X
ಹೋಮ್ ಚಲನಚಿತ್ರಗಳ ಒಳನೋಟ

2022ರಲ್ಲಿ ಗೂಗಲ್​ನಲ್ಲಿ ಅತಿಹೆಚ್ಚು ಹುಡುಕಲ್ಪಟ್ಟ ಕನ್ನಡದ ಟಾಪ್ 5 ಸಿನಿಮಾಗಳಿವು

Author Sowmya Bairappa | Published: Thursday, December 8, 2022, 05:03 PM [IST]

ಇತ್ತೀಚಿನ ದಿನಗಳಲ್ಲಿ ಕನ್ನಡ ಚಿತ್ರರಂಗದಲ್ಲಿ ನಿರ್ಮಾಣ ಆಗುತ್ತಿರುವ ಸಿನಿಮಾಗಳು ಪರಭಾಷೆಯ ಚಿತ್ರಗಳಿಗೆ ಪೈಪೋಟಿ ಕೊಡುತ್ತಿದೆ ಎನ್ನುವುದರಲ್ಲಿ ಅನುಮಾನವಿಲ್ಲ. 2022ರಲ್ಲಿ ತೆರೆಕಂಡ ಕನ್ನಡದ ಸಿನಿಮಾಗಳು ಬೇರೆ ಚಿತ್ರರಂಗದವರು ನಮ್ಮತ್ತ ನೋಡುವಂತೆ ಮಾಡಿವೆ. ಹೀಗಾಗಿ ಕನ್ನಡದ ನಟ-ನಟಿಯರಿಗೆ ಬೇಡಿಕೆಯೂ ಹೆಚ್ಚಾಗಿದೆ. ಕೆಜಿಎಫ್ ನಿಂದ ಹಿಡಿದು ಕಾಂತರಾದವರೆಗೆ ಎಲ್ಲ ಸಿನಿಮಾಗಳು ಹಿಟ್ ಆಗಿವೆ. ಹೀಗಾಗಿ ಅನೇಕರು ಕನ್ನಡ ಸಿನಿಮಾಗಳ ಬಗ್ಗೆ ಗೂಗಲ್​ನಲ್ಲಿ ಸರ್ಚ್ ಮಾಡಿದ್ದಾರೆ. ಹಾಗಾದರೆ 2022ರಲ್ಲಿ ಗೂಗಲ್​ನಲ್ಲಿ ಅತಿಹೆಚ್ಚು ಹುಡುಕಲ್ಪಟ್ಟ ಕನ್ನಡದ ಟಾಪ್ 5 ಸಿನಿಮಾಗಳು ಯಾವವು ಎಂಬ ಮಾಹಿತಿ ಇಲ್ಲಿದೆ.


cover image
ಕೆಜಿಎಫ್: ಚಾಪ್ಟರ್ 2
1

ಪ್ರಶಾಂತ್ ನೀಲ್ ನಿರ್ದೇಶನದ ಕೆಜಿಎಫ್-2 ಸಿನಿಮಾ 2022 ಏಪ್ರಿಲ್ 14ರಂದು  ಕನ್ನಡ, ಹಿಂದಿ, ತಮಿಳು, ತೆಲುಗು ಮತ್ತು ಮಲಯಾಳಂ ಸೇರಿದಂತೆ ಒಟ್ಟು 5 ಭಾಷೆಗಳಲ್ಲಿ ಈ ಸಿನಿಮಾ ಬಿಡುಗಡೆಯಾಗಿತ್ತು. ಇದು ಕೆಜಿಎಫ್ ಚಾಪ್ಟರ್ 1ನ ಮುಂದುವರೆದ ಭಾಗ.  ರಾಕಿ ಭಾಯ್ ಯಶ್, ಶ್ರೀನಿಧಿ ಶೆಟ್ಟಿ, ಸಂಜಯ್ ದತ್, ರವೀನಾ ಟಂಡನ್ ಅಭಿನಯದ ಕೆಜಿಎಫ್ ಚಾಪ್ಟರ್ 2 ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸಿತ್ತು. ಕರ್ನಾಟಕದಲ್ಲಿ ಮಾತ್ರವಲ್ಲ, ಇಡೀ ಇಂಡಿಯನ್ ಬಾಕ್ಸ್ ಆಫೀಸ್ ನಡುಗುವಂತೆ ಮಾಡಿತ್ತು. ಬಾಲಿವುಡ್ ಅಲ್ಲೂ ಸಖತ್ ಸೌಂಡ್ ಮಾಡಿತ್ತು.  

 

ಕಾಂತಾರ
2

ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ಕಾಂತಾರ ಸಿನಿಮಾ ಸೆಪ್ಟೆಂಬರ್ ೩೦ರಂದು ರಿಲೀಸ್ ಆಗಿ ಕನ್ನಡಿಗರ ಮನಗೆದ್ದಿತ್ತು. ಕನ್ನಡ ವರ್ಷನ್‌ನಿಂದಲೇ ವಿಶ್ವಾದ್ಯಂತ ಸಿನಿಪ್ರಿಯರ ಪ್ರೀತಿಯನ್ನು ಸಂಪಾದಿಸಿತ್ತು.   ಈ ಮಧ್ಯೆ ಹೊರರಾಜ್ಯಗಳಿಂದಲೂ ಬೇಡಿಕೆ ಹೆಚ್ಚಾದ ಕಾರಣ, ತೆಲುಗು, ತಮಿಳು, ಹಿಂದಿ ಮತ್ತು ಮಲಯಾಳಂ ಭಾಷೆಗೆ 'ಕಾಂತಾರ' ಚಿತ್ರವನ್ನು ಡಬ್ ಮಾಡಲಾಗಿತ್ತು.  ಕಾಂತಾರದ ಹಿಂದಿ ವರ್ಷನ್‌ ಅಕ್ಟೋಬರ್ 14ರಂದೇ ತೆರೆಕಂಡಿತ್ತು. ಕಾಂತಾರ ಸಿನಿಮಾ ನೋಡಿ ಬಾಲಿವುಡ್ ಫಿಲ್ಮ್ ಮೇಕರ್ಸ್ ಕೂಡ ದಂಗಾಗಿದ್ದು,  ಬಾಲಿವುಡ್ ಬಾಕ್ಸಾಫೀಸ್‌ನಲ್ಲಿ ಜಾದೂ ಮಾಡಿದೆ.  

ವಿಕ್ರಾಂತ್ ರೋಣ
3

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ವಿಕ್ರಾಂತ್ ರೋಣ ಸಿನಿಮಾವನ್ನು ಅನೂಪ್ ಭಂಡಾರಿಯವರು ನಿರ್ದೇಶನ ಮಾಡಿದ್ದರು. ಈ ಚಿತ್ರದಲ್ಲಿ ಸುದೀಪ್ ಪೋಲಿಸ್ ಅಧಿಕಾರಿ ಪಾತ್ರದಲ್ಲಿ ನಟಿಸಿದ್ದು, ಜಾಕ್ವೆಲಿನ್ ಫೆರ್ನಾಂಡಿಸ್ ಈ ಸಿನಿಮಾದ 'ರಾ ರಾ ರಕ್ಕಮ್ಮ' ಹಾಡಿಗೆ ಹೆಜ್ಜೆ ಹಾಕಿದ್ದರು. ದುಬೈನ ಬುರ್ಜ್ ಖಲೀಫಾದಲ್ಲಿ  ಚಿತ್ರದ ಟೀಸರ್ ರಿಲೀಸ್ ಮಾಡಲಾಗಿತ್ತು.  3D, 2Dಯಲ್ಲಿ ಕೂಡ ಚಿತ್ರ ರಿಲೀಸ್ ಆಗಿತ್ತು. ಪ್ರಪಂಚದಾದ್ಯಂತ 1600ಕ್ಕೂ ಹೆಚ್ಚು ಸ್ಕ್ರೀನ್‌ಗಳಲ್ಲಿ ಈ ಸಿನಿಮಾ ತೆರೆಕಂಡಿತ್ತು. ವಿಕ್ರಾಂತ್ ರೋಣ ಮೊದಲ ದಿನವೇ 35 ಕೋಟಿ ರೂಪಾಯಿ ಗಳಿಕೆ ಕಂಡಿತ್ತು. ವಿಕ್ರಾಂತ್ ರೋಣ ಸಿನಿಮಾ 2022ರ ಜುಲೈ 28ರಂದು ಬಿಡುಗಡೆಯಾಗಿತ್ತು. 

 

777 ಚಾರ್ಲಿ
4

ರಕ್ಷಿತ್ ಶೆಟ್ಟಿ ಅಭಿನಯದ 777 ಚಾರ್ಲಿ ಸಿನಿಮಾ ಕೂಡ ಕನ್ನಡ, ತಮಿಳು, ತೆಲುಗು, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲಿ ಬಿಡುಗಡೆಯಾಗಿತ್ತು. ಪರಂವಃ ಸ್ಟುಡಿಯೋಸ್ ನಿರ್ಮಾಣದಲ್ಲಿ ಮೂಡಿಬಂದಿದ್ದ ಈ ಸಿನಿಮಾಗೆ ಪ್ರೇಕ್ಷಕರಿಂದ ಒಳ್ಳೆಯ ಪ್ರತಿಕ್ರಿಯೆ ದೊರೆತಿತ್ತು. ಐದು ಭಾಷೆಗಳಲ್ಲೂ ಜನರು ಈ ಸಿನಿಮಾ ಮೆಚ್ಚಿಕೊಂಡಿದ್ದರು. 777 ಚಾರ್ಲಿ  ಒಟಿಟಿ ಹಾಗೂ ಥಿಯೇಟರ್ ಎರಡೂ ಸೇರಿಸಿ  150 ಕೋಟಿ ರೂ. ಕಲೆಕ್ಷನ್ ಮಾಡಿತ್ತು. 777 ಚಾರ್ಲಿ ಚಿತ್ರ 2022ರ ಜೂನ್ 10ರಂದು ಬಿಡುಗಡೆಯಾಗಿತ್ತು. 

 

ಕೆಜಿಎಫ್
5

ಪ್ರಶಾಂತ್ ನೀಲ್ ನಿರ್ದೇಶನದ, ನಟ ಯಶ್ ಅಭಿನಯದ ಕೆಜಿಎಫ್ ಚಾಪ್ಟರ್ 1 ಸಿನಿಮಾ (2018) ಐದು ಭಾಷೆಯಲ್ಲಿ ತೆರೆಕಂಡಿತ್ತು. ಕನ್ನಡ, ತೆಲುಗು, ಹಿಂದಿ, ತಮಿಳು ಹಾಗೂ ಮಲಯಾಳಂ ಭಾಷೆಯಲ್ಲಿ ಬಿಡುಗಡೆಯಾಗಿದ್ದ ಚಿತ್ರ ಒಟ್ಟು 250 ಕೋಟಿ ಗಳಿಸಿತ್ತು. ಕನ್ನಡ ವರ್ಷನ್ ಸಿನಿಮಾ 100 ಕೋಟಿ ಬಾಚಿಕೊಂಡಿತ್ತು. ಬೇರೆ ಚಿತ್ರರಂಗದ ಸ್ಟಾರ್ ನಟರು ಕನ್ನಡದತ್ತ ತಿರುಗಿ ನೋಡುವಂತೆ ಮಾಡಿದ ಸಿನಿಮಾ ಇದು. 

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+