ಚಲನಚಿತ್ರಗಳ ಒಳನೋಟ
ಕನ್ನಡ ಚಿತ್ರರಂಗದಲ್ಲಿ ಅನೇಕ ನಟರಿಯರು ಮಿಂಚಿ ಹೋಗಿದ್ದಾರೆ. ಈ ಪೈಕಿ ಕೆಲವರು ತಮ್ಮ ಅದ್ಭುತ ಅಭಿನಯದ ಮೂಲಕ ಕನ್ನಡಿಗರ ಮನಸ್ಸಿನಲ್ಲಿ ಶಾಶ್ವತ ಸ್ಥಾನ ಪಡೆದಿದ್ದಾರೆ. ಆದರೆ, ಹಲವು ಸೂಪರ್ ಹಿಟ್ ಸಿನಿಮಾಗಳನ್ನು ನೀಡಿದ್ದ ಕೆಲ ಸ್ಟಾರ್ ನಟಿಯರು ಸದ್ಯ ಬಣ್ಣದ ಲೋಕದಿಂದ ದೂರ ಉಳಿದಿದ್ದು, ಅವರ ಕಂಬ್ಯಾಕ್‌ಗಾಗಿ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಇಲ್ಲಿ ಅಂತಹ ನಟಿಯರ ಪಟ್ಟಿಯನ್ನು ನೀಡಲಾಗಿದೆ.