2023ರ ಆರಂಭದಿಂದ ಇಲ್ಲಿಯವರೆಗೂ ಕನ್ನಡದ ಯಾವ ಸಿನಿಮಾವೂ ಹಿಟ್ ಲಿಸ್ಟ್ ಸೇರಿಲ್ಲ. ಕಳೆದ ಏಳು ತಿಂಗಳಿನಿಂದ ಯಾವ ಚಿತ್ರವೂ ಗಲ್ಲಾಪೆಟ್ಟಿಯಲ್ಲಿ ಸದ್ದು ಮಾಡಲಿಲ್ಲ. ಇಂತಹ ಸಮಯದಲ್ಲಿ ತೆರೆಕಂಡ ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾ ಬಿಡುಗಡೆಯಾಗಿತ್ತು. ೫೦೦ಕ್ಕೂ ಹೆಚ್ಚು ರಂಗಭೂಮಿ ಕಲಾವಿದರು ಅಭಿನಯಿಸಿರುವ ಈ ಸಿನಿಮಾವನ್ನು ಸಿನಿರಸಿಕರು ಮೆಚ್ಚಿಕೊಂಡಿದ್ದಾರೆ. ಈ ಹಿಂದೆ ಸಣ್ಣ ಬಜೆಟ್‌ನ ಸಿನಿಮಾಗಳನ್ನು ನೋಡಲು ಜನ ಥಿಯೇಟರ್‌ಗೆ ಬರುತ್ತಿಲ್ಲ ಎಂಬ ಆರೋಪವಿತ್ತು. ಆದರೆ, ಸಂಪೂರ್ಣ ಹೊಸಬರೇ ಸೇರಿಕೊಂಡು ಮಾಡಿರುವ ಈ ಚಿತ್ರವನ್ನು ಪ್ರೇಕ್ಷಕರು ಮೆಚ್ಚಿಕೊಂಡಿದ್ದು, ಬಾಕ್ಸಾಫಿಸ್‌ನಲ್ಲೂ ಒಳ್ಳೆಯ ಸದ್ದು ಮಾಡುತ್ತಿದೆ. ಇಲ್ಲಿ ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾದ ಮೂರು ದಿನದ ಕಲೆಕ್ಷನ್ ವಿವರವನ್ನು ನೀಡಲಾಗಿದೆ.