ಸ್ಕ್ರೀನ್‌ಗಳಿಗೆ ಏರಿಕೆ ಮಾಡಲಾಗಿತ್ತು. ಇದೀಗ ಹಾಸ್ಟೆಲ್ ಹುಡುಗರು ಸಿನಿಮಾಗೆ ಭರ್ಜರಿ ರೆಸ್ಪಾನ್ಸ್ ಸಿಗುತ್ತಿದ್ದು, ಸ್ಕ್ರೀನ್‌ಗಳ ಸಂಖ್ಯೆ ಕೂಡ ಹೆಚ್ಚುತ್ತಿದೆ.

 

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+