twitter
    X
    Home ಚಲನಚಿತ್ರಗಳ ಒಳನೋಟ

    ಬಿಗ್ ಬಾಸ್ ಮತ್ತು ಕನ್ನಡ ಸಿನಿಮಾಗಳಲ್ಲಿ ಶೆಟ್ಟಿ ಸ್ಟಾರ್​ಗಳದ್ದೆ ಮೇಲುಗೈ

    Author Sowmya Bairappa | Published: Tuesday, January 3, 2023, 12:17 PM [IST]

    ಕನ್ನಡ ಚಿತ್ರರಂಗದಲ್ಲಿ ಶೆಟ್ಟಿ ಸ್ಟಾರ್​ಗಳ ಸಂಖ್ಯೆ ಹೆಚ್ಚಾಗುತ್ತಿದೆ. ಈ ಹಿಂದೆ ಚಂದನ್ ಶೆಟ್ಟಿ, ಶೈನ್ ಶೆಟ್ಟಿ ಬಿಗ್ ಬಾಸ್ ಮನೆಯಲ್ಲಿ ಕಮಾಲ್ ಮಾಡಿದ್ದರು. ಇದೀಗ ಈ ಸಾಲಿಗೆ ರೋಪೇಶ್ ಶೆಟ್ಟಿ ಸಹ ಸೇರಿಕೊಂಡಿದ್ದಾರೆ. ಇನ್ನು ಕನ್ನಡ ಚಿತ್ರರಂಗದ ಪ್ರತಿಭಾನ್ವಿತ ನಿರ್ದೇಶಕ, ನಟರಾಗಿರುವ ರಿಷಬ್, ರಕ್ಷಿತ್ ಮತ್ತು ರಾಜ್ ಬಿ ಶೆಟ್ಟಿ ಕರಾವಳಿಯ ಅಪ್ಪಟ ಪ್ರತಿಭೆಗಳು. ತಮ್ಮ ವಿಶಿಷ್ಟ ಸಿನಿಮಾ ಹಾಗೂ ನಟನೆಯಿಂದ ಗುರುತಿಸಿಕೊಂಡಿದ್ದಾರೆ. ಈ ಮೂವರಿಗೂ ಯಾವುದೇ ಸಿನಿಮಾ ಬ್ಯಾಗ್ರೌಂಡ್ ಇಲ್ಲ. ಆದರೂ ಕೂಡ ತಮ್ಮ ಪ್ರತಿಭೆಯಿಂದಲೇ ಇಂದು ಉನ್ನತ ಸ್ಥಾನಕ್ಕೆ ಬಂದಿದ್ದಾರೆ. ಇವರು ಕನ್ನಡ ಚಿತ್ರರಂಗದ ತ್ರಿಬಲ್ ಆರ್ ಸ್ಟಾರ್‌ಗಳಾಗಿ ಬೆಳೆದಿದ್ದಾರೆ.

    cover image
    ರಿ‍ಷಭ್ ಶೆಟ್ಟಿ

    ರಿ‍ಷಭ್ ಶೆಟ್ಟಿ

    1

    ರಿ‍ಷಭ್ ಶೆಟ್ಟಿ ಕನ್ನಡ ಚಿತ್ರರಂಗದ ಪ್ರತಿಭಾನ್ವಿತ ನಿರ್ದೇಶಕ, ನಟ ಮತ್ತು ನಿರ್ಮಾಪಕರಾಗಿ ಗುರುತಿಸಿಕೊಂಡಿದ್ದಾರೆ. ಇವರ ಪ್ರತಿ ಸಿನಿಮಾದಲ್ಲೂ ಒಂದೂ ವಿಶೇಷತೆ ಇದ್ದೆ ಇರುತ್ತದೆ. ರಕ್ಷಿತ್ ಶೆಟ್ಟಿ ಅಭಿನಯದ ರಿಕ್ಕಿ ಚಿತ್ರದಿಂದ ಸಿನಿಮಾ ನಿರ್ದೇಶನಕ್ಕೆ ಇಳಿದರು. ಆದರೆ, ಈ ಸಿನಿಮಾ ಅಷ್ಟೇನೂ ಯಶಸ್ಸು ಕಾಣಲಿಲ್ಲ. ಇದಾದ ಬಳಿಕ ಕಿರಿಕ್ ಪಾರ್ಟಿ ಸಿನಿಮಾವನ್ನು ನಿರ್ದೇಶನ ಮಾಡಿದರು. ಈ ಸಿನಿಮಾ ಸೂಪರ್ ಹಿಟ್ ಆಯಿತು. ಈ ಸಿನಿಮಾ ಸಾಕಷ್ಟು ಯಶಸ್ಸು ತಂದು ಕೊಟ್ಟಿತು. ಇದಾದ ಬಳಿಕ  ಕೇರಳದ ಕಾಸರಗೋಡುವಿನಲ್ಲಿ ಕನ್ನಡ ಶಾಲೆಗಳ ಪರಿಸ್ಥಿತಿ ಕುರಿತು ಇವರು ನಿರ್ದೇಶಿಸಿದ ಚಿತ್ರ `ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು' ಚಿತ್ರ ಪ್ರೇಕ್ಷಕ ಮತ್ತು ವಿಮರ್ಶಕರಿಂದ ವ್ಯಾಪಕ ಮನ್ನಣೆ ಪಡೆಯಿತು. ನಂತರ ಬೆಲ್ ಬಾಟಮ್ ಸಿನಿಮಾ ಮೂಲಕ ನಾಯಕನಾಗಿಯೂ ಯಶಸ್ಸು ಗಳಿಸಿದರು.  ಇದೀಗ ಕಾಂತಾರಾ ಸಿನಿಮಾ ಮೂಲಕ ರಿಷಬ್ ಮತ್ತೊಂದು ಮೈಲಿಗಲ್ಲು ಸ್ಥಾಪಿಸಿದ್ದಾರೆ. 

    ರೂಪೇಶ್ ಶೆಟ್ಟಿ

    ರೂಪೇಶ್ ಶೆಟ್ಟಿ

    2

    ಮಂಗಳೂರಿನ ಪ್ರಸಿದ್ಧ ರೇಡಿಯೋ ಜಾಕಿ, ಗಾಯಕ ಮತ್ತು ಮಾಡೆಲ್ ಆಗಿರುವ ರೂಪೇಶ್ ಶೆಟ್ಟಿ, ಬಿಗ್ ಬಾಸ್ ಕನ್ನಡ ಓಟಿಟಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಓಟಿಟಿಯಲ್ಲಿ ಅತಿಹೆಚ್ಚು ವೋಟ್ ಪಡೆದ ರೂಪೇಶ್ ಶೆಟ್ಟಿಗೆ 5 ಲಕ್ಷ ರೂ. ಬಹುಮಾನ ನೀಡಲಾಗಿತ್ತು. ಓಟಿಟಿಯಿಂದ  ಬಿಗ್ ಬಾಸ್ ಕನ್ನಡ ಸೀಸನ್ 9ಗೆ ಎಂಟ್ರಿಕೊಟ್ಟ ರೂಪೇಶ್ ಶೆಟ್ಟಿ, ಇಲ್ಲಿಯೂ ಗೆಲುವು ತಮ್ಮದಾಗಿಸಿಕೊಂಡಿದ್ದರು. ರೂಪೇಶ್ ಶೆಟ್ಟಿ ಮೊದಲಿಗೆ ನಮ್ಮ ಟಿವಿ ವಾಹಿನಿಯಲ್ಲಿ  ನಿರೂಪಕನಾಗಿ ಕಾಣಿಸಿಕೊಂಡರು. ನಂತರ  'ದಿಬ್ಬಣ' ಎಂಬ ತುಳು ಚಿತ್ರದಲ್ಲಿ ಕಿರು ಪಾತ್ರದಲ್ಲಿ ನಟಿಸುವ ಮೂಲಕ ಚಿತ್ರರಂಗ ಪ್ರವೇಶಿಸಿದರು. ರೂಪೇಶ್ ತಮಿಳಿನ ಅತ್ಯಂತ ಪ್ರಸಿದ್ಧಿ ಹೊಂದಿರುವ ಕೊಲವೆರಿ ಡಿ ಎಂಬ ಹಾಡನ್ನು ಪುನರ್ ನಿರ್ದೇಶಿಸಿ ಹಾಡಿದ್ದಾರೆ.  

    ರಾಜ್ ಬಿ ಶೆಟ್ಟಿ

    ರಾಜ್ ಬಿ ಶೆಟ್ಟಿ

    3

    ಕನ್ನಡದ ಪ್ರತಿಭಾನ್ವಿತ ನಟ ಮತ್ತು ನಿರ್ದೇಶಕರಾಗಿ ಗುರುತಿಸಿಕೊಂಡಿರುವ ರಾಜ್ ಬಿ ಶೆಟ್ಟಿ  2017ರಲ್ಲಿ ತೆರೆಕಂಡ `ಒಂದು ಮೊಟ್ಟೆಯ ಕಥೆ' ಚಿತ್ರದ ಮೂಲಕ ಸ್ಯಾಂಡಲ್ವುಡ್ ಗೆ ಎಂಟ್ರಿ ಕೊಟ್ಟರು. ಇದಾದ ಬಳಿಕ ಕಥಾಸಂಗಮ, ಮಾಯಾಬಜಾರ್ ಸಿನಿಮಾಗಳನ್ನು ಮಾಡಿದರು. ಆದರೆ, ೨೦೨೨ರಲ್ಲಿ ತೆರೆಕಂಡ ಗರುಡ ಗಮನ ವೃಷಭ ವಾಹನ ಸಿನಿಮಾ ಅವರಿಗೆ ಸಾಕಷ್ಟು ಯಶಸ್ಸು ತಂದು ಕೊಟ್ಟಿತು.  ಹೀಗೂ ರೌಡಿಸಂ ಸಿನಿಮಾ ಮಾಡಬಹುದು ಎಂಬುದನ್ನು ಗರುಡ ಗಮನ ವೃಷಭ ವಾಹನ ಸಿನಿಮಾ ಮೂಲಕ  ರಾಜ್​ ಬಿ ಶೆಟ್ಟಿ ತೋರಿಸಿಕೊಟ್ಟಿದ್ದರು. ಈ ಸಿನಿಮಾದಲ್ಲಿ ರಿಷಬ್ ಹಾಗೂ ರಾಜ್ ಇಬ್ಬರೂ ಕೂಡ ಜಿದ್ದಿಗೆ ಬಿದ್ದವರಂತೆ ನಟಿಸಿದ್ದಾರೆ. ಈ ಸಿನಿಮಾಗೆ ರಾಜ್ಯದ ಮೂಲೆ ಮೂಲೆಯಿಂದ ಅಭೂತಪೂರ್ವ  ಪ್ರತಿಕ್ರಿಯೆ ವ್ಯಕ್ತವಾಗಿತ್ತು. 

    ಶೈನ್ ಶೆಟ್ಟಿ

    ಶೈನ್ ಶೆಟ್ಟಿ

    4

    ಮೂಲತಃ ಕುಂದಾಪುರದವರಾದ ಶೈನ್ ಶೆಟ್ಟಿ ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುತ್ತಿದ್ದ `ಲಕ್ಷ್ಮೀ ಬಾರಮ್ಮ' ಸೀರಿಯಲ್ ನಲ್ಲಿನ ಚಂದು ಪಾತ್ರದಿಂದ ಪ್ರಸಿದ್ಧಿ ಪಡೆದರು. ನಂತರ  2019-20ರಲ್ಲಿ ನಡೆದಿದ್ದ ಬಿಗ್ ಬಾಸ್‌‌ ಸೀಸನ್ 7ರಲ್ಲಿ ಭಾಗವಹಿಸಿದ್ದ ಶೈನ್ ಶೆಟ್ಟಿ ಗೆಲುವು ತಮ್ಮದಾಗಿಸಿಕೊಂಡಿದ್ದರು. ನಂತರ ಶೈನ್ ಶೆಟ್ಟಿ ಅವರಿಗೆ ಅನೇಕ ಅವಕಾಶಗಳು ಬಂದವು. ಸದ್ಯ ಹಲವು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ.  

     

    ರಕ್ಷಿತ್ ಶೆಟ್ಟಿ

    ರಕ್ಷಿತ್ ಶೆಟ್ಟಿ

    5

    ರಕ್ಷಿತ್ ಶೆಟ್ಟಿ 2010ರಲ್ಲಿ ತೆರೆಕಂಡ `ನಮ್ ಏರಿಯಾದಲ್ಲೊಂದು ದಿನ' ಚಿತ್ರದ ಮೂಲಕ ಸಿನಿಪ್ರವೇಶ ಮಾಡಿದರು. ಆದರೆ, ರಕ್ಷಿತ್ ಗೆ ಬ್ರೇಕ್ ನೀಡಿದ ಚಿತ್ರ ಸಿಂಪಲ್ಲಾಗ್ ಒಂದ್ ಲವ್ ಸ್ಟೋರಿ. ಕಡಿಮೆ ಬಜೆಟ್ಟಿನಲ್ಲಿ ಉತ್ತಮ ಕತೆಯೊಂದಿಗೆ ತಯಾರಾದ ಈ ಚಿತ್ರ ರಕ್ಷಿತ್ ಸಿನಿಜೀವನಕ್ಕೆ ಉತ್ತಮ ಅಡಿಪಾಯ ಹಾಕಿತು. ನಂತರ ಇವರು `ಉಳಿದವರು ಕಂಡಂತೆ ಚಿತ್ರದ ಮೂಲಕ ನಿರ್ದೇಶಕರಾದರು. ಅದುವರೆಗೆ ಕೇವಲ ಎಂಡು ಚಿತ್ರಗಳಲ್ಲಿ ನಟಿಸಿದ್ದರೂ ತಮ್ಮ ವಿಶಿಷ್ಟ ಚಿತ್ರಗಳ ಮೂಲಕ ರಕ್ಷಿತ್ ಕನ್ನಡದ ಭರವಸೆಯ ನಟ ಮತ್ತು ನಿರ್ದೇಶಕರಾಗಿ ಹೊರಹೊಮ್ಮಿದ್ದರು. ರಕ್ಷಿತ್ ಶೆಟ್ಟಿ ಕಿರಿಕ್ ಪಾರ್ಟಿ, `ಹಂಬಲ್ ಪೊಲಿಟಿಶನ್ ನೊಗರಾಜ್', 777 ಚಾರ್ಲಿ ಚಿತ್ರಗಳನ್ನು ನಿರ್ಮಿಸಿದ್ದಾರೆ. ಇತ್ತೀಚಿಗೆ ತೆರೆಕಂಡ ರಕ್ಷಿತ್ ಶೆಟ್ಟಿ ಅಭಿನಯದ 777 ಚಾರ್ಲಿ ಸಿನಿಮಾ ಉತ್ತಮ ಯಶಸ್ಸು ಗಳಿಸಿದೆ. ಈ ಮೂವರು ನಟರು ಕೂಡ ತಮ್ಮ ಸಿನಿಮಾ ಮೂಲಕ ನಮ್ಮ ನೆಲದ ಸಂಸ್ಕೃತಿಯನ್ನು ಎತ್ತಿ ಹಿಡಿಯುವಂತಹ ಕೆಲಸ ಮಾಡುತ್ತಿದ್ದಾರೆ. 

     

    ಚಂದನ್ ಶೆಟ್ಟಿ

    ಚಂದನ್ ಶೆಟ್ಟಿ

    6

    ಕನ್ನಡ ಚಿತ್ರರಂಗದ ಪ್ರಸಿದ್ಧ ಗಾಯಕ, ಸಂಗೀತ ನಿರ್ದೇಶಕ ಮತ್ತು ಗೀತರಚನಾಕಾರರಾಗಿ ಗುರುತಿಸಿಕೊಂಡಿರುವ ಚಂದನ್ ಶೆಟ್ಟಿ, 2017-18ರಲ್ಲಿ ನಡೆದಿದ್ದ ಬಿಗ್ ಬಾಸ್‌‌ ಸೀಸನ್ 5ರಲ್ಲಿ ಚಂದನ್ ಶೆಟ್ಟಿ ವಿಜೇತರಾಗಿದ್ದರು. 3 ಪೆಗ್ ಸಾಂಗ್ ಮೂಲಕ ಖ್ಯಾತಿ ಹೊಂದಿದ್ದ ಇವರು, ಬಿಗ್ ಬಾಸ್ ಮನೆ ಸೇರಿ ಮತ್ತಷ್ಟು ಫೇಮಸ್ ಆದರು. ಮನೆಯಿಂದ ಹೊರಬಂದ ನಂತರ ಸಾಕಷ್ಟು ಸಿನಿಮಾಗಳಿಗೆ ಇವರು ಹಾಡನ್ನು ಕಂಪೋಸ್ ಮಾಡಿದ್ದಾರೆ. ಇದರ ಜೊತೆಗೆ ಸಿನಿಮಾದಲ್ಲೂ ನಟಿಸುತ್ತಿದ್ದಾರೆ. 

     

    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X